ಮಂಗಳವಾರ, ಜುಲೈ 8, 2025

ಕಾಣೆಯಾದ ಬಾಲಕ ಪತ್ತೆಗೆ ಮನವಿ

ಬಳ್ಳಾರಿ,ಜು.08(ಕರ್ನಾಟಕ ವಾರ್ತೆ): ನಗರದ ದೇವಿನಗರ ಬಡಾವಣೆಯ 1ನೇ ಕ್ರಾಸ್‌ನ ಸರ್ಕಾರಿ ವೀಕ್ಷಣಾಲಯದಲ್ಲಿ ದಾಖಲಾದ ಮಾರುತಿ ಎನ್ನುವ 16 ವರ್ಷದ ಬಾಲಕ ಜು.06 ರಂದು ವೀಕ್ಷಣಾಲಯದಿಂದ ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಚಹರೆ: ಅಂದಾಜು 5.7 ಅಡಿ ಎತ್ತರ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬು ತೋಳಿನ ಟಿ-ಶರ್ಟ್, ಬೂದಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಬಾಲಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ