ಮಂಗಳವಾರ, ಜುಲೈ 1, 2025
ಬಳ್ಳಾರಿ: ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ
ಬಳ್ಳಾರಿ,ಜು.01(ಕರ್ನಾಟಕ ವಾರ್ತೆ):
ಬಳ್ಳಾರಿ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ ‘ಜನ ಸ್ವರಾಜ್ಯ ಪಾರ್ಟಿ’ಯ ಅಧಿಕೃತ ಪ್ರತಿನಿಧಿಯು ಇಚ್ಛಿಸಿದಲ್ಲಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ, ಬೆಂಗಳೂರು ಇವರಿಗೆ 2025ರ ಜುಲೈ 18 ರೊಳಗಾಗಿ ತಮ್ಮ ಲಿಖಿತ ಮನವಿಯನ್ನು ಸಲ್ಲಿಸಬಹುದು.
ಪಕ್ಷದ ಪರವಾಗಿ ಮನವಿಯನ್ನು ಸಲ್ಲಿಸುವವರು ಪಕ್ಷದ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳೊಂದಿಗೆ ಮನವಿಯನ್ನು ಸಲ್ಲಿಸಬೇಕು.
ಈ ರಾಜಕೀಯ ಪಕ್ಷದ ವಿಚಾರಣೆಯನ್ನು ಜುಲೈ 18 ರಂದು ನಿಗದಿಪಡಿಸಲಾಗಿದ್ದು, ವಿಚಾರಣೆಗೆ ಪಕ್ಷದ ಮುಖ್ಯಸ್ಥರು/ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಬೇಕು.
ಒಂದು ವೇಳೆ ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಮನವಿ ಸ್ವೀಕೃತವಾಗದೇ ಇದ್ದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ