ಗುರುವಾರ, ಜುಲೈ 24, 2025
ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜು.24(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಶಂಕರಬAಡೆಯ ತಿಮ್ಮಾನಗೌಡ ಹೊಲದ ಹತ್ತಿರದ 15 ಡಿಪಿ ಕಾಲುವೆ ಡ್ರಾಪ್ ಹತ್ತಿರ ಸುಮಾರು 55 ಮತ್ತು 60 ವರ್ಷದ ಅನಾಮಧೇಯ ವ್ಯಕ್ತಿಯು ಶವ ತೇಲಿಕೊಂಡು ಬಂದಿದ್ದು ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5.4 ಅಡಿ, ದುಂಡು ಮುಖ, ಕೆಂಪು ಮೈಬಣ್ಣ ಹೊಂದಿದ್ದು, ತಲೆಯಲ್ಲಿ 4-5 ಇಂಚು ಕಪ್ಪುಬಿಳಿ ಮಿಶ್ರಿತ ಕೂದಲು ಮತ್ತು ಮುಖದಲ್ಲಿ ಬಿಳಿ ಗಡ್ಡ, ಮೀಸೆ ಹೊಂದಿರುತ್ತಾನೆ. ಮೃತನ ಮೈಮೇಲೆ ಬಿಳಿ ಗೆರೆಗಳುಳ್ಳ ಅರ್ಧ ತೋಳಿನ ಟಿ ಶರ್ಟ್ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ