ಸೋಮವಾರ, ಜುಲೈ 28, 2025
ಅನಾಮಧೇಯ ಮೃತ ದೇಹ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜು.28(ಕರ್ನಾಟಕ ವಾರ್ತೆ):
ನಗರದ ರೈಲ್ವೇ ಪೊಲೀಸ್ ಠಾಣೆಯ ವ್ಯಾಪ್ತಿಯ ಬಳ್ಳಾರಿ ಮತ್ತು ಗುಂತಕಲ್ಲು ಯಾರ್ಡ್ ರೈಲ್ವೇ ಕಿ.ಮೀ ನಂ 208/13 ಹತ್ತಿರ ಆಫ್‌ಲೈನ್ ರೈಲು ಹಳಿಯ ಮೇಲೆ ಸುಮಾರು 45-50 ವಷÀÀðದ ಅನಾಮದೇಯ ವ್ಯಕ್ತಿಯು ಯಾವುದೋ ಕಾರಣದಿಂದ ರೈಲು ಹಳಿಯ ಮೇಲೆ ಅಡ್ಡಲಾಗಿ ಮಲಗಿ ಜು.28 ರಂದು ಆತ್ಮಹತ್ಯೆಯಿಂದ ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ-ನೀರೀಕ್ಷಕರು ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5.8 ಅಡಿ, ಕೋಲುಮುಖ, ಗೋದಿ ಮೈಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ಮೃತನ ತಲೆಯಲ್ಲಿ 01 ಇಂಚು ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು ಮತ್ತು ಮುಖದಲ್ಲಿ 1/2 ಇಂಚು ಕಪ್ಪು ಮಿಶ್ರಿತ ಬಿಳಿ ಗಡ್ಡ, ಮೀಸೆ ಹೊಂದಿರುತ್ತಾನೆ.
ಮೃತನ ಮೈಮೇಲೆ ತಿಳಿ ಗುಲಾಬಿ ಬಣ್ಣದ ಆಫ್ ಟಿ-ಶರ್ಟ್, ನೀಲಿ ಬಣ್ಣದ ಹೂವಿನ ಚಿತ್ರವುಳ್ಳ ಲುಂಗಿ ಧರಿಸಿರುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಉಪನಿರೀಕ್ಷಕರ ಮೊ.9480802131, ರೈಲ್ವೇ ಪೊಲೀಸ್ ವೃತ್ತ ರಾಯಚೂರು ಮೊ.9480800471 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ