ಗುರುವಾರ, ಜುಲೈ 24, 2025

ಮಹಾನಗರ ಪಾಲಿಕೆ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ಬಳ್ಳಾರಿ,24(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ 121 ಸಂಖ್ಯಾತಿರಿಕ್ತ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ಆಯ್ಕೆ ಪಟ್ಟಿಯನ್ನು ಮಹಾನಗರ ಪಾಲಿಕೆ ಕಚೇರಿಯ ಸೂಚನಾ ಫಲಕ ಹಾಗೂ ಪಾಲಿಕೆಯ ವೆಬ್‌ಸೈಟ್ www.ballaricity.mrc.gov.in ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿದ್ದು, ಲಿಖಿತವಾಗಿ ಸೂಕ್ತ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಪೌರಕಾರ್ಮಿಕ ನೇರ ನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಆದ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ