ಶುಕ್ರವಾರ, ಜುಲೈ 18, 2025

ಒಣ ಮೆಣಸಿನಕಾಯಿ ಮಾರಾಟಕ್ಕೆ ರೈತರಿಂದ ನೋಂದಣಿಗೆ ಆಹ್ವಾನ

ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣ ಮೆಣಸಿನಕಾಯಿ ಮಾರಾಟ ಮಾಡಲು ಜಿಲ್ಲೆಯ ರೈತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 2024-25 ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣ ಮೆಣಸಿನಕಾಯಿ ಮಾರುಕಟ್ಟೆ ಮಧ್ಯಪ್ರವೇಶ ದರ ರೂ.10,589.20 (ಪ್ರತಿ ಕ್ವಿಂಟಾಲ್) ನಿಗದಿಪಡಿಸಿದೆ. ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಾರ್ಯಾಲಯವು ನೋಂದಣಿ ಸ್ಥಳವಾಗಿದೆ. ರೈತರು ಒಣ ಮೆಣಸಿನಕಾಯಿ ಉತ್ಪನ್ನವನ್ನು ಕಡ್ಡಾಯವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇ-ಟೆಂಡರ್ ಮೂಲಕ ಮಾರಾಟ ಮಾಡಿದಾಗ ಮಾತ್ರ ಯೋಜನೆ ಅನ್ವಯವಾಗಲಿದೆ. ನೋಂದಣಿ ಮಾಡಿಕೊಳ್ಳಲು ಪ್ರಕಟಗೊಂಡ ದಿನದಿಂದ 15 ದಿನಗಳ ವರೆಗೆ ಕಾಲಾವಕಾಶ ಇರುತ್ತದೆ. ಇ-ಆಡಳಿತ ಇಲಾಖೆಯ ಫ್ರೂಟ್ಸ್ ತಂತ್ರಾAಶದಲ್ಲಿ ರೈತರು ನೀಡಿರುವ ವಿವರಗಳನ್ನು ಭೂಮಿ, ಯುಐಡಿಎಐ ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊAದಿಗೆ ಹೊಂದಾಣಿಕೆ ಮಾಡಿ, ಅರ್ಹ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಯುಎಂಪಿ ತಂತ್ರಾAಶದ ಇ-ಟೆಂಡರ್ ಮೂಲಕ ಮಾರಾಟ ಪ್ರಕ್ರಿಯೆ ಕೈಗೊಳ್ಳಲಾಗುವುದು. ಈ ಯೋಜನೆಯಡಿ ಪ್ರತಿ ಎಕರೆಗೆ 15 ಕ್ವಿಂಟಾಲ್ ಇಳುವರಿಯಂತೆ ಪ್ರತಿ ರೈತರಿಂದ ಗರಿಷ್ಠ 30 ಕ್ವಿಂಟಾಲ್ ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತ ನೀಡಲಾಗುವುದು. ಬಳ್ಳಾರಿ ಜಿಲ್ಲೆಯಲ್ಲಿ ಯಾವ ಮಾರುಕಟ್ಟೆಯಲ್ಲಿಯೂ ಒಣ ಮೆಣಸಿನಕಾಯಿ ಹುಟ್ಟುವಳಿಗೆ ಇ-ಟೆಂಡರ್ ಪದ್ಧತಿ ಜಾರಿಯಲ್ಲಿಲ್ಲದಿರುವುದರಿಂದ ಜಿಲ್ಲೆಯ ರೈತರು ಎನ್‌ಇಎಂಎಲ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದ ಯಾವುದೇ ಇ-ಟೆಂಡರ್ ಪದ್ಧತಿ ಜಾರಿಯಲ್ಲಿರುವ ವಿವಿಧ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಒಣ ಮೆಣಸಿನಕಾಯಿ ಮಾರಾಟ ಮಾಡುವ ಸಂದರ್ಭದಲ್ಲಿ ಆನ್ ಲೈನ್ ನಲ್ಲಿ ನೋಂದಣಿ ಮಾಡಿದ ರಸೀದಿ ಪಡೆದಿದ್ದಲ್ಲಿ ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹಾಗಾಗಿ ರೈತರು ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್, ಪಹಣಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊAಡು ಒಣ ಮೆಣಸಿನಕಾಯಿ ಮಾರಾಟ ಮಾಡಿ ಸರ್ಕಾರದ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-250435 ಗೆ ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ