ಬುಧವಾರ, ಜುಲೈ 23, 2025
ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ,ಜು.23(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ 01 ಅಂಗನವಾಡಿ ಕಾರ್ಯಕರ್ತೆ ಮತ್ತು 05 ಅಂಗನವಾಡಿ ಸಹಾಯಕಿಯರ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.
ಆಗಸ್ಟ್ 08 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ. ಆಕ್ಷೇಪಣೆಗಳನ್ನು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ