ಶುಕ್ರವಾರ, ಜುಲೈ 25, 2025
ಸರ್ಕಾರಿ ಆದರ್ಶ ವಿದ್ಯಾಲಯ: ಖಾಲಿಯಿರುವ ಸೀಟ್‌ಗಳ ಭರ್ತಿಯ ಫಲಿತಾಂಶ ಪ್ರಕಟ
ಬಳ್ಳಾರಿ,ಜು.25(ಕರ್ನಾಟಕ ವಾರ್ತೆ):
ನಗರದ ಈದ್ಗಾ ರಸ್ತೆಯ ಹಿರಾಳ್ ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಪ್ರಸ್ತಕ ಸಾಲಿಗೆ 7, 8 ಮತ್ತು 9 ನೇ ತರಗತಿಯಲ್ಲಿ ಖಾಲಿಯಿರುವ ಸೀಟ್ ಗಳಿಗಾಗಿ ಡಯಟ್ ನಲ್ಲಿ ಇತ್ತೀಚೆಗೆ ಪ್ರವೇಶ ಪರೀಕ್ಷೆ ನಡೆಸಿದ್ದು, ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಾಲೆಯ ಮುಖ್ಯಗುರುಗಳು ತಿಳಿಸಿದ್ದಾರೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ಜುಲೈ 29 ರೊಳಗಾಗಿ ದಾಖಲಾತಿ ಮಾಡಿಸಿಕೊಳ್ಳಬೇಕು.
*ಬೇಕಾದ ದಾಖಲೆ:*
ಪ್ರವೇಶಾತಿ ಅರ್ಜಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್‌ಪಾಸ್ ಪುಸ್ತಕ, ತಂದೆ-ತಾಯಿಯ ಆಧಾರ್ ಕಾರ್ಡ್ ಪ್ರತಿ, ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ, ವಿದ್ಯಾರ್ಥಿಯ 4 ಭಾವಚಿತ್ರ, ಬೇರೆ ತಾಲ್ಲೂಕಿನ ವಿದ್ಯಾರ್ಥಿಗಳಾಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ, 5ನೇ ತರಗತಿಯ ಮೂಲ ಅಂಕಪಟ್ಟಿಯ 2 ಜೆರಾಕ್ಸ್, ಪ್ರವೇಶ ಪರೀಕ್ಷೆಯ ಹಾಲ್ ಟಿಕೆಟ್, ವಿದ್ಯಾರ್ಥಿಯ ಆರೋಗ್ಯ ಕಾರ್ಡ್, ಪಾಲಕರ ಮೊಬೈಲ್ ಸಂಖ್ಯೆ, ಪಡಿತರ ಪುಸ್ತಕದ ಜೆರಾಕ್ಸ್ ಪ್ರತಿ, ವಿದ್ಯಾರ್ಥಿನಿಯಾಗಿದ್ದಲ್ಲಿ ಭಾಗ್ಯಲಕ್ಷಿö್ಮ ಬಾಂಡ್ ಪ್ರತಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಈದ್ಗಾ ರಸ್ತೆಯ ಹೀರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯ ಅಥವಾ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ