ಶನಿವಾರ, ಜುಲೈ 19, 2025
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.19(ಕರ್ನಾಟಕ ವಾರ್ತೆ):
ಪ್ರಸ್ತಕ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ ಹಾಗೂ ಸಮಾನಾಂತರ ಕೋರ್ಸು ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ತಿಳಿಸಿದ್ದಾರೆ.
ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶ https://shp.karnataka.gov.in ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.
ಮಾಹಿತಿಗಾಗಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಮೊ.9611342523 ಹಾಗೂ ತಾಲೂಕು ಮಾಹಿತಿ ಕೇಂದ್ರ: ಬಳ್ಳಾರಿ-8310321101, ಸಂಡೂರು-9036925966/ 8660575061, ಸಿರುಗುಪ್ಪ-9148889975 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಮತ್ತು ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ