ಶನಿವಾರ, ಜುಲೈ 19, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಜು.19(ಕರ್ನಾಟಕ ವಾರ್ತೆ):
ಕುಡಿತಿನಿಯ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಮ್ಮನಹಳ್ಳಿ ಗ್ರಾಮದ ನಿವಾಸಿಯಾದ ಜನಾರ್ಧನ ವೈ.ಎನ್ನುವ 23 ವರ್ಷದ ವ್ಯಕ್ತಿ 2025 ರ ಏ.09 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಕುಡಿತಿನಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ: ಎತ್ತರ 5.4 ಅಡಿ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಗಡ್ಡ ಬಿಟ್ಟಿರುತ್ತಾನೆೆ. ಕಾಣೆಯಾದ ಸಂರ್ದಭದಲ್ಲಿ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣ ಪ್ಯಾಂಟ್ ಧರಿಸಿರುತ್ತಾನೆ, ಕನ್ನಡ ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ದೂ.08393263433, ಪಿಎಸ್‌ಐ ದೂ. 08392258400, ಬಳ್ಳಾರಿ ಪೊಲೀಸ್ ಕಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಅವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ