ಮಂಗಳವಾರ, ಜುಲೈ 22, 2025

ಬಳ್ಳಾರಿ: ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ನಗರದ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೋಮವಾರ ಭೇಟಿ ನೀಡಿ ಶಾಲೆಯ ಸ್ಥಿತಿ-ಗತಿ ಪರಿಶೀಲನೆ ನಡೆಸಿದರು. ಶಾಲೆಯ 7, 9 ಮತ್ತು 10ನೇ ತರಗತಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಪರಿಶೀಲಿಸಿ ಮಾರ್ಗದರ್ಶನ ನೀಡಿದರು. ಬಳಿಕ ಶಾಲೆಯ ಕಾಂಪೌAಡ್ ಸಮಸ್ಯೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿದರು. ಇದೇ ವೇಳೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಸತ್ಯನಾರಾಯಣ ಸೇರಿದಂತೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಇತರರಿದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ