ಶನಿವಾರ, ಆಗಸ್ಟ್ 30, 2025

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ | ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (ಖಚಿಣioಟಿಚಿಟisಚಿಣioಟಿ) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು ಆ.31 ರಿಂದ ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ. ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್ ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್ ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು. ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇ.2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು. ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ. ------------

ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ: ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನಿರ್ದೇಶನ ಮೇರೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಂಡೂರು ತಾಲ್ಲೂಕಿನ ತೋರಣಗಲ್ಲು ರೈಲ್ವೇ ನಿಲ್ದಾಣ, ಜಿಂದಾಲ್ ಮೊದಲನೇ ಗೇಟ್ ಮಂಭಾಗ ಹಾಗೂ ಹೊಸಪೇಟೆ ಬೈಪಾಸ್ ರಸ್ತೆಯ ಮುಂತಾದ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಮೂಲಕ ಅಕಸ್ಮಿಕ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ. ತೋರಣಗಲ್ ನ ನಾಡಕಚೇರಿಯಲ್ಲಿ ಶನಿವಾರ ಸಂಡೂರು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಈ ಬಾಲಕಾರ್ಮಿಕರ ಆಕಸ್ಮಿಕ ದಾಳಿ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ವಶಕ್ಕೆ ಪಡೆದುಕೊಂಡು ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಳ್ಳಲಾಯಿತು. ಆ ಮಕ್ಕಳನ್ನು ಶಿಕ್ಷಣ ಇಲಾಖೆ ಹಾಗೂ ಪೋಷಕರ ವಶಕ್ಕೆ ಒಪ್ಪಿಸಲಾಯಿತು. ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಕುರಿತು ಜಾಗೃತಿ ಜಾಗೃತಿ ಮೂಡಿಸಲಾಯಿತು. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಸಂಡೂರು ತಹಶೀಲ್ದಾರ ಅನೀಲ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಎಸ್.ಖೈನೂರು, ಸಂಡೂರು ಕಾರ್ಮಿಕ ನಿರೀಕ್ಷಕ ಮಂಜುನಾಥ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ, ತೋರಣಗಲ್ಲು ಪಂಚಾಯತಿ ಅಭಿವೃದ್ದಿ ಅಧಿಕಾರಿ ಕಲ್ಲಪ್ಪ, ಕೈಗಾರಿಕಾ ವಿಸ್ತರಣಾಧಿಕಾರಿ ಚೈತ್ರ ಎನ್.ಕೆ., ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಕಂದಾಯ ಅಧಿಕಾರಿ ಗಣೇಶ್, ರೀಚ್ ಸಂಸ್ಥೆಯ ಸಂಯೋಜಕ ಹನುಮಂತಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ---------------

ಸೆ.02 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಸೆ.02 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-23 ಮತ್ತು ಎಫ್-24 ರ ವ್ಯಾಪ್ತಿಯ ನಗರದ ಹೆಚ್.ಆರ್.ಗವಿಯಪ್ಪ ವೃತ್ತ, ತೇರು ಬೀದಿ, ಜೈನ್ ಮಾರ್ಕೆಟ್, ಕಾಳಮ್ಮ ರಸ್ತೆ, ಲಾರಿ ಟರ್ಮಿನಲ್, ರಂಗ ಮಂದಿರ, ಹೊಸ ಬಸ್ ನಿಲ್ದಾಣ, ಬಂಡಿಮೊಟ್, ಗೊಲ್ಲರಹಟ್ಟಿ, ಮಾರುತಿ ಕಾಲೋನಿ, ಬೆಂಗಳೂರು ರಸ್ತೆ, ಬಾಪೂಜಿ ನಗರ, ಕುರಿ ಕಮೇಲ, ಕಮೇಲ ರಸ್ತೆ, ಮೃತ್ಯುಂಜಯ ನಗರ, ಬೆಂಕಿ ಮಾರೆಮ್ಮ ಗುಡಿ ಹತ್ತಿರ, ಬಾಲಾಂಜನೇಯ ಗುಡಿ ರಸ್ತೆ, ಪಿ.ಕೆ.ಸ್ಟಿçÃಟ್, ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮತ್ತು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಕರಸಾ ನಿಗಮ ಬಳ್ಳಾರಿ ವಿಭಾಗ: ಕಾರ್ಯಾಚರಣೆ ವಿಸ್ತರಣೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಆಂಧ್ರಪ್ರದೇಶದ ಆದೋನಿ ಹಾಗೂ ಆದೋನಿ ಮೂಲಕ ಕಾರ್ಯಾಚರಣೆಯಾಗುವ ಕರಾರಸಾ ನಿಗಮದ ಸಾರಿಗೆಗಳ ಕಾರ್ಯಾಚರಣೆಯನ್ನು ಆ.31 ರಿಂದ ಆದೋನಿ ಎ.ಪಿ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಕಕರಸಾ ನಿಗಮ, ಕರಾರಸಾ ನಿಗಮ ಮತ್ತು ವಾಕರಸಾ ಸಂಸ್ಥೆಯಿAದ ಕಾರ್ಯಾಚರಣೆಯಾಗುವ ಮಂತ್ರಾಲಯ, ರಾಯಚೂರು, ಎಮ್ಮಿಗನೂರು, ಶ್ರೀಶೈಲಂ ವಯಾ ಆದೋನಿ ಹಾಗೂ ಆದೋನಿ ಸಾರಿಗೆಗಳ ಕಾರ್ಯಾಚರಣೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆದೋನಿ ಪಟ್ಟಣದ ಎ.ಪಿ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ವಿಸ್ತರಣೆ ಮಾಡಲಾಗಿದೆ. ಹಾಗೆಯೇ ಆದೋನಿ ಪಟ್ಟಣದಲ್ಲಿ ಪ್ರಯಾಣಿಕರು ಇಳಿಯಲು, ಹತ್ತಲು ಪ್ರಸ್ತುತ ನೀಡುತ್ತಿರುವ ನಿಲುಗಡೆಗಳೊಂದಿಗೆ ಹೆಚ್ಚುವರಿಯಾಗಿ ಆದೋನಿ ಪಟ್ಟಣದ ನಿರ್ಮಲ್ ಟಾಕೀಸ್ ಹತ್ತಿರ, ಸರ್ಕಾರಿ ಜನರಲ್ ಆಸ್ಪತ್ರೆ ಹತ್ತಿರ ಹತ್ತಲು, ಇಳಿಯಲು ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಈ ಸಾರಿಗೆ ಸೇವೆಯನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ---------------

ಆ.31 ರಂದು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಮತ್ತು ಕೊಪ್ಪಳ ಸಹಯೋಗದೊಂದಿಗೆ ಆ.31 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ “ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಂಗ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೈಕೋರ್ಟ್ ನ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತ ನ್ಯಾಯಾಧೀಶರೂ ಆಗಿರುವ ನ್ಯಾಯಮೂರ್ತಿ ಆರ್. ನಟರಾಜ್ ಅವರು ವರ್ಚುವಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೊಪ್ಪಳ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಚಂದ್ರಶೇಖರ್.ಸಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರಿನ ತರಬೇತುದಾರರಾದ ಗೀತಾದೇವಿ ಎಂ.ಪಾಪಣ್ಣ, ಮಧ್ಯಸ್ಥಿಕೆದಾರರಾದ ಜಯಕೀರ್ತಿ ಎಂ.ಸಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು. ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್.ಹೊಸಮನೆ, ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್.ದರಗಡ್ ಸೇರಿದಂತೆ ಇತರೆ ನ್ಯಾಯಾಧೀಶರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -------------

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಮಹಾತ್ಮ ಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”- ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರೊಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು - 560001 ಅಥವಾ ಇ - ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಸೆ.04 ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತಂತೆ ಚರ್ಚಿಸಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರ ಅಧ್ಯಕ್ಷತೆಯಲ್ಲಿ ಸೆ.04 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. --------------

ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆಯ ಮುಖ್ಯಾಂಶಗಳು

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ಶುಕ್ರವಾರ ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾಖರ್ಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಂತ್ರಿಗಳು ಮತ್ತು ಪ್ರತಿನಿಧಿಗಳು, ಕೇಂದ್ರ ಸರ್ಕಾರದ ಪ್ರಸ್ತುತ ಪ್ರಸ್ತಾವನೆಯಿಂದ ರಾಜ್ಯಗಳಿಗೆ ಉಂಟಾಗಬಹುದಾದ ಗಣನೀಯ ಪ್ರಮಾಣದ ರಾಜಸ್ವ ನಷ್ಟದ ಬಗ್ಗೆ ತೀವ್ರ ಕಳಕಳಿಯನ್ನು ವ್ಯಕ್ತಪಡಿಸಿದರು. ತರುವಾಯ ಸಭೆಯಲ್ಲಿ ಹಾಜರಿದ್ದ ಎಂಟು ರಾಜ್ಯ ಸರ್ಕಾರಗಳ ಕರಡು ಪ್ರಸ್ತಾವನೆಯ ಕುರಿತು ವಿವರವಾದ ಚರ್ಚೆ ನಡೆಯಿತು. ಚರ್ಚೆಯ ನಂತರ, ರಾಜ್ಯಗಳ ರಾಜಸ್ವದ ಹಿತಾಸಕ್ತಿಗಳನ್ನು ಕಾಪಾಡುವ ಜೊತೆಗೆ ಜಿಎಸ್‍ಟಿ ದರ ತರ್ಕಬದ್ದ ಗೊಳಿಸುವಿಕೆಯನ್ನು ಸಾಧಿಸಲು ಈ ಕರಡು ಪ್ರಸ್ತಾವನೆಯು ಸಹಾಯಕವಾಗುತ್ತದೆ ಎಂಬ ಒಮ್ಮತದ ಅಭಿಪ್ರಾಯಕ್ಕೆ ಬರಲಾಯಿತು. ಜಿಎಸ್‍ಟಿ ದರ ತರ್ಕಬದ್ದ ಗೊಳಿಸುವಿಕೆ ಪ್ರಕ್ರಿಯೆಯಿಂದ ಎಲ್ಲಾ ಭಾಗೀದಾರರಿಗೆ ಪರಸ್ಪರ ಅನುಕೂಲಕರ ಪರಿಣಾಮ ಉಂಟಾಗುವ ದೃಷ್ಟಿಯಿಂದ, ಎಂಟು ರಾಜ್ಯಗಳು ಕೇಂದ್ರ ಸರ್ಕಾರ ಮತ್ತು ಇತರೆ ರಾಜ್ಯ ಸರ್ಕಾರಗಳೊಂದಿಗೆ ಸಹಕರಿಸಲು ಉತ್ಸುಕವಾಗಿವೆ. ಈ ವಿಷಯವನ್ನು ಮುಂಬರುವ ಜಿಎಸ್‍ಟಿ ಮಂಡಳಿಯ ಸಭೆಯ ಕಾರ್ಯಕಲಾಪದಲ್ಲಿ ಸೇರಿಸಲು ಮತ್ತು ಇತರೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರವು ಈ ಪ್ರಸ್ತಾವನೆಗೆ ಬೆಂಬಲ ನೀಡುವಂತೆ ಕೋರಲು ಸಭೆಯಲ್ಲಿ ಜಂಟಿಯಾಗಿ ತೀರ್ಮಾನಿಸಲಾಯಿತು. ಹಿನ್ನೆಲೆ: ದೇಶಾದ್ಯಂತ ಏಕೀಕೃತ ಪರೋಕ್ಷ ತೆರಿಗೆ ವ್ಯವಸ್ಥೆಯನ್ನು ಪ್ರಾರಂಭಿಸುವ ಉದ್ದೇಶದಿಂದ, ಗಮ್ಯಸ್ಥಾನ ಆಧಾರಿತ ತೆರಿಗೆಯಾಗಿ ಜುಲೈ 2017 ರಲ್ಲಿ ಜಿ.ಎಸ್.ಟಿ.ಯನ್ನು ಜಾರಿಗೆ ತರಲಾಯಿತು. ಆದಾಯ ತಟಸ್ಥತೆಯ ತತ್ವವು ಈ ವಿನ್ಯಾಸದ ಕೇಂದ್ರ ಬಿಂದುವಾಗಿತ್ತು. ಐದು ವರ್ಷಗಳ ಅವಧಿಗೆ ಯಾವುದೇ ಆದಾಯದ ಕೊರತೆಯ ಎದುರು ರಾಜ್ಯಗಳಿಗೆ ಆದಾಯ ರಕ್ಷಣೆಯನ್ನು ಖಾತರಿಪಡಿಸಲು ಜಿ.ಎಸ್.ಟಿ. (ರಾಜ್ಯಗಳಿಗೆ ಪರಿಹಾರ) ಕಾಯ್ದೆ, 2017 ಅನ್ನು ಜಾರಿಗೆ ತರಲಾಯಿತು. ರಾಜ್ಯಗಳ ಹಣಕಾಸಿನ ಅಧಿಕಾರಗಳನ್ನು ಗಮನಾರ್ಹವಾಗಿ ಜಿ.ಎಸ್.ಟಿ.ಯು ತನ್ನೊಳಗೆ ವಿಲೀನಗೊಳಿಸಿಕೊಳ್ಳುತ್ತದೆ ಮತ್ತು ಸಹಕಾರಿ ಒಕ್ಕೂಟವನ್ನು ಸಂರಕ್ಷಿಸಲು ಪರಿಹಾರ ಕಾರ್ಯವಿಧಾನವು ಅತ್ಯಗತ್ಯವಾಗಿ ಬೇಕಾಗುತ್ತದೆ ಎಂಬ ಅಂಶವು ಆಗಲೇ ಸ್ಪಷ್ಟವಾಗಿತ್ತು. ಜುಲೈ 2017 ರಲ್ಲಿ ಜಾರಿಯಾದಾಗಿನಿಂದ ಜಿ.ಎಸ್.ಟಿ.ಯಲ್ಲಿ ಹಲವಾರು ಬಾರಿ ದರಗಳ ತರ್ಕಬದ್ಧ ಗೊಳಿಸುವಿಕೆಯಾಗಿರುತ್ತದೆ. ಕೇಂದ್ರ ಸರ್ಕಾರದ ಈಗಿನ ಪ್ರಸ್ತಾವನೆಯು ದರ ಹಂತಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು ಮತ್ತು ಹಲವು ಬಾಬ್ತುಗಳನ್ನು ಕೆಳಹಂತಗಳಿಗೆ ತರುವ ಪ್ರಕ್ರಿಯೆಗೆ ಸಂಬಂಧಿಸಿದ್ದು ಒಟ್ಟಾರೆ ಜಿ.ಎಸ್.ಟಿ. ದರಗಳ ಸಂರಚನೆಯನ್ನು ಸರಳೀಕರಿಸುವುದಕ್ಕೆ ಸಂಬಂಧಿಸಿರುತ್ತದೆ. ದಕ್ಷತಾ ಸುಧಾರಣೆ ಮತ್ತು ಹೆಚ್ಚುವರಿ ಬಳಕೆಯಿಂದಾಗಿ, ಅಂತಹ ತರ್ಕಬದ್ಧಗೊಳಿಸುವಿಕೆ ಗಳುಗುರುತರವಾದ ಮಧ್ಯಮಾವಧಿ ಮತ್ತು ದೀರ್ಘಾವಧಿ ರಾಜಸ್ವ ಆದಾಯವನ್ನು ತರುತ್ತವೆ ಎಂಬ ನಿರೀಕ್ಷೆಯ ಮೇಲೆ ಯಾವಾಗಲೂ ಆಧಾರವಾಗಿರುತ್ತವೆ. ಆದರೆ, ಇಲ್ಲಿಯವರೆಗಿನ ಪ್ರತಿಯೊಂದು ಸುತ್ತಿನ ತರ್ಕಬದ್ಧಗೊಳಿಸುವಿಕೆಯು ಈ ಆದಾಯ ನಷ್ಟಗಳನ್ನು ಸರಿದೂಗಿಸಲು ನಿರೀಕ್ಷಿಸಲಾದ ಪ್ಲವನತೆಯು (buoyancy) ಕಾರ್ಯರೂಪಕ್ಕೆ ಬಂದಿಲ್ಲವಾದ್ದರಿಂದ ರಾಜ್ಯದ ಆದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ದರಗಳ ತರ್ಕಬದ್ಧಗೊಳಿಸುವಿಕೆಯಿಂದಾಗಿ ಆರ್ಥಿಕ ವರ್ಷ 2018 ಮತ್ತು 2024ರ ನಡುವೆ ನಿವ್ವಳ ಪರಿಣಾಮಕಾರಿ ಜಿ.ಎಸ್.ಟಿ. ದರವು ಶೇ.14.4 ರಿಂದ ಶೇ.11.6ಕ್ಕೆ ಕುಸಿದಿದೆ ಎಂಬುದಾಗಿ ಅಂದಾಜಿಸಲಾಗಿದೆ. ಗಮನಾರ್ಹವಾಗಿ, ಜಿ.ಎಸ್.ಟಿ. ಆದಾಯ (ಮರುಪಾವತಿ ನಂತರದ) ಜಿಡಿಪಿಯ ಶೇಕಡಾವಾರು ಪ್ರಮಾಣದಲ್ಲಿ, ಜಿ.ಎಸ್.ಟಿ. ಪೂರ್ವ ಯುಗದಲ್ಲಿ ದಾಖಲಾದ ಮಟ್ಟವನ್ನು ಇನ್ನೂ ಮೀರಿಲ್ಲ. ಈಗಿನ ಪ್ರಸ್ತಾವನೆಯಿಂದ ನಿವ್ವಳ ಪರಿಣಾಮಕಾರಿ ಜಿ.ಎಸ್.ಟಿ. ದರವು ಶೇ.10ರ ಮಿತಿಗಿಂತಲೂ ಕೆಳಗೆ ಕುಸಿಯುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದ್ದರಿಂದ, ಭವಿಷ್ಯದ ದರಗಳ ತರ್ಕಬದ್ಧಗೊಳಿಸುವಿಕೆಯು ಆದಾಯ ನಷ್ಟವನ್ನು ಸರಿದೂಗಿಸಲು ಅಗತ್ಯವಾದ ಪ್ಲವನತೆಯನ್ನು ಸ್ವಯಂಚಾಲಿತವಾಗಿ ನೀಡುತ್ತದೆ ಎಂದು ಊಹಿಸುವುದು ಸರಿಯಲ್ಲ. ದರ ತರ್ಕಬದ್ಧಗೊಳಿಸುವಿಕೆ ಕುರಿತ ಯಾವುದೇ ಹೊಸ ಪ್ರಸ್ತಾಪವುಪ್ಲವನತೆಯು ಆದಾಯ ನಷ್ಟವನ್ನು ಎಷ್ಟರ ಮಟ್ಟಿಗೆ ಸರಿದೂಗಿಸಬಹುದು ಎಂಬುದರ ವಾಸ್ತವಿಕ ಮೌಲ್ಯಮಾಪನದಿಂದ ಅಳೆಯುವಂತಾಗಿರಬೇಕು. ದರ ತರ್ಕಬದ್ಧಗೊಳಿಸುವಿಕೆಯ ನಂತರ ಆದಾಯ ಕೊರತೆಯ ಸಾಧ್ಯತೆ ಗಣನೀಯವಾಗಿ ಹೆಚ್ಚುವುದರಿಂದ, ದರ ತರ್ಕಬದ್ಧಗೊಳಿಸುವಿಕೆಯ ಪ್ರಸ್ತಾಪಗಳು ರಾಜ್ಯಗಳ ಹಣಕಾಸಿನ ಹಿತಾಸಕ್ತಿಗಳನ್ನು ಕಾಪಾಡಲು ಸ್ಪಷ್ಟ ಸುರಕ್ಷತಾ ಕ್ರಮಗಳನ್ನು ಒಳಗೊಂಡಿರಬೇಕು. ರಾಜ್ಯಗಳಿಗಿರುವ ಆತಂಕದ ಅಂಶಗಳು: ರಾಜ್ಯಗಳು ಜಿ.ಎಸ್.ಟಿ.ಯನ್ನೇ ತಮ್ಮ ಆದಾಯದ ಮೂಲ ಆಧಾರವಾಗಿ ಹೆಚ್ಚಾಗಿ ಅವಲಂಬಿಸಿವೆ. ಆದರೆ ಕೇಂದ್ರ ಸರ್ಕಾರದ ಸ್ಥಿತಿ ಹಾಗಲ್ಲ. ಅದಕ್ಕೆ ನೇರ ತೆರಿಗೆ, ಸಾರ್ವಜನಿಕ ಉದ್ದಿಮೆಗಳ ಡಿವಿಡೆಂಡ್ (ಲಾಭಾಂಶ), ಕಸ್ಟಮ್ಸ್ ಮತ್ತು ಅಬಕಾರಿ ಸುಂಕಗಳು, ಸೆಸ್ ಮತ್ತು ಸರಛಾರ್ಜ್ ತರಹದ ಹಲವು ಆದಾಯದ ಮೂಲಗಳಿವೆ. ಇದು ಆದಾಯದ ಅನಿಶ್ಚಿತತೆಯ ಸಮಯದಲ್ಲಿ ಪರಿಣಾಮಕಾರಿ ಪ್ರತಿ ಕ್ರಿಯಾತ್ಮಕ ಕ್ರಮವಾಗಿ ಕಾರ್ಯನಿರ್ವಹಿಸಬಹುದಾದ ಸಾಲಗಳನ್ನು ಹೆಚ್ಚಿಸುವ ಸಾಮಥ್ರ್ಯವನ್ನು ಹೊಂದಿದೆ. ಕೇಂದ್ರದ ಜಿಎಸ್ಟಿ ಸಂಗ್ರಹಗಳು ಅದರ ಸ್ವಂತ ತೆರಿಗೆ ಆದಾಯದ ಸುಮಾರು ಶೇಕಡ 28 ರವರೆಗೆ ಹೊಂದಿವೆ, ಆದರೆ ರಾಜ್ಯಗಳು ಜಿ.ಎಸ್.ಟಿ.ಯನ್ನು ಹೆಚ್ಚಾಗಿ ಅವಲಂಬಿಸಿವೆ— ಇದು ಅವುಗಳ ಸ್ವಂತ ತೆರಿಗೆ ಆದಾಯದ ಅರ್ಧದಷ್ಟು ಭಾಗವನ್ನು ಹೊಂದಿರಬಹುದು. ಆದ್ದರಿಂದ, ದರಗಳಲ್ಲಿ ಕಡಿತವು ರಾಜ್ಯಗಳ ಆದಾಯ ಸ್ವೀಕೃತಿಗಳಲ್ಲಿ ಮಹತ್ವದ ಅನಿಶ್ಚಿತತೆಯನ್ನು ಉಂಟುಮಾಡುತ್ತದೆ ಮತ್ತು ಅವುಗಳ ಹಣಕಾಸು ಸ್ಥಿರತೆಯನ್ನು ಹದಗೆಡಿಸುತ್ತದೆ. ಜಿಎಸ್.ಟಿ ದರ ತರ್ಕಬದ್ಧಗೊಳಿಸುವಿಕೆಯ ಜಾರಿ ಮತ್ತು ಪರಿಹಾರ ಸೆಸ್‍ನಲ್ಲಿಸುವುದರಿಂದ ಉಂಟಾಗಬಹುದಾದ ಆದಾಯ ನಷ್ಟದ ಅಂದಾಜನ್ನು ಭಾರತ ಸರ್ಕಾರ ನೀಡಿಲ್ಲ. ಹಲವು ಹಣಕಾಸು ಸಂಶೋಧನಾ ಕೇಂದ್ರಗಳು ನೀಡಿರುವ ಅಂದಾಜಿನ ಮಾಹಿತಿಯಂತೆ ಇದು ವಾರ್ಷಿಕವಾಗಿ ರೂ.85,000 ಕೋಟಿಗಳಿಂದ ರೂ.2,00,000 ಕೋಟಿಗಳಿಗೂ ಮೀರುತ್ತದೆ. ರಾಜ್ಯಗಳಿಗೆ ಅವುಗಳ ಹಣಕಾಸು ಯೋಜನೆ ಮತ್ತು ಆರ್ಥಿಕ ನಿಯಂತ್ರಣದ ಮೇಲೆ ಗಮನಾರ್ಹ ಅನಿಶ್ಚಿತತೆಯನ್ನು ಈ ಅಸ್ಪಷ್ಟತೆಯು ತಂದೊಡ್ಡಿದೆ. =======

ಶುಕ್ರವಾರ, ಆಗಸ್ಟ್ 29, 2025

ಶಾಲೆಗಳಿಗೆ ‘ಮಕ್ಕಳ ರಕ್ಷಣೆಗೆ ಕಾನೂನುಗಳು’ ಪುಸ್ತಕ ವಿತರಣೆ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮಾರ್ಗದರ್ಶನದಲ್ಲಿ ರೀಡ್ಸ್ ಸಂಸ್ಥೆ ವತಿಯಿಂದ ಹೊರತಲಾದ ‘ಮಕ್ಕಳ ರಕ್ಷಣೆಗೆ ಕಾನೂನು’ ಪುಸ್ತಕಗಳನ್ನು ಜಿಲ್ಲೆಯ ವಿವಿಧ ಶಾಲೆಗಳಲ್ಲಿ ವಿತರಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ಮಗುವಿನ ಜೈವಿಕ ಪೋಷಕರು ಮಕ್ಕಳ ರಕ್ಷಣೆಯ ಜವಾಬ್ದಾರಿ ಹೊಂದಿದ್ದರೂ, ಸರ್ಕಾರ ಮಕ್ಕಳ ಕಾನೂನಾತ್ಮಕ ಪೋಷಕರಾಗಿರುವುದರಿಂದ ‘ಮಕ್ಕಳ ರಕ್ಷಣೆಗೆ ಕಾನೂನುಗಳು’ ಈ ಪುಸ್ತಕವು ಸಮುದಾಯದಲ್ಲಿ ಸಾಮಾಜಿಕ ಅನಿಷ್ಟ ಪದ್ಧತಿಗಳ ದುಷ್ಪರಿಣಾಮಗಳ ಬಗ್ಗೆ ಮತ್ತು ಮಕ್ಕಳಿಗೆ ಸಂಬAಧಿಸಿದ ಕಾನೂನುಗಳ ಬಗ್ಗೆ ಜಾಗೃತಿ, ಜ್ಞಾನ ಮೂಡಿಸಿ ಮಕ್ಕಳನ್ನು ಸಶಕ್ತರನ್ನಾಗಿ ಮಾಡುವ ಮೂಲಕ ಸಾಮಾಜಿಕ ಅನಿಷ್ಠ ಪದ್ಧತಿಗಳನ್ನು ತೊಡೆದು ಹಾಕುವುದು ಈ ಪುಸ್ತಕದ ಮುಖ್ಯ ಉದ್ದೇಶವಾಗಿದೆ. ಈ ಪುಸ್ತಕವು ಮಕ್ಕಳ ರಕ್ಷಣೆಗೆ ಸಂಬAಧಿಸಿದ ಎಲ್ಲಾ ಕಾನೂನುಗಳು ಮತ್ತು ಸಾಮಾಜಿಕ ಅನಿಷ್ಟ ಪದ್ಧತಿಗಳಿಂದ ಮಕ್ಕಳನ್ನು ರಕ್ಷಿಸುವ ವಿಚಾರಗಳ ಸಮಗ್ರ ಮಾಹಿತಿ ಒಳಗೊಂಡಿದೆ. ಈಗಾಗಲೇ ಜಿಲ್ಲೆಯಲ್ಲಿ ಐದು ತಾಲ್ಲೂಕುಗಳ 719 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಈ ಪುಸ್ತಕವನ್ನು ರೀಡ್ಸ್ ಸಂಸ್ಥೆಯಿAದ ತಾಲ್ಲೂಕುವಾರು ವಿತರಣೆ ಮಾಡಲಾಗಿದೆ. ಬಳ್ಳಾರಿ ಪಶ್ಚಿಮ ವಿಭಾಗ-141, ಬಳ್ಳಾರಿ ಪೂರ್ವ ವಿಭಾಗ-177, ಕಂಪ್ಲಿ-52, ಸಂಡೂರು-249 ಮತ್ತು ಸಿರುಗುಪ್ಪದ 100 ಶಾಲೆಗಳಿಗೆ ಪುಸ್ತಕಗಳನ್ನು ವಿತರಿಸಲಾಗಿದೆ. ಶಾಲೆಗಳಲ್ಲಿ ಪ್ರಾರ್ಥನೆ ನಂತರ ಪ್ರತಿದಿನ ಒಂದು ಪುಟದಂತೆ ಓದಿಸಿ ಮಕ್ಕಳಲ್ಲಿ ಮಕ್ಕಳಿಗೆ ಸಂಬAಧಿಸಿದ ಕಾನೂನುಗಳ ಬಗ್ಗೆ ಜ್ಞಾನವನ್ನು ಹೆಚ್ಚಿಸುವಂತೆ ಮಾಡುವ ಉದ್ದೇಶದಿಂದ ಈ ಪುಸ್ತಕವನ್ನು ಜಾರಿಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. --------------

ಸೆ.01 ರಂದು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸೆ.01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ. ಸಂಬAಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ರಾಷ್ಟಿçÃಯ ಕ್ರೀಡಾ ದಿನ ಅಂಗವಾಗಿ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ | ಕ್ರೀಡೆ ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗ: ಕೆ.ಗ್ರೇಸಿ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ದೈನಂದಿನ ಜೀವನದಲ್ಲಿ ಕ್ರೀಡೆಗಳು ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗವಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟಿçÃಯ ಕ್ರೀಡಾ ದಿನ ಅಂಗವಾಗಿ ಶುಕ್ರವಾರ ಆಯೋಜಿಸಲಾಗಿದ್ದ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗಳು ಅತ್ಯಾವಶ್ಯಕವಾಗಿದೆ. ಕ್ರೀಡೆಗಳು ನಮ್ಮ ಜೀವನವನ್ನು ಸಮೃದ್ಧಗೊಳಿಸುತ್ತವೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಯುವಪೀಳಿಗೆಯು ತಪ್ಪದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಆಶಿಸಿದರು. ಭಾರತದ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಕೊಡುಗೆ ಗುರುತಿಸಲು ಆ.29 ರಂದು ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದ ಅವರು, ಧ್ಯಾನ್ ಚಂದ್ ಅವರು ಹಲವು ಪೀಳಿಗೆಯವರಿಗೆ ಪ್ರೇರಣೆಯಾಗಿದ್ದವರು ಎಂದು ತಿಳಿಸಿದರು. ಜಿಲ್ಲೆಯ ವಿವಿಧ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಟಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಲಾಗುವುದು ಎಂದರು. ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆನ್ ಲೈನ್ ಮೂಲಕ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಳಿಕ ವಿವಿಧ ಕ್ರೀಡೆಗಳು ಜರುಗಿದವು. ಈ ವೇಳೆ ಹಾಕಿ ತರಬೇತುದಾರ ಜಾಕೀರ್, ಫುಟ್ ಬಾಲ್ ತರಬೇತುದಾರ ಮಸೂರ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಸಿದ್ದು, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಕಾರ್ಯದರ್ಶಿ ಬುಜ್ಜಿ, ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಇತರರು ಭಾಗವಹಿಸಿದ್ದರು. ----------------

ರೈತರು ಮೆಣಸಿನಕಾಯಿ ಬೆಳೆಯಲ್ಲಿ ಕಂಡುಬರುವ ಸಸಿ ಕೊಳೆ ರೋಗ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯುವ ರೈತರು ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆ ರೋಗ ಕಂಡುಬAದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುವ ಸಂಭವವಿರುವುದರಿAದ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆಯುವ ರೋಗ ಕಾಣಿಸಿಕೊಳ್ಳುತ್ತದೆ. ಹಾಗಾಗಿ ರೈತರು ಕೆಳಕಂಡAತೆ ಸೂಕ್ತ ಮುಂಜಾಗ್ರತೆ ಮತ್ತು ನಿರ್ವಹಣೆ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ. *ಕ್ರಮಗಳು:* ರೈತರು ನರ್ಸರಿಯಿಂದ ಸಸಿಗಳನ್ನು ತಂದು ನಾಟಿ ಮಾಡುವಾಗ ಆಳವಾಗಿ ನಾಟಿ ಮಾಡುವುದು ಸೂಕ್ತವಲ್ಲ. ಬದಲಾಗಿ ಸಸಿಗಳನ್ನು ಸಾಲಿನಿಂದ ಸಾಲಿಗೆ 120 ಸೆಂ.ಮೀ ಹಾಗೂ ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರದಲ್ಲಿ ನಾಟಿ ಮಾಡಿದಲ್ಲಿ ಗಿಡಗಳ ಬೆಳೆವಣಿಗೆ, ಗಾಳಿಯಾಡಲು ಸಹಾಯ ಮಾಡುತ್ತದೆ ಹಾಗೂ ರೋಗ ನಿಯಂತ್ರಣ ಮಾಡಬಹುದಾಗಿದೆ. ಮಣ್ಣಿನಲ್ಲಿ ಅಧಿಕ ತೇವಾಂಶ ಬಸಿದು ಹೋಗುವಂತೆ ಬಸಿ ಕಾಲುವೆ ಮಾಡಬೇಕು. ನೀರಾವರಿಯನ್ನು ನಿಯಂತ್ರಿಸಿ ಮಣ್ಣಿನಲ್ಲಿ ಹೆಚ್ಚಿನ ತೇವಾಂಶ ಇಲ್ಲದೇ ಇರುವಂತೆ ನೋಡಿಕೊಳ್ಳಬೇಕು. ಮಣ್ಣಿನ ತೇವಾಂಶ ಹೆಚ್ಚಾಗಿ ಸಸಿ ಕೊಳೆಯುವ ರೋಗ ಕಂಡುಬAದಲ್ಲಿ ಕಾರ್ಬನ್‌ಡೈಜಿಮ್ ಶೇ.50 ಡಬ್ಲೂö್ಯಪಿ ಅಥವಾ ಮ್ಯಾಂಕೋಜಬ್ ಶೇ.75 ಡಬ್ಲೂö್ಯಪಿ 2 ಗ್ರಾಂ ನಂತೆ ಅಥವಾ ಕಾಪರ್ ಆಕ್ಸಿಕೋಡ್ 4 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡುವುದರಿಂದ ರೋಗ ನಿಯಂತ್ರಣ ಹತೋಟಿಗೆ ಬರುತ್ತದೆ. ಪ್ರತಿ ಎಕರೆಗೆ 100 ರಿಂದ 150 ಕೆ.ಜಿ ತಿಪ್ಪೆ ಗೊಬ್ಬರದ ಜೊತೆಯಲ್ಲಿ 5 ಕೆ.ಜಿ ಟ್ರೆöÊಕೋಡರ್ಮ್ ಮಿಶ್ರಣ ಮಾಡಿ ಗಿಡಗಳ ಸಾಲಿನಲ್ಲಿ ಹಾಕುವುದು. ಸಸಿಗಳ ಸುತ್ತಲಿನ ಕಳೆಗಳನ್ನು ತೆಗೆದು ಹಾಕಬೇಕು. ಇದರಿಂದ ಗಾಳಿಯಾಡಲು ಅನುಕೂಲವಾಗುತ್ತದೆ. ಕೊಳೆರೋಗ ಸೋಂಕಿತ ಸಸಿ ಅಥವಾ ಸಸಿಗಳ ಭಾಗಗಳನ್ನು ತೆಗೆದು ಹಾಕಿ ಅವುಗಳನ್ನು ನಾಶಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. -------------

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ರಾಷ್ಟಿçÃಯ ಕ್ರೀಡಾ ದಿನಾಚರಣೆ | ಆರೋಗ್ಯಯುತ ಸಮಾಜಕ್ಕೆ ಕ್ರೀಡಾ ಚಟುವಟಿಕೆಗಳು ಮುಖ್ಯ: ಪ್ರೊ.ಎಂ.ಮುನಿರಾಜು

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ನಮ್ಮ ಸಮಾಜ ಆರೋಗ್ಯಯುತವಾಗಿರಲು ಕ್ರೀಡಾ ಚಟುವಟಿಕೆಗಳು ಪ್ರತಿಯೊಬ್ಬರಿಗೂ ಅತ್ಯಂತ ಅವಶ್ಯಕವಾದವು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಹೇಳಿದರು. ಶುಕ್ರವಾರ ನಗರದ ಹೊರವಲಯದ ವಿಶ್ರೀಕೃದೇ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಜನ್ಮದಿನದ ಸ್ಮರಣಾರ್ಥ ರಾಷ್ಟಿçÃಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಕೂಡ ಯಾವುದಾದರು ಒಂದು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಸದೃಢÀವಾಗಿರಲು ಸಾಧ್ಯ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡೆಯ ಶ್ರೇಷ್ಠತೆ, ಗೌರವ ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಮೇಜರ್ ಧ್ಯಾನಚಂದ ಅವರು ನಮಗೆಲ್ಲ ಸ್ಪೂರ್ತಿ ಎಂದರು. ಕುಲಸಚಿವ ಸಿ.ನಾಗರಾಜು ಅವರು ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕ್ರೀಡಾ ಚಟುವಟಿಕೆಗಳನ್ನು ದಿನನಿತ್ಯದ ಭಾಗವಾಗಿ ಸ್ವೀಕರಿಸಬೇಕು. ಅಂದಾಗ ಮಾತ್ರ ಜೀವನ ಪರಿಪೂರ್ಣವಾಗುತ್ತದೆ ಎಂದರು. ಇದೇ ವೇಳೆ ಅಖಿಲ ಭಾರತ ಮತ್ತು ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದ ವಿವಿಯ ಕ್ರೀಡಾಪಟುಗಳಿಗೆ ಗಣ್ಯರು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಕ್ರೀಡಾ ದಿನದ ಅಂಗವಾಗಿ ವಿಶ್ವವಿದ್ಯಾಲಯದ ಸಿಬ್ಬಂದಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ರಮೇಶ ಸವದಿ, ಡಾ.ಅರ್ಥೊಬ ನಾಯಕ, ಡಾ.ಅಮರೇಶ ನುಗಡೋಣಿ, ರಘುನಾಥ ಚಹ, ಡಾ.ಸಂಪತ ಕುಮಾರ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲ ನಿಕಾಯಗಳ ಡೀನರು, ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. -------------

ಅನಾಮಧೇಯ ಮೃತ ಮಹಿಳೆ ಶವ: ಪತ್ತೆಗೆ ಮನವಿ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ತಾಲೂಕಿನ ಕಪ್ಪಗಲ್ ಕ್ಯಾಂಪ್‌ನ ಕಪ್ಪಗಲ್ ಹೆಚ್‌ಎಲ್‌ಸಿ ಕಾಲುವೆಯ ಸಬ್ ಕಾಲುವೆ ಡಿಪಿ-14 ಆರ್ ವಿತರಣಾ ಕಾಲುವೆಯಲ್ಲಿ ಸುಮಾರು 55 ರಿಂದ 60 ವರ್ಷದ ಅನಾಮಧೇಯ ಮೃತ ಮಹಿಳೆಯ ಶವವು ಆ.28 ರಂದು ತೇಲಿಕೊಂಡು ಬಂದಿದ್ದು, ಮೃತಳ ವಾರಸುದಾರರು ತಿಳಿದಿರುವುದಿಲ್ಲ. ಪತ್ತೆಗೆ ಸಹರಿಸಬೇಕು. ಚಹರೆ ಗುರುತು: ಎತ್ತರ ಅಂದಾಜು 5.5 ಅಡಿ, ಹಸಿರು ಬಣ್ಣದ ಬ್ಲೌಸ್ ಧರಿಸಿರುತ್ತಾಳೆ. ತಲೆ ಬುರುಡೆ ಕಂಡುಬುರುತ್ತಿದ್ದು, ಕಣ್ಣು, ಕಿವಿ ಮತ್ತು ಬಾಯಿ ಇರುವುದಿಲ್ಲ. ತಲೆಯ ಭಾಗ ಕೈ ಮತ್ತು ಕಾಲುಗಳನ್ನು ಜಲಚರ ಪ್ರಾಣಿಗಳು ಕಿತ್ತು ತಿಂದAತೆ ಕಂಡುಬರುತ್ತಿದೆ. ಯಾವುದೇ ಚಹರೆ ಗುರುತುಗಳು ಕಂಡುಬAದಿರುವುದಿಲ್ಲ. ಅನಾಮಧೇಯ ಮೃತ ಮಹಿಳೆಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392258100 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ದೂ.08392-276461 ಹಾಗೂ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.01 ರವರೆಗೆ ಅವಧಿ ವಿಸ್ತರಣೆ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಹಿಂದುಳಿದ ವರ್ಗಗಳ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆ ನೀಡಲು ಸೆ.01 ರ ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು. ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ‌ ವಿವರಗಳಿಗೆ ದೂ.ಸಂಖ್ಯೆ 080-29506668 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ========

ಗುರುವಾರ, ಆಗಸ್ಟ್ 28, 2025

ಬ್ರಹ್ಮಶ್ರೀ ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ | ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಸಿ ಪಿ.ಪ್ರಮೋದ್

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು. ನಗರದ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.17 ರಂದು ವಿಶ್ವಕರ್ಮ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು. ಎಲ್ಲರೂ ಭಾಗವಹಿಸಿ ಆಚರಿಸಿದರೆ ಜಯಂತಿ ಕಾರ್ಯಕ್ರಮಗಳಿಗೆ ಮೆರಗು. ಹಾಗಾಗಿ ಎಲ್ಲ ಸಮುದಾಯದವರು, ಸಂಘ-ಸAಸ್ಥೆಗಳ ಮುಖಂಡರು, ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವಿದ್ದು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದ ಅವರು, ವೇದಿಕೆ ಮತ್ತು ಮೆರವಣಿಗೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸೆ.17 ರಂದು ವಿಶ್ವಕರ್ಮ ಜಯಂತಿ ಅಂಗವಾಗಿ ಮೆರವಣಿಗೆಯು ನಡೆಯಲಿದ್ದು, ಅಂದು ಬೆಳಿಗ್ಗೆ 09.30 ಗಂಟೆಗೆ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಒಳಗೊಂಡಿರುತ್ತವೆ ಎಂದು ಅವರು ತಿಳಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ಗಾಯನ, ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ನಂತರದಲ್ಲಿ ಲಘು ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ------------

“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ”: ಆ.30 ರಂದು ವಿಚಾರ ಸಂಕಿರಣ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆ.30 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಪತ್ರಿಕಾ ಭವನದ “ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ”ದಲ್ಲಿ ಆಯೋಜಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿಯೂ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರಸಂಕಿರಣವು ವೇದಿಕೆಯಾಗಲಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಅವರು ಘನ ಉಪಸ್ಥಿತಿ ವಹಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರಾಸ್ತಾವಿಕವಾಗಿ ಮಾತನಾಡುವರು. ಗೌರವಾನ್ವಿತ ಅತಿಥಿಗಳಾಗಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚAದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್, ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ ರಾಘವೇಂದ್ರ, ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮುಂತಾದ ಗಣ್ಯಮಾನ್ಯರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 11.30 ಗಂಟೆಗೆ ಜರುಗುವ ಮೊದಲ ಗೋಷ್ಠಿಯಲ್ಲಿ ಶಿವಮೊಗ್ಗ ಟೆಲೆಕ್ಸ್ ದಿನಪತ್ರಿಕೆ ಸಂಪಾದಕ ರವಿಕುಮಾರ್.ಎನ್ ಅವರು “ಅಂಬೇಡ್ಕರ್ ಅವರ ಪತ್ರಿಕಾ ವೃತ್ತಿ” ಕುರಿತು ಹಾಗೂ ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಅವರು “ಪತ್ರಕರ್ತರಾಗಿ ಅಂಬೇಡ್ಕರ್ ಅವರ ಬರವಣಿಗೆಗಳು” ಕುರಿತು ವಿಷಯ ಮಂಡಿಸುವರು. ಮಧ್ಯಾಹ್ನ 2 ಗಂಟೆಗೆ ನಡೆಯುವ ಎರಡನೆ ಗೋಷ್ಠಿಯಲ್ಲಿ ಶಿವಮೊಗ್ಗದ ಕನ್ನಡ ಸಹಪ್ರಾಧ್ಯಾಪಕರಾದ ಡಾ.ಭಾರತಿದೇವಿ.ಪಿ ಅವರು “ಅಂಬೇಡ್ಕರ್ ದೃಷ್ಟಿಯಲ್ಲಿ ಲಿಂಗಸಮಾನತೆ” ಕುರಿತು ಹಾಗೂ ಬೆಳಗಾವಿಯ ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ರಿಷಿಕೇಶ್ ಬಹದ್ದೂರ್ ದೇಸಾಯಿ ಅವರು “ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ” ಕುರಿತು ವಿಷಯ ಮಂಡಿಸುವರು. ಬಳಿಕ ಸಂಜೆ 04 ಗಂಟೆಗೆ ಜರುಗುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರಾದ ಸನತ್ ಕುಮಾರ್ ಬೆಳಗಲಿ ಸಮಾರೋಪ ಭಾಷಣ ಮಾಡುವರು. ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಾಗೂ ಡಾ.ಜೆ.ಕರಿಯಪ್ಪ ಮಾಳಿಗೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸುವರು. ಪತ್ರಕರ್ತರು ಹಾಗೂ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಕಾರ್ಯಕ್ರಮದ ಸಂಯೋಜಕರು ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯರಾದ ಎಂ.ಎನ್.ಅಹೋಬಳಪತಿ ಹಾಗೂ ಅಕಾಡೆಮಿಯ ಕಾರ್ಯದರ್ಶಿ ಎಂ. ಸಹನಾ ಅವರು ತಿಳಿಸಿದ್ದಾರೆ. ---------------

ಸಂಚಾರಿ ಇ-ಚಾನೆಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಸಂಚಾರಿ ಇ-ಚಾನೆಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ 12 ರ ವರೆಗೆ ಈ ರಿಯಾಯಿತಿ ಸೌಲಭ್ಯವು ಇರಲಿದ್ದು, ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟಿçÃಯ ಲೋಕ್ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಹಾಗಾಗಿ ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------------

ಆ.29 ರಂದು ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.29 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ-2025 ಹಮ್ಮಿಕೊಳ್ಳಲಾಗಿದೆ. ವಸತಿ, ವಕ್ಘ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಈ.ತುಕಾರಾಮ್, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಶಾಸಕ ಚಂದ್ರಶೇಖರ ಬಿ.ಪಾಟೀಲ, ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಕಸ್ತೂರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ----------------

ಆ.31 ರಂದು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಆಗಸ್ಟ್ 31 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ಸಭಾಂಗಣದಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ನ್ಯಾಯಾಧೀಶರಿಗೆ ಮಧ್ಯಸ್ಥಿಕೆ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------------

ನಾಗಪುರ ದೀಕ್ಷಾ ಭೂಮಿಗೆ ಹೋಗಿಬರಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಅಕ್ಟೋಬರ್ 02 ರಂದು ನಡೆಯಲಿರುವ ಪ್ರವರ್ತನಾ ದಿನಕ್ಕೆ ಹೋಗಿಬರಲು ಅರ್ಹ ಪರಿಶಿಷ್ಟ ಜಾತಿಯ ಯಾತ್ರಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ, ಕಂಪ್ಲಿ, ಕುರುಗೋಡು ತಾಲ್ಲೂಕುಗಳಿಂದ ಅರ್ಹರನ್ನು ಆಯ್ಕೆ ಮಾಡಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 04 ರ ವರೆಗೆ ಕೆಕೆಆರ್‌ಟಿಸಿ ಅಥವಾ ಇತರೆ ಸಾರಿಗೆ ಬಸ್ ಮತ್ತು ರೈಲಿನ ಮೂಲಕ ಹೋಗಿಬರಲು ಕಳುಹಿಸಿಕೊಡಲಾಗುವುದು. ಅರ್ಜಿ ಸಲ್ಲಿಸಲು ಸೆ.09 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಆನ್ ಲೈಬ್ ವೆಬ್ ಸೈಟ್ https://swd.karnataka.gov.in/ ನಲ್ಲಿ ಸಲ್ಲಿಸಿ, ಅದರ ಒಂದು ಕಾಪಿಯನ್ನು ಸಹಾಯಕ ನಿರ್ದೇಶಕರು ಗ್ರೇಡ್-1 ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಭವನ, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಬಳ್ಳಾರಿ,ಆ.27(ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಆಗಸ್ಟ್ 29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ. ಈ ಬೃಹತ್ ಅಭಿಯಾನವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್, ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ. ದೇಶಾದ್ಯಂತ 1 ಲಕ್ಷ ಕಿಲೋಮೀಟ‌ರ್ ಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್ ನಂದಿನಿ ಮಿಥುನ್ ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ. ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ. ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ. ======

ಮಂಗಳವಾರ, ಆಗಸ್ಟ್ 26, 2025

ಆ.28 ರಂದು ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಬಳ್ಳಾರಿ,ಆ.26(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಆಗಸ್ಟ್ 28 ರಂದು ಸಂಜೆ 04 ಗಂಟೆಗೆ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಸಭೆಗೆ ಸಂಬAಧಿಸಿದ ಇಲಾಖಾಧಿಕಾರಿಗಳು, ಸಮಾಜದ ಮುಖಂಡರು ತಪ್ಪದೇ ಭಾಗವಹಿಸಿ, ಮಹನೀಯರ ಜಯಂತಿ ಆಚರಣೆಗೆ ಸಂಬAಧಿಸಿದAತೆ ಸಲಹೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. --------------

ಗಣೇಶ ಹಬ್ಬ: ನಂ.15 ಗೋನಾಳ್, ಹೊನ್ನಳ್ಳಿ ಗ್ರಾಮಗಳಲ್ಲಿ ನಿಷೇಧ | ಸಾರ್ವಜನಿಕವಾಗಿ ಗಣೇಶ ಮೂರ್ತಿ ಕೂಡಿಸದಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಆ.26(ಕರ್ನಾಟಕ ವಾರ್ತೆ): ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಕ್ಷÄಬ್ಧ ವಾತಾವರಣ ನಿರ್ಮಾಣವಾಗಿದ್ದು, ದ್ವೇಷದ ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಸಮಯ, ಸಂದರ್ಭಾನುಸಾರ ಕಾಯುತ್ತಿರುತ್ತಾರೆಂದು ಸಂಶಯ ಇದೆ. ಹಾಗಾಗಿ, ಈ ಗ್ರಾಮಗಳಲ್ಲಿ ಗಣೇಶ ಹಬ್ಬ ಆಚರಣೆ ಮಾಡಿದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಸಂಭವವಿರುವುದರಿAದ ಹಾಗೂ ಮುಂದೆ ನಡೆಯಬಹುದಾದ ಘಟನೆಗಳನ್ನು ತಡೆಹಿಡಿಯುವ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ. ---------------

ಆ.30 ರಂದು ಜಿಲ್ಲಾ ಮಟ್ಟದ ಶಿಶಿಕ್ಷÄ ಮೇಳ

ಬಳ್ಳಾರಿ,ಆ.26(ಕರ್ನಾಟಕ ವಾರ್ತೆ): ಜಿಲ್ಲೆಯ ಸ್ಥಳೀಯ ಉದ್ದಿಮೆದಾರರಿಂದ ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ಆಗಸ್ಟ್ 30 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಮಟ್ಟದ ಶಿಶಿಕ್ಷÄ ಮೇಳ(ಅಪ್ರೆಂಟಿಸ್‌ಶಿಪ್) ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ವಿವಿಧ ಕೈಗಾರಿಕಾ ಸಂಸ್ಥೆಗಳ (ಐಟಿಐ ಕಾಲೇಜ್) ಫಿಟ್ಟರ್, ಎಲೆಕ್ಟಿçಷಿಯನ್, ಟರ್ನರ್, ಮೆಷಿನಿಸ್ಟ್, ವೆಲ್ಡರ್, ಇಎಂ, ಎಂಎAವಿ, ಡಿಸೇಲ್ ಮೆಕ್ಯಾನಿಕ್, ಕೊಪ, ಎಂಇವಿ ಮತ್ತು ವಿವಿಧ ವೃತ್ತಿಗಳ ತರಬೇತುದಾರರು ಅಂತಿಮ ವರ್ಷದ ಹಾಗೂ ಈಗಾಗಲೇ ತೇರ್ಗಡೆಯಾದ ತರಬೇತಿದಾರರು ಅಪ್ರೆಂಟಿಸ್‌ಶಿಪ್ ಮೇಳದಲ್ಲಿ ಪಾಲ್ಗೊಳ್ಳಬಹುದು. ಬೇಕಾದ ದಾಖಲೆ: 18 ವರ್ಷ ಪೂರೈಸಿರಬೇಕು. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, 2 ಭಾವಚಿತ್ರ, ಆಧಾರ್ ಕಾರ್ಡ್, ಸ್ವ-ವಿವರವುಳ್ಳ (ಬಯೋಡಾಟ) ದೊಂದಿಗೆ ಹಾಜರಾಗಬಹುದು. ಅರ್ಹರು ಭಾಗವಹಿಸಿ ಈ ಅಪ್ರೆಂಟಿಶಿಪ್ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ದೀಕ್ಷಾಭೂಮಿ ಯಾತ್ರೆಗೆ ತೆರಳಲು ಅರ್ಜಿ ಆಹ್ವಾನ

ಬಳ್ಳಾರಿ,ಆ.26(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದ್ದು, ಅರ್ಹ ಯಾತ್ರಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆ.30 ರಿಂದ ಅ.04 ರ ವರೆಗೆ ಕೆಕೆಆರ್‌ಟಿಸಿ, ಇತರೆ ಸಾರಿಗೆ ಬಸ್ ಮತ್ತು ರೈಲಿನ ಮೂಲಕ ಕರೆದುಕೊಂಡು ಹೋಗಿಬರಲಾಗುತ್ತದೆ. ದೀಕ್ಷಾಭೂಮಿ ನಾಗಪುರಕ್ಕೆ ಹೋಗಬಯಸುವ ಯಾತ್ರಾರ್ಥಿಗಳು ಸೆ.09 ರ ವರೆಗೆ ಆನ್‌ಲೈನ್ ಮೂಲಕ ಇಲಾಖೆಯ ವೆಬ್‌ಸೈಟ್ https://swdservices.karnataka.gov.in ನಲ್ಲಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಗಳನ್ನು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಪ್ರತಿಗಳೊಂದಿಗೆ ಸಂಬAಧಪಟ್ಟ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಆ.26(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಮೆಟ್ರಿಕ್ ನಂತರದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ ಲಿಂಕ್ https://shp.karnataka.gov.in ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 15. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಬಳ್ಳಾರಿ ವಿಭಾಗ ತಾಲ್ಲೂಕು ವಿಸ್ತರಣಾಧಿಕಾರಿಗಳ ಮೊ.8746818180 ಮತ್ತು ಬಳ್ಳಾರಿ ತಾಲ್ಲೂಕು ಮಾಹಿತಿ ಕೇಂದ್ರ ಮೊ.8310321101, ಸಂಡೂರು ತಾಲ್ಲೂಕು ಮಾಹಿತಿ ಕೇಂದ್ರ ಮೊ.9036925966/8660575061, ಸಿರುಗುಪ್ಪ ತಾಲ್ಲೂಕು ಮಾಹಿತಿ ಕೇಂದ್ರ ಮೊ.9148889975 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ,ಆ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆಗಳ ವಿಮೆ ನೋಂದಾಣಿಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ ಮುಖ್ಯ ಉದ್ದೇಶವಾಗಿದೆ. ವಿಮಾ ಯೋಜನೆಯಡಿ ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳು ವಿಮೆಗೆ ಒಳಪಡುವ ಬೆಳೆಗಳಾಗಿದ್ದು, ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿವೆ. ಹಸಿ ಮೆಣಸಿನಕಾಯಿ ಬೆಳೆ ವಿಮೆಗೆ ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ. ದಾಳಿಂಬೆ ಬೆಳೆ ವಿಮೆಗೆ ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು, ಕಂಪ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ. 9448511649, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ. 9740934208, ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ. 9448910277 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಸೋಮವಾರ, ಆಗಸ್ಟ್ 25, 2025

ಬಳ್ಳಾರಿ ಮಹಾನಗರ ಪಾಲಿಕೆ: ನಿಗದಿಪಡಿಸಿದ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಿ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಮೂಲಗಳ ಸಂರಕ್ಷಣೆಯ ಉದ್ದೇಶದಿಂದ ನಗರದಲ್ಲಿ ತುಂಗಭದ್ರಾ ಕಾಲುವೆಯು ಹಾದು ಹೋಗುವ ವಿವಿಧ ಸ್ಥಳಗಳಲ್ಲಿಯೇ ಕಡ್ಡಾಯವಾಗಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಿ ಪರಿಸರ ಸಂರಕ್ಷಣೆಗಾಗಿ ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. *ಸ್ಥಳಗಳು:* ಬೆಂಗಳೂರು ರಸ್ತೆ, ತಾಳೂರು ರಸ್ತೆ, ಕಪ್ಪಗಲ್ಲು ರಸ್ತೆ, ಅಲ್ಲೀಪುರ (ಹೊಸಪೇಟೆ ರಸ್ತೆ), ಬೆಳಗಲ್ಲು ರಸ್ತೆ (ಡಿ.ಸಿ ನಗರ), ಸಿರುಗುಪ್ಪ ರಸ್ತೆಯ ಹವಂಭಾವಿ, ಬಂಡಿಹಟ್ಟಿಯ ಆಲದಹಳ್ಳಿ ರಸ್ತೆ ಮತ್ತು ಭತ್ರಿ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಅಧಿಸೂಚನೆಯಂತೆ ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ, ಬಳಕೆ ಮತ್ತು ರಾಸಾಯನಿಕದಿಂದ ತಯಾರಿಸಿದ ಬಣ್ಣಗಳ ಲೇಪನವನ್ನು ಗಣೇಶ ಮೂರ್ತಿಯ ತಯಾರಿಕೆಯಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಬಣ್ಣಗಳ ಲೇಪನದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜೆಗೆ ಉಪಯೋಗಿಸದೇ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳನ್ನು ಉಪಯೋಗಿಸಿ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದು ಪಾಲಿಕೆಯು ಪ್ರಕಟಣೆಯಲ್ಲಿ ಕೋರಿದೆ. --------------

ಬಳ್ಳಾರಿ: ಗಣೇಶ ಹಬ್ಬ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಿ-ಐಜಿಪಿ ವರ್ತಿಕ ಕಟಿಯಾರ್ ನಿರ್ದೇಶನ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಆಚರಿಸುವ ಗಣೇಶ ಹಬ್ಬದ ಸಂದರ್ಭದಲ್ಲಿ ಸೂಕ್ತ ಅಗತ್ಯ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಸೂಚಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ವರ್ತಿಕ ಕಟಿಯಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ನಗರದ ಎಸ್‌ಪಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶ ಪ್ರತಿಷ್ಠಾಪನೆ ಸಂಬAಧಿಸಿದAತೆ ಯಾವುದೇ ಕಾರ್ಯಕ್ರಮಗಳ ಕುರಿತಂತೆ ಸಂಬAಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಒಂದು ವೇಳೆ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು. ಬಳ್ಳಾರಿ ವಲಯದ ಎಲ್ಲಾ ಜಿಲ್ಲೆಯ ಪೊಲೀಸ್ ಠಾಣೆ, ವೃತ್ತ ಕಚೇರಿ, ಉಪ-ವಿಭಾಗದ ಮತ್ತು ಪೊಲೀಸ್ ಅಧೀಕ್ಷಕರ ಮಟ್ಟದಲ್ಲಿ ಎಲ್ಲಾ ಧರ್ಮದ ಮುಖಂಡರುಗಳನ್ನು ಕರೆದು ಶಾಂತಿ ಸಭೆ ನಡೆಸಿ, ಸಭೆಗೆ ಹಾಜರಾದವರ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆ ಇತ್ಯಾದಿಗಳ ಜೊತೆಗೆ ಅವರ ಸಹಿ ಪಡೆದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿ, ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕ ಹೊಂದಿರಬೇಕು ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬರುವ ಆಕ್ಷೇಪಾರ್ಹ, ಪ್ರಚೋದನಕಾರಿ ಸಂದೇಶ, ಚಿತ್ರ ಮತ್ತು ವಿಡಿಯೋಗಳ ಬಗ್ಗೆ ಗಮನಹರಿಸಿ ಅಂತಹವುಗಳು ಕಂಡುಬAದಲ್ಲಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಳವಡಿಸುವ ಬ್ಯಾರ‍್ಸ್, ಬಂಟಿAಗ್ಸ್, ಫ್ಲೆಕ್ಸ್ ಗಳಿಗೆ ಸಂಬAಧಿಸಿದAತೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಪಿ.ಡಿ.ಓ ಗಳ ಜೊತೆ ಸಭೆ ನಡೆಸಿ ಅನುಮತಿ ನೀಡುವ ಮೊದಲು ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಎನ್‌ಓಸಿ ಪಡೆದು ಪರವಾನಿಗೆ ನೀಡಬೇಕು ಎಂದು ಹೇಳಿದರು. ಗಣೇಶ ಮೂರ್ತಿಗಳ ಮೆರವಣಿಗೆ ಸಮಯದಲ್ಲಿ ಪ್ರತಿಷ್ಠಾಪನಾ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸಲು ಪೂರ್ವಾನುಮತಿ ಪಡೆದುಕೊಳ್ಳದೇ ಇರುವವರಿಗೆ ಪಟಾಕಿ ಬಳಕೆಗೆ ಅವಕಾಶ ನೀಡಬಾರದು. ಯಾವುದೇ ಇತರೇ ಧರ್ಮದ ಧಾರ್ಮಿಕ ಕೇಂದ್ರಗಳ ಮುಂದೆ ಹಾಗೂ ಸೂಕ್ಷö್ಮ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸದಂತೆ ಸೂಚಿಸಬೇಕು ಎಂದರು. ಗಣೇಶ ಮೂರ್ತಿಗಳ ಮೆರವಣಿಗೆ ಸಮಯದಲ್ಲಿ ವಿಡಿಯೋ ಗ್ರಾಫಿಂಗ್ ಮಾಡಬೇಕು. ಸ್ಕೆöÊ ಸೆಂಟ್ರಿ ಮಾಡುವ ಸಿಬ್ಬಂದಿಗಳು ಸಮವಸ್ತçದಲ್ಲಿದ್ದು, ಸಾರ್ವಜನಿಕವಾಗಿ ಕಾಣಿಸುವಂತೆ ಹಾಜರಿದ್ದು ಕರ್ತವ್ಯ ನಿರ್ವಹಿಸಬೇಕು. ಮೆರವಣಿಗೆಯ ಸಮಯದಲ್ಲಿ ಸಾರ್ವಜನಿಕರಿಗೆ ತಾವು ಸಿ.ಸಿ.ಟಿ.ವಿ ಕ್ಯಾಮೆರಾ ರಲ್ಲಿ ಹಾಗೂ ವಿಡಿಯೋ ಗ್ರಾಫಿಂಗ್‌ನಲ್ಲಿ ಸೆರೆಯಾಗುತ್ತಿದ್ದೀರಿ ಎಂದು ಮನವರಿಕೆ ಮಾಡಿಕೊಡಬೇಕು ಎಂದರು. ಕಳೆದ ವರ್ಷಗಳಲ್ಲಿ ಗಣೇಶ ಪ್ರತಿಷ್ಠಾಪಿಸುವ ಸಂಬAಧ ಗಲಾಟೆ ನಡೆದ ಪ್ರದೇಶಗಳಲ್ಲಿ ಪ್ರಸ್ತುತದಲ್ಲಿ ಸೂಕ್ತ ರೀತಿಯ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಸಂಬAಧಿಸಿದ ಇಲಾಖೆಯಿಂದ ಅನುಮತಿ ಪತ್ರ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಅನುಮತಿ ಪಡೆಯದೇ ಇದ್ದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ರಾತ್ರಿ ಗಸ್ತು ಚೆಕ್ಕಿಂಗ್, ಉಸ್ತುವಾರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಪ್ರಮುಖ ಗಣೇಶ ಪ್ರತಿಷ್ಠಾಪನಾ ಸ್ಥಳಗಳು, ಮಸೀದಿಗಳು ಮತ್ತು ಇನ್ನಿತರ ಪ್ರಮುಖ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಭೇಟಿ ನೀಡಿದ ಕುರಿತಾದ ಮಾಹಿತಿಯನ್ನು ಕಂಟ್ರೋಲ್ ರೂಂ ಗೆ ರವಾನಿಸಬೇಕು. ರಾತ್ರಿ ಗಸ್ತು ಅಧಿಕಾರಿಗಳು ತಮ್ಮ ವಾಹನಗಳ ಟಾಪ್ ಲೈಟ್‌ಗಳನ್ನು ಕಡ್ಡಾಯವಾಗಿ ಬಳಸಬೇಕು. ತಮ್ಮ ಗಸ್ತು ಪುಸ್ತಕದಲ್ಲಿ ನಮೂದು ಮಾಡಬೇಕು. ಈ ಕುರಿತು ಪಿ.ಐ., ಜಿಲ್ಲಾ ನಿಸ್ತಂತು ಘಟಕ ದವರು ರಿಜಿಸ್ಟರ್‌ನಲ್ಲಿ (ಆಯಾ ದಿನದ) ನಮೂದಿಸಬೇಕು ಎಂದರು. *ವಿಸರ್ಜನೆ ದಿನದಂದು ಕಟ್ಟೆಚ್ಚರ ವಹಿಸಿ:* ಗಣೇಶ ಮೂರ್ತಿ ವಿಸರ್ಜನೆಯ ದಿನಗಳಂದು ಮೆರವಣಿಗೆಯ ಸಮಯದಲ್ಲಿ ಎಸ್‌ಪಿ, ಎಎಸ್‌ಪಿ, ಡಿಎಸ್‌ಪಿ, ಸಿಪಿಐ, ಪಿಐ, ಪಿಎಸ್‌ಐ ಅಧಿಕಾರಿಗಳು ಸೂಕ್ಷö್ಮ ಹಾಗೂ ಅತಿ ಸೂಕ್ಷö್ಮ ಪ್ರದೇಶಗಳಾದ ದೇವಸ್ಥಾನ, ಚರ್ಚ್, ಮಸೀದಿ ಇತ್ಯಾದಿ ಜನಸಂದಣಿ ಪ್ರದೇಶಗಳಲ್ಲಿ ಹಾಜರಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚರ ವಹಿಸಬೇಕು ಎಂದು ಐಜಿಪಿ ಅವರು ಹೇಳಿದರು. ಗಣೇಶ ಪ್ರತಿಷ್ಠಾಪನಾ ಸ್ಥಳಗಳಲ್ಲಿ, ವಿಸರ್ಜನಾ ಮೆರವಣಿಗೆ ಮಾರ್ಗ ಮತ್ತು ವಿಸರ್ಜನಾ ಸ್ಥಳಗಳಲ್ಲಿ ಸಿ.ಸಿ. ಟಿವಿ ಅಳವಡಿಸಬೇಕು. ವಿಸರ್ಜನಾ ಮೆರೆವಣಿಗೆ ಮಾರ್ಗ ಹಾಗೂ ವಿಸರ್ಜನಾ ಸ್ಥಳಗಳಿಗೆ ಸಂಬAಧಿಸಿದAತೆ ಪ್ರತ್ಯೇಕವಾಗಿ ಬೇರೆ ಬೇರೆ ವಿಸರ್ಜನಾ ಮಾರ್ಗಗಳು ಹಾಗೂ ಸ್ಥಳಗಳನ್ನು ನಿಗಧಿಪಡಿಸಬೇಕು. ವಿಸರ್ಜನೆ ಸ್ಥಳಗಳ ಹತ್ತಿರ ಸಾಕಷ್ಟು ಬೆಳಕಿನ ವ್ಯವಸ್ಥೆ ಮಾಡಬೇಕು ಎಂದರು. ಗಣೇಶ ವಿಸರ್ಜನಾ ಮೆರವಣಿಗೆ ಮಾರ್ಗದಲ್ಲಿನ ವ್ಯವಸ್ಥೆಗಳ ಕುರಿತು ಸ್ಥಳೀಯ ಆಡಳಿತ ಸಂಸ್ಥೆ, ವಿದ್ಯುತ್ ವಿತರಣಾ ಸಂಸ್ಥೆ, ಅಗ್ನಿಶಾಮಕ ದಳ ಹಾಗೂ ಇತರೇ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಂದ ಅಗತ್ಯ ಸಹಕಾರ ಪಡೆದು ಯಾವುದೇ ಅವ್ಯವಸ್ಥೆ ಉಂಟಾಗದAತೆ ನೋಡಿಕೊಳ್ಳಬೇಕು. ಸಂಬAಧಪಟ್ಟ ಪೊಲೀಸ್ ಅಧೀಕ್ಷಕರು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಕೃತಕ ವಿಸರ್ಜನಾ ಸ್ಥಳಗಳನ್ನು ನಿರ್ಮಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಡಿವೈಎಸ್‌ಪಿಗಳು, ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. --------------

ಮೋಟಾರು ಸೈಕಲ್ ವಿಮಾ ಮೊತ್ತ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಬಳ್ಳಾರಿಯ ಪ್ರೋ.ಫೊರಾಜೆನ್ ಸೀಡ್ಸ್ ಪ್ರೆöÊವೇಟ್ ಲಿಮಿಟೆಡ್ ನ ನಿರ್ದೇಶಕ ಕೆ.ಅನಿಲ್ ಕುಮಾರ್ ರೆಡ್ಡಿ ಅವರ ಕಳ್ಳತನವಾದ ಮೋಟಾರು ಸೈಕಲ್ ನ ವಿಮಾ ಮೊತ್ತ ಪಾವತಿಸುವಂತೆ ಹುಬ್ಬಳ್ಳಿಯ ಚೋಲ ಎಂಎಸ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ನ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ಆಯೋಗವು ಆದೇಶಿಸಿದೆ. ಕೆ.ಅನಿಲ್ ಕುಮಾರ್ ರೆಡ್ಡಿ ತಮ್ಮ ವಾಹನ ಸಂ. ಕೆಎ 34 ಇಪಿ 8879 ಗೆ 16-01-2023 ರಿಂದ 15-01-2024 ರವರೆಗಿನ ಅವಧಿಗೆ ವಿಮೆ ಮಾಡಿಸಿದ್ದರು. ವಿಮಾ ಪಾಲಿಸಿ ಚಾಲ್ತಿ ಅವಧಿಯಲ್ಲಿ 05-02-2023 ರಂದು ಮೋಕಾ ಗ್ರಾಮದಲ್ಲಿ ಕಾಣೆಯಾಗಿದ್ದು, ಈ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು ಹಾಗೂ ವಾಹನವು ಪತ್ತೆಯಾಗದ ಕಾರಣ ಪೋಲಿಸ್ ಇಲಾಖೆಯಿಂದ ನ್ಯಾಯಾಲಯಕ್ಕೆ “ಸಿ” ಅಂತಿಮ ವರದಿ ಸಲ್ಲಿಸಿದ್ದರು. ವಾಹನಕ್ಕೆ ಸಂಬAಧಿಸಿದ ದಾಖಲೆ ಹಾಗೂ ಪೊಲೀಸ್ ವರದಿ ಸೇರಿ ವಿಮಾ ಕಂಪನಿಗೆ ರೂ.72,022 ಮತ್ತು ಸೇವಾ ನ್ಯೂನ್ಯತೆ, ದೂರಿನ ವೆಚ್ಚ ಪಾವತಿಸುವಂತೆ ಆಯೋಗಕ್ಕೆ ದೂರು ಸಲ್ಲಿಸಿದ್ದರು. ವಿಮಾ ಕಂಪನಿಯು ಪ್ರಕರಣದಲ್ಲಿ ಹಾಜರಾಗಿ ವಾಹನವು ಕಂಪನಿಯ ನಿರ್ದೇಶಕ ಹೆಸರಿನಲ್ಲಿರುವುದರಿಂದ ದೂರುದಾರರು ಗ್ರಾಹಕರಾಗುವುದಿಲ್ಲ ಹಾಗೂ ವಿಮಾ ಕಂಪನಿಗೆ ಕಳ್ಳತನವಾದ 424 ದಿನಗಳ ನಂತರ ಕ್ಲೆöÊಮ್ ಸಲ್ಲಿಸಿರುವುದರಿಂದ ವಿಮಾ ಪಾಲಿಸಿಯ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂದು ಕ್ಲೆöÊಮ್‌ನ್ನು ತಿರಸ್ಕರಿಸಿರುವುದಾಗಿ ಆಯೋಗಕ್ಕೆ ತಕರಾರು ಸಲ್ಲಿಸಿದ್ದರು. ಆಯೋಗದ ಅಧ್ಯಕ್ಷರಾದ ಎನ್.ತಿಪ್ಪೇಸ್ವಾಮಿ ಮತ್ತು ಸದಸ್ಯರಾದ ಮಾರ್ಲಾ ಶಶಿಕಲಾ ಅವರು ಪ್ರಕರಣದ ದಾಖಲಾತಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ವಾದ ವಿವಾದ ಆಲಿಸಿದ ನಂತರ ದೂರುದಾರರು ವಿಮಾ ಪಾಲಿಸಿಗಾಗಿ ವಿಮಾ ಕಂತು ಪಾವತಿಸುವುದರಿಂದ ಗ್ರಾಹಕರಾಗಿರುತ್ತಾರೆ ಹಾಗೂ ವಿಮಾ ಕಂಪನಿಯು ಕ್ಲೆöÊಮ್‌ನ್ನು ಯಾವ ದಿನಾಂಕಕ್ಕೆ ಸಲ್ಲಿಸಿರುವುದೆಂದು ಆಯೋಗಕ್ಕೆ ದಾಖಲಾತಿ ಒದಗಿಸದಿರುವುದು ಸೇವಾ ನಿರ್ಲಕ್ಷö್ಯತನ ಎಂದು ಪರಿಗಣಿಸಿದೆ. ದೂರುದಾರರು ಕೂಡ ವಿಮಾ ಪಾಲಿಸಿಯ ಷರತ್ತನ್ನು ಉಲ್ಲಂಘಿಸಿದ ಕಾರಣ ನಾನ್- ಸ್ಟಾö್ಯಂಡರ್ಡ್ ಆಧಾರದಲ್ಲಿ ಪಾಲಿಸಿ ಮೊತ್ತದ ಶೇ.75 ರಷ್ಟು ಅಂದರೆ ರೂ.54,000, ಮಾನಸಿಕ ಹಿಂಸೆಗೆ ಪರಿಹಾರ ರೂ.10,000 ಮತ್ತು ದೂರಿನ ವೆಚ್ಚ ಮೊತ್ತ ರೂ.5,000 ಗಳನ್ನು ವಿಮಾ ಕಂಪನಿಯು ದೂರುದಾರರಿಗೆ 45 ದಿನಗಳೊಳಗಾಗಿ ಪಾವತಿಸುವಂತೆ, ತಪ್ಪಿದಲ್ಲಿ ರೂ.54,000 ಗಳಿಗೆ ಶೇ.8 ರಷ್ಟು ಬಡ್ಡಿ ಪಾವತಿಸುವಂತೆ ಆಯೋಗ ಆದೇಶಿಸಿದೆ. --------------

ಅಪಘಾತ ವಿಮೆ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಅಪಘಾತಕ್ಕೀಡಾಗಿ ಸಾವನ್ನಪ್ಪಿದ ನಗರದ ನಿವಾಸಿ ದಿಗಂತ ಶಫೀ ಎಂಬುವವರಿಗೆ ಅಪಘಾತ ವಿಮೆ ಪಾವತಿಸುವಂತೆ ಮೆ.ಓರಿಯೆಂಟಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ನ ಶಾಖಾ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ಆಯೋಗವು ಆದೇಶಿಸಿದೆ. ದಿಗಂತ ಶಫೀ ತಮ್ಮ ಮೋಟಾರು ಸೈಕಲ್ ಸಂ. ಕೆಎ 34/ಇಪಿ 1257 ಗೆ 01-02-2023 ರಿಂದ 30-11-2024 ರ ಅವಧಿಗೆ ವಿಮಾ ಕಂಪನಿಯಿAದ ವಿಮಾ ಪಾಲಿಸಿ ಪಡೆದಿದ್ದರು. 03-06-2024 ರಂದು ಜೋಳದರಾಶಿ ಗ್ರಾಮದ ಬಳಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡು ಬಿಎಂಸಿಆರ್‌ಸಿ (ವಿಮ್ಸ್) ಆಸ್ಪತ್ರೆಗೆ ದಾಖಲೆಗೊಂಡು 08-06-2024 ರಂದು ನಿಧನ ಹೊಂದಿದ್ದರು. ಅವರ ಪತ್ನಿ ಹೀನಾ ಕೌಸರ್ ಆ ಪ್ರದೇಶದ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ವಿಮಾ ಕಂಪನಿಗೆ ಮಾಹಿತಿ ಸಹ ನೀಡಿದ್ದರು. ಸೂಕ್ತ ದಾಖಲೆ ಸಲ್ಲಿಸಿದ್ದ ಅವರ ಕ್ಲೆöÊಮ್‌ನ್ನು ತಿರಸ್ಕರಿಸಿರುವುದಿಲ್ಲ ಮತ್ತು ವಿಮಾ ಮೊತ್ತವನ್ನೂ ಸಹ ಪಾವತಿಸಿರುವುದಿಲ್ಲ. ಹಾಗಾಗಿ ರೂ.15,00,000 ವೈಯಕ್ತಿಕ ಅಪಘಾತದ ಮೊತ್ತ ಹಾಗೂ ಇತರೆ ಪರಿಹಾರ ಕೋರಿ ಆಯೋಗಕ್ಕೆ ದೂರು ದಾಖಲಿಸಿದ್ದರು. ಆಯೋಗದ ಅಧ್ಯಕ್ಷರಾದ ಎನ್.ತಿಪ್ಪೇಸ್ವಾಮಿ ಹಾಗೂ ಸದಸ್ಯರಾದ ಮಾರ್ಲಾ ಶಶಿಕಲಾ ಅವರು ಉಭಯ ಪಕ್ಷಕಾರರ ವಾದ ವಿವಾದ ಆಲಿಸಿದ ನಂತರ ದೂರುದಾರರ ಪತಿಯು ಅಪಘಾತದ ಸಮಯದಲ್ಲಿ ಸೂಕ್ತ ಚಾಲನಾ ಪರವಾನಿಗೆ ಹಾಗೂ ವಾಹನದ ದಾಖಲೆಗಳನ್ನು ಸಮರ್ಪಕವಾಗಿ ಹೊಂದಿದ್ದರು ಎಂದು ತಿಳಿಸಿದೆ. ವಿಮಾ ಕಂಪನಿಯು ಪಾಲಿಸಿ ವಿತರಿಸುವ ಸಮಯದಲ್ಲಿ ಸೂಕ್ತ ದಾಖಲೆಗಳನ್ನು ಪರಿಶೀಲಿಸಿದ ನಂತರ ಪಾಲಿಸಿಯನ್ನು ವಿತರಿಸಬೇಕೇ ವಿನಃ ಕ್ಲೆöÊಮ್ ಸಲ್ಲಿಸಿದ ಸಮಯದಲ್ಲಿ ವಿಮಾ ಮೊತ್ತ ಪಾವತಿಸಲು ತಕರಾರು ತೆಗೆಯುವುದು ಸಮಂಜಸವಲ್ಲ. ಜೊತೆಗೆ ದೂರನ್ನು ತಡವಾಗಿ ಸಲ್ಲಿಸಿದ ಮಾತ್ರಕ್ಕೆ ಕ್ಲೆöÊಮ್‌ನ್ನು ತಿರಸ್ಕರಿಸುವಂತಿಲ್ಲ. ಇದು ಸೇವಾ ನ್ಯೂನ್ಯತೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ದೂರುದಾರರು ಯಾವ ದಿನಾಂಕದAದು ವಿಮಾ ಕಂಪನಿಗೆ ಮಾಹಿತಿ ಸಲ್ಲಿಸಿದ್ದಾರ ಎಂದು ಆಯೋಗಕ್ಕೆ ಸ್ಪಷ್ಟವಾಗಿ ಮಾಹಿತಿ ಸಲ್ಲಿಸದ ಕಾರಣ ಎದುರುದಾರರು ವೈಯಕ್ತಿಕ ಅಪಘಾತದ ವಿಮಾ ಮೊತ್ತ ರೂ.15,00,000 ಗಳಲ್ಲಿ ಶೇ.75 ರಷ್ಟು ಅಂದರೆ ರೂ.11,25,000 ಮತ್ತು ದೂರಿನ ವೆಚ್ಚ ರೂ.5000 ದೂರುದಾರರಿಗೆ ಪಾವತಿಸಬೇಕು ಎಂದು ಆದೇಶಿದೆ. ಪ್ರಕರಣದಲ್ಲಿ ವಿಮಾ ಕಂಪನಿಯು ಹಾಜರಾಗಿ ತಕರಾರು ಸಲ್ಲಿಸುತ್ತಾ ಅಪಘಾತವಾದ 6 ದಿನದ ನಂತರ ಪ್ರಕರಣವನ್ನು ದಾಖಲಿಸಿ ಪಾಲಿಸಿ ನಿಬಂಧನೆಗಳನ್ನು ಉಲ್ಲಂಘಿಸಿದ ಕಾರಣ ವಿಮಾ ಮೊತ್ತ ಪಾವತಿಸಿರುವುದಿಲ್ಲವೆಂದು ಸರ್ಮಥಿಸಿಕೊಂಡಿದೆ. -------------

ಮಕ್ಕಳೇ ದುಶ್ಚಟಗಳಿಂದ ದೂರವಿರಿ: ಬಸವಲಿಂಗ ಸ್ವಾಮಿ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಮಕ್ಕಳು ದುಶ್ಚಟಗಳಿಂದ ದೂರವಿರಬೇಕು ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಸಿದ್ದಯ್ಯನ ಕೋಟೆಯ ವಿಜಯ ಮಹಾಂತೇಶ್ವರ ಶಾಖಾಮಠದ ಬಸವಲಿಂಗ ಮಹಾಸ್ವಾಮಿ ಚಿತ್ತರಗಿ ಅವರು ಹೇಳಿದರು. ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನಲ್ಲಿ “ಮಕ್ಕಳ ಬದುಕಿಗೆ ಶರಣರ ಚಿಂತನೆಗಳು” ಎಂಬ ವಿಷಯ ಕುರಿತು ಸೋಮವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗುಟ್ಕಾ, ತಂಬಾಕು, ಮದ್ಯಪಾನ ಇವುಗಳಿಂದ ದೂರವಿರಬೇಕು. ಇವು ಆರೋಗ್ಯ ಮತ್ತು ಜೀವನ ಹಾಳು ಮಾಡುತ್ತವೆ. ಬಸವಣ್ಣನವರ ವಚನಗಳನ್ನು ಅಧ್ಯಯನ ಮಾಡಿ, ಆದರ್ಶ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ರೂಧಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿಜಯ ಮಹಾಂತೇಶ್ವರ ಶಾಖಾಮಠದ ಕಾರ್ಯದರ್ಶಿ ಕಾಂತರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪೂಜ್ಯರು ರಾಜ್ಯದ ಹಲವಾರು ಜಿಲ್ಲೆಗಳಲ್ಲಿರುವ ಶಾಲಾ-ಕಾಲೇಜುಗಳಿಗೆ ಹೋಗಿ ಮಕ್ಕಳ ಬದುಕಿಗೆ ದಾರಿದೀಪವಾಗುವ ಉಪನ್ಯಾಸ ನೀಡುವ ಮೂಲಕ ಮಕ್ಕಳ ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಕೊಳ್ಳುವ ಕಾಯಕ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಲೇಜಿನ ಪ್ರಾಚಾರ್ಯ ಕೆ.ಸುಂಕಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಮಕ್ಕಳು ಮಹಾನ್ ದಾರ್ಶನಿಕರ ಜೀವನದ ಶೈಲಿಗಳನ್ನು ಆಳವಡಿಸಿಕೊಳ್ಳಬೇಕು. ಪಠ್ಯದ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳ ಉಪನ್ಯಾಸಗಳು ವಿದ್ಯಾರ್ಥಿಗಳ ಬದುಕನ್ನು ಹಸನಾಗಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಗೀತಕಾರರಾದ ಮುಂಕೇಶ್ ಮತ್ತು ಯೋಗೇಶ್ ವಚನಸಂಗೀತ ಪ್ರಸ್ತುತ ಪಡಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಮೇಶ್ ಬುಜ್ಜಿ, ಹಿರಿಯ ಉಪನ್ಯಾಸಕ ಟಿ.ತಿಮ್ಮಪ್ಪ, ರಾಜ್ಯಶಾಸ್ತç ಉಪನ್ಯಾಸಕ ನಾಗರೆಡ್ಡಿ ಕೆ.ವಿ., ಗಣಿತ ಉಪನ್ಯಾಸಕ ಕೆ.ವಿ.ಚಂದ್ರಹಾಸ, ಉಪನ್ಯಾಸಕ ಹೆಚ್.ಕೆ.ಮಲ್ಲಿಕಾರ್ಜುನ್ ಶೆಟ್ಟಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಇನ್ನೀತರರು ಉಪಸ್ಥಿತರಿದ್ದರು. --------------

ವಿಶೇಷಚೇತನರ ಕಲ್ಯಾಣ ಇಲಾಖೆ: ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಎಸ್.ಎಸ್.ಎಲ್.ಸಿ ನಂತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆಫ್‌ಲೈನ್ ಮೂಳಕ ಅರ್ಜಿ ಆಹ್ವಾನಿಸಲಾಗಿದೆ. ಉನ್ನತ ಶಿಕ್ಷಣ ಪಡೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಮತ್ತು ಔದ್ಯೋಗಿಕ ಶಿಕ್ಷಣಗಳಿಗೆ ನಿಯಮಾನುಸಾರ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿರುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸಲು ಸರ್ಕಾರವು ಆದೇಶಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಎಂಆರ್‌ಡಬ್ಲೂö್ಯ ಗಳಾದ ಬಳ್ಳಾರಿ, ಕಂಪ್ಲಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ನಗರದ ಕಂಟೋನ್ ಮೆಂಟ್ ನ ಶಾಂತಿಧಾಮ ಆವರಣದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ. -------------

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹರೀಶ್ ಕುಮಾರ್ ಸ್ವಾಮಿ ಎನ್ನುವ 26 ವರ್ಷದ ವ್ಯಕ್ತಿಯು ಆ.11 ರಂದು ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕರಿ ಅವರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.8 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಮೂಗಿನ ಮೇಲೆ ಒಂದು ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಆಂಗ್ಲ ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192 ಅಥವಾ ಪಿಎಸ್‌ಐ ಮೊ.9480803082, ಪಿಐ ಮೊ.9480803046 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಫಲಾನುಭವಿ ಆಧಾರಿತ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಸೇವಾಸಿಂಧು ತಂತ್ರಾAಶದ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಅಥವಾ ನೇರವಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/sevasindhu/kannada ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. *ಫಲಾನುಭವಿ ಆಧಾರಿತ ಯೋಜನೆಗಳು:* ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಬ್ರೆöÊಲ್ ಕಿಟ್, ಟಾಕಿಂಗ್ ಲ್ಯಾಪ್ ಟ್ಯಾಪ್ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಜೆರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಶಾಂತಿಧಾಮ ಆವರಣ, ಕಂಟೋನ್ ಮೆಂಟ್, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ, ಕಂಪ್ಲಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕುರುಗೋಡು-9538000887 ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂö್ಯ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂö್ಯಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------------

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಆಂಧ್ರಾಳ್ ಗ್ರಾಮದ ರಾಮ-ಲಕ್ಷö್ಮಣ ದೇವಸ್ಥಾನದ ಹತ್ತಿರ ಸುಮಾರು 50-55 ವರ್ಷದ ವಯಸ್ಸಿನ ಅನಾಮಧೇಯ ವ್ಯಕ್ತಿಯು ಅಸ್ವಸ್ಥನಾಗಿ ಬಿದ್ದು, ಬಿಎಂಸಿಆರ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆ.20 ರಂದು ಸಾವನ್ನಪ್ಪಿದ್ದು, ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಕೋರಿದ್ದಾರೆ. ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಕಪ್ಪು ಮಿಶ್ರಿತ ಬಿಳಿ ಕೂದಲು ಮತ್ತು ಗಡ್ಡ ಹೊಂದಿರುತ್ತಾನೆ. ಮಾಸಿದ ಕಪ್ಪು ಮತ್ತು ಬಿಳಿ ಬಣ್ಣದ ಮಿಶ್ರಿತ ಅಂಗಿ, ಕಪ್ಪು ನೀಲಿ ಬಣ್ಣದ ಗೆರೆಗಳುಳ್ಳ ಲುಂಗಿ ಮತ್ತು ನೇರಳೆ ಬಣ್ಣದ ಒಳಉಡುಪು ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಆ.25(ಕರ್ನಾಟಕ ವಾರ್ತೆ): ಬಳ್ಳಾರಿ ರೈಲ್ವೇ ನಿಲ್ದಾಣದ ಹೊಸಪೇಟೆ ಮತ್ತು ವ್ಯಾಸನಕೇರಿ ರೈಲು ನಿಲ್ದಾಣಗಳ ಮಧ್ಯದ ರೈಲ್ವೇ ಕಿ.ಮೀ ನಂ.10/400 ರ ರೈಲು ಹಳಿಯಲ್ಲಿ ಚಲಿಸುವ ರೈಲು ಗಾಡಿ ಸಂ.07396 ಗೆ ಸುಮಾರು 55 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಅಡ್ಡಲಾಗಿ ಬಂದು ಆ.21 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ಚಹರೆ: ಸುಮಾರು ಎತ್ತರ 5.6 ಅಡಿ, ಸದೃಢ ದೇಹ, ಸಾಧಾರಣ ಕಪ್ಪು ಮೈ ಬಣ್ಣ, ದುಂಡು ಮುಖ, ಅಗಲವಾದ ಕಿವಿ, ದಪ್ಪ ಮೂಗು, ತಲೆಯ ನೆತ್ತಿಯ ಮೇಲೆ ಕೂದಲು ಇರುವುದಿಲ್ಲ. ಕಪ್ಪು ಮಿಶ್ರಿತ ಬಿಳಿ ಕೂದಲು, ಸಣ್ಣ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೃತನ ಮೈ ಮೇಲಿನ ಬಟ್ಟೆ: ಬಿಳಿ ಗೆರೆಗಳುಳ್ಳ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಬಿಳಿ ಬಣ್ಣದ ಟೀ-ಶರ್ಟ್, ನೀಲಿ ಬಣ್ಣದ ಪ್ಯಾಂಟ್, ಪಾಚಿ ಬಣ್ಣದ ಒಳಉಡುಪು, ಪಾಚಿ ಬಣ್ಣದ ಚಪ್ಪಲಿ ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯ ದೂ.08392-276063, ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ.080-22871291 ಗೆ ಸಂಪರ್ಕಿಸಬಹುದು ಎಂದು ಕೋರಿದೆ. -------------

ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ | ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ: ಆಯೋಗದ ಅಧ್ಯಕ್ಷ ಮಧುಸೂಧನ್ ಆರ್.ನಾಯ್ಕ ಮನವಿ

ಬಳ್ಳಾರಿ,ಆ.24(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವು ಆ.23 ರಿಂದ ಪ್ರಾರಂಭಗೊಂಡಿದ್ದು, ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್.ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ. ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗುತ್ತದೆ. ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆ‌ರ್.ಆ‌ರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ 'ಆ್ಯಪ್' ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ, ಆಯೋಗದ ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ. ಇದು ರಾಜ್ಯದಾದ್ಯಂತ ಇರುವ ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ( ESCOM) ಗಳ ಅಪಾರ ಸಂಖ್ಯೆಯ 'ಮೀಟರ್ ರೀಡರ್' (Meter Readers) ಗಳನ್ನು ಒಳಗೊಂಡಿರುತ್ತದೆ. ಕರ್ನಾಟಕ ರಾಜ್ಯವು ಎಲ್ಲಾ ಮನೆಗಳನ್ನು ವಿದ್ಯುದ್ದೀಕರಣ ಗೊಳಿಸುವುದರಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯವಾಗಿರುವುದರಿಂದ ಎಸ್ಕಾಂಗಳ ಮೀಟರ್ ರೀಡರ್ ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು 'ಜಿಯೋ ಟ್ಯಾಗ್' ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಟಿಸುತ್ತಾರೆ. ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವರ‌್ ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ 'ಮನೆ ಪಟ್ಟಿ' ಸಮೀಕ್ಷೆಯ ಉದ್ದೇಶಕ್ಕಾಗಿ 'ಮ್ಯಾಪಿಂಗ್' ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ 'ಸ್ಥಳ' (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ 'ವಿಶಿಷ್ಟ್ಯ (Unique Number) ಸಂಖ್ಯೆಯನ್ನು' ನೀಡಲಾಗುತ್ತದೆ. [ಅಪಾರ್ಟ್‌ ಮೆಂಟ್ ಗಳು / ವಾಸಸ್ಥಳಗಳ ಕ್ಲಸ್ಟರ್ ಸೇರಿದಂತೆ] ತಮ್ಮ 'ಬಿಲ್ಲಿಂಗ್ ಸೈಕಲ್'ನಲ್ಲಿ ಮೀಟ‌ರ್ ರೀಡರ್ ಗಳು ಆಗಸ್ಟ್ 23, 2025 ರಿಂದ ಸದರಿ ಕೆಲಸವನ್ನು ಪ್ರಾರಂಭಿಸುತ್ತಾರೆ ಮತ್ತು ಅಭಿವೃದ್ಧಿ ಪಡಿಸಲಾದ ಆ್ಯಪ್ ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ. ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ 'ದತ್ತಾಂಶಗಳನ್ನು ಸೆರೆಹಿಡಿಯುವುದು' ಮಾತ್ರವಲ್ಲದೆ, ಅಂದಾಜು 7 ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ. ಮನೆ ಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಕಾರ್ಯವಾಗಿದೆ. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗ ಮನವಿ ಮಾಡಿದೆ. ========

ಪೋಕ್ಸೋ ಕಾಯ್ದೆ ಅನುಷ್ಠಾನ; ಕಲಬುರಗಿ ವಿಭಾಗೀಯ ಮಟ್ಟದ ಸಮಾಲೋಚನಾ ಸಭೆಯಲ್ಲಿ ಜಿಪಂ ಸಿಇಒ ಅಭಿಮತ | ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ತಡೆಗಟ್ಟಲು ಅಧಿಕಾರಿಗಳ ಸಹಕಾರ ಅಗತ್ಯ: ಮಹಮ್ಮದ್ ಹಾರಿಸ್ ಸುಮೇರ್

ಬಳ್ಳಾರಿ,ಆ.24(ಕರ್ನಾಟಕ ವಾರ್ತೆ): ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿವಿಧ ಇಲಾಖೆಗಳ ಪರಸ್ಪರ ಸಹಕಾರ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಅವರು ಹೇಳಿದರು. ಶನಿವಾರ, ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ಹಾಗೂ ಎನ್‍ಪೋಲ್ಡ್ ಪ್ರೋಅಕ್ಟಿವ್ ಹೆಲ್ತ್ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ವಿಶೇಷ ಮಕ್ಕಳ ಪೊಲೀಸ್ ಘಟಕ, ಸರ್ಕಾರಿ ಅಭಿಯೋಜಕರು, ವೈದ್ಯಾಧಿಕಾರಿಗಳು, ಬಾಲಮಂದಿರದ ಅಧೀಕ್ಷಕರು, ಕಾನೂನು ಪರಿವೀಕ್ಷಾಣಾಧಿಕಾರಿಗಳು, ಬೆಂಬಲ ವ್ಯಕ್ತಿಗಳು ಮತ್ತು ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ರಕ್ಷಣೆಗೆ ಹಲವಾರು ಇಲಾಖೆಗಳು ಸಹಭಾಗಿದಾರರಾಗಿ ಕಾರ್ಯನಿರ್ವಹಿಸುತ್ತಿವೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಗಳು ರಚಿಸಿದ್ದು, ಅವುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು. ಸ್ಥಳೀಯ ಪಂಚಾಯತಿಯ ಸಂಬಂಧಿತ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುವ ಮೂಲಕ ಮಕ್ಕಳ ಹಾಜರಾತಿ ಮತ್ತು ಸುರಕ್ಷತೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಶೇಷ ಮಕ್ಕಳ ಪೊಲೀಸ್ ಘಟಕ, ಶಿಕ್ಷಣ ಇಲಾಖೆ ಜೊತೆಗೂಡಿ ಶಾಲೆಯಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳು ಕಂಡುಬಂದ ಕೂಡಲೇ ಅಧಿಕಾರಿಗಳು ಎಫ್.ಐ.ಆರ್ ದಾಖಲಿಸಬೇಕು. ಪೋಕ್ಸೋ ಕಾಯ್ದೆಯು ಒಂದು ವಿಶಿಷ್ಟ ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅಪರಾಧಿಗಳಿಗೆ 3 ವರ್ಷದಿಂದ ಜೀವಾವಧಿ ಶಿಕ್ಷೆಗೆ ಅವಕಾಶವಿದೆ ಎಂದು ತಿಳಿಸಿದರು. ಪೋಕ್ಸೋ ಕಾಯ್ದೆಯ ಕುರಿತು ಜನರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಹಾಗಾಗಿ ಇಲಾಖೆಗಳ ನಡುವೆ ಉತ್ತಮ ಸಂವಹನ ಮತ್ತು ಸಹಯೋಗದ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್.ಎಂ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಮತ್ತು ಪಟ್ಟಣಗಳ ಸ್ಥಳೀಯ ಆಡಳಿತ ಸಂಸ್ಥೆಗಳು ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಪೋಕ್ಸೋ ಪ್ರಕರಣಗಳನ್ನು ಉತ್ತಮವಾಗಿ ನಿರ್ವಹಿಸಲು ಈ ಕಾಯ್ದೆಯ ವಿವಿಧ ಆಯಾಮಗಳ ಕುರಿತು ಅರಿತುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಎಲ್ಲಾ ಇಲಾಖೆಗಳು ಶ್ರಮಿಸುತ್ತಿದ್ದರೂ, ಇನ್ನೂ ಮಕ್ಕಳ ಮೇಲೆ ದೌರ್ಜನ್ಯ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ಮುಖ್ಯವಾಗಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದರಿಂದ ಇವುಗಳನ್ನು ತಡೆಗಟ್ಟಲು ಮತ್ತು ಸಂತ್ರಸ್ತರಿಗೆ ತುರ್ತಾಗಿ ನೆರವು ನೀಡುವಲ್ಲಿ ಎಲ್ಲಾ ಸಹಭಾಗಿ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದರು. ಎನ್‍ಪೋಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಖುಷಿ ಕುಶಲಪ್ಪ ಮತ್ತು ಪೊಲೀಸ್ ತರಬೇತಿ ಸಂಪನ್ಮೂಲ ವ್ಯಕ್ತಿ ರೋಹಿತ್‍ ಕಾರ್ಯಕ್ರಮದ ಧ್ಯೇಯೋದ್ದೇಶ ತಿಳಿಸಿಕೊಟ್ಟರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ನಿರೂಪಿಸಿದರು. ಈಶ್ವರ್ ರಾವ್ ಸ್ವಾಗತಿಸಿದರು. ಚನ್ನಬಸಪ್ಪ ವಂದಿಸಿದರು. ಈ ಸಂದರ್ಭದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ನವೀನ್‍ಕುಮಾರ್, ಉಪ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ನಂದಾರೆಡ್ಡಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್‍ಬಾಬು ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಎನ್‍ಫೋಲ್ಡ್ ಸಂಸ್ಥೆಯ ಸಿಬ್ಬಂದಿಗಳು, ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 80ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ========

ಶುಕ್ರವಾರ, ಆಗಸ್ಟ್ 22, 2025

ಅಪಘಾತ ವಿಮೆ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ನಗರದ ಗುಗ್ಗರಹಟ್ಟಿಯ ನಿವಾಸಿ ರಾಜೇಶ್.ಎ ಅವರಿಗೆ ಸಂಗನಕಲ್ಲು ಗ್ರಾಮದ ವ್ಯಾಪ್ತಿಯಲ್ಲಿ ಎತ್ತಿನಗಾಡಿಯ ವೇಗ ಮತ್ತು ನಿರ್ಲಕ್ಷö್ಯತನದ ಚಾಲನೆಯಿಂದ ಅಪಘಾತದಲ್ಲಿ ಗಾಯಗೊಂಡು ಎಡಗಾಲು ಮತ್ತು ಕಣ್ಣಿಗೆ ತೀವ್ರ ಪೆಟ್ಟಾಗಿದ್ದು, ಅಪಘಾತದ ವಿಮಾ ಮೊತ್ತದ ಪರಿಹಾರ ಪಾವತಿಸುವಂತೆ ಬೆಂಗಳೂರಿನ ಚೋಲಾ ಎಂ.ಎಸ್.ಜನರಲ್ ಇನ್ಸೂರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗವು ಆದೇಶಿಸಿದೆ. ರಾಜೇಶ್.ಎ ಅವರು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆ.ಎ.34/ಇ.ಎವ್.2692 ಗೆ 5 ವರ್ಷಗಳ ಅವಧಿಗೆ ರೂ.8,706 ಗಳ ವಿಮಾ ಕಂತು ಹಾಗೂ ರೂ.375 ಗಳನ್ನು ವೈಯಕ್ತಿಕ ಅಪಘಾತದ ವಿಮಾ ಪಾಲಿಸಿಗೆ ಕಂತು ಪಾವತಿಸಿದ್ದು, ಪಾಲಿಸಿ ಚಾಲ್ತಿ ಅವಧಿಯೊಳಗೆ 29-01-2022 ರಂದು ಅಪಘಾತ ಸಂಭವಿಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು ಮತ್ತು ವಿಮಾ ಕಂಪನಿಗೆ ವೈಯಕ್ತಿಕ ಅಪಘಾತದ ವಿಮಾ ಮೊತ್ತದ ಪರಿಹಾರ ರೂ.7,50,000 ಮತ್ತು ಇತರೆ ವೆಚ್ಚ ಪಾವತಿಸುವಂತೆ ದೂರು ಸಲ್ಲಿಸಿದ್ದರು. ವಿಮಾ ಕಂಪನಿಯು ಅಪಘಾತವಾಗಿ ಮರಣ ಹೊಂದಿದ್ದರೆ ಮಾತ್ರ ಪಾಲಿಸಿ ಮೊತ್ತ ಅರ್ಹ. ಆದರೆ ಗಾಯಗೊಂಡಲ್ಲಿ ಪರಿಹಾರ ಅರ್ಹವಿಲ್ಲ ಎಂದು ಕ್ಲೆöÊಮ್‌ನ್ನು ತಿರಸ್ಕರಿಸಿದ್ದರು. ಆಯೋಗದ ಅಧ್ಯಕ್ಷರಾದ ಎನ್.ತಿಪ್ಪೇಸ್ವಾಮಿ ಹಾಗೂ ಸದಸ್ಯರಾದ ಮಾರ್ಲಾ ಶಶಿಕಲಾ ಅವರು ಉಭಯ ಪಕ್ಷಕಾರರ ವಾದ ವಿವಾದ ಆಲಿಸಿ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಪಾಲಿಸಿ ಶೆಡ್ಯೂಲ್‌ನಲ್ಲಿರುವಂತೆ ಒಂದು ವೇಳೆ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಶೇ.50 ಪರಿಹಾರ ಅರ್ಹವಿರುತ್ತದೆ. ಶೆಡ್ಯೂಲ್‌ನಲ್ಲಿರುವ ಅಂಶವನ್ನು ಪರಿಗಣಿಸದೇ ಕ್ಲೆöÊಮ್‌ನ್ನು ತಿರಸ್ಕರಿಸುವುದು ಎದುರುದಾರರ ಸೇವಾ ನ್ಯೂನತೆ ಆಗಿದೆ ಎಂದು ಆಯೋಗ ಅಭಿಪ್ರಾಯಪಟ್ಟಿತು. ಹಾಗಾಗಿ ದೂರುದಾರರಿಗೆ ಪಾಲಿಸಿ ಮೊತ್ತದ ಶೇ.50 ರಷ್ಟು ಮೊತ್ತ ರೂ. 7,50,000 ವೈಯಕ್ತಿಕ ಅಪಘಾತದ ಪರಿಹಾರದ ಮೊತ್ತ, ಸೇವಾ ನಿರ್ಲಕ್ಷö್ಯತೆಗೆ ರೂ.10,000 ಪರಿಹಾರ ಮತ್ತು ರೂ.5000 ದೂರಿನ ವೆಚ್ಚವನ್ನು 45 ದಿನಗಳೊಗಾಗಿ ಪಾವತಿಸುವಂತೆ ಆಯೋಗ ಆದೇಶಿಸಿದೆ. ---------------

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿಕೆ | ಬಳ್ಳಾರಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಉತ್ತಮ ಪ್ರಗತಿ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಬಳ್ಳಾರಿ ಜಿಲ್ಲೆಯಾದ್ಯಂತ ಮಹತ್ತರ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು. ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಉತ್ತಮವಾಗಿದೆ ಎಂದರು. ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯ ಒಟ್ಟು 54.49 ಲಕ್ಷ ಫಲಾನುಭವಿಗಳಿಗೆ ಸಹಾಯಧನ ನೆರವು ತಲುಪಿದ್ದು, ಈ ಯೋಜನೆಯಡಿ ಜಿಲ್ಲೆಗೆ 1089.80 ಕೋಟಿ ರೂ. (2025ರ ಫೆಬ್ರವರಿ ಮತ್ತು ಮಾರ್ಚ್ ಮಾಹೆ ಹೊರತುಪಡಿಸಿ) ಸರ್ಕಾರ ಪಾವತಿಸಿದೆ. ಇದೊಂದು ಮಹತ್ತರ ಮೈಲಿಗಲ್ಲಾಗಿದೆ ಎಂದರು. *ವಿಶೇಷ ಶಿಬಿರ ಆಯೋಜಿಸಿ:* ಜಿಲ್ಲೆಯಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ನೋಂದಾಯಿಸಿಕೊAಡ ಫಲಾನುಭವಿಗಳಿಗೆ ವಿವಿಧ ಕಾರಣಗಳಿಂದ ಹಣ ಪಾವತಿಯಾಗುತ್ತಿಲ್ಲ ಎಂದು ದೂರು ಕೇಳಿಬರುತ್ತಿವೆ. ಅವರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಇತ್ಯರ್ಥಕ್ಕೆ ಗ್ರಾಪಂ ವ್ಯಾಪ್ತಿಯಲ್ಲಿ ವಿಶೇಷ ಶಿಬಿರ ಆಯೋಜಿಸಬೇಕು ಎಂದು ತಾಪಂ ಇಒ ಗಳಿಗೆ ನಿರ್ದೇಶನ ನೀಡಿದ ಅವರು, ಎನ್‌ಸಿಪಿಐ ಲಿಂಕ್ ಮಾಡಿಸದೇ ಇರುವ 1098 ಮತ್ತು ಆಧಾರ್ ಇ-ಕೆವೈಸಿ ಮಾಡಿಸದೇ ಇರುವ 109 ಫಲಾನುಭವಿಗಳ ಮಾಹಿತಿ ಪಡೆದು ಕೂಡಲೇ ಪರಿಹರಿಸಬೇಕು ಎಂದು ಹೇಳಿದರು. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಒಟ್ಟು 1.81 ಕೋಟಿ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಒಟ್ಟು 292.29 ಕೋಟಿ ರೂ. ಡಿಬಿಟಿ ಮೂಲಕ ಹಣ ಪಾವತಿಸಲಾಗಿದ್ದು, 2025 ರ ಫೆಬ್ರವರಿ ತಿಂಗಳಿನಿAದ ಹಣ ಬದಲಾಗಿ, ಪಡಿತರ ಅಕ್ಕಿ ಮತ್ತು ಬದಲಾಗಿ ಜೋಳ ಸಹ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ಮಾಡುವವರು ಕಂಡುಬAದಲ್ಲಿ ಕೂಡಲೇ ಆ ವಾಹನ ಮತ್ತು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು. ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಿಕೊAಡ 2.86 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್ ಪ್ರಯೋಜನ ತಲುಪಿದ್ದು, ಪ್ರಗತಿ ಪ್ರಮಾಣ ಶೇ.95 ಪ್ರಗತಿಯಾಗಿದೆ. ಈ ಯೋಜನೆಗೆ ರೂ.322 ಕೋಟಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ವೆಚ್ಚವಾಗಿದೆ ಎಂದು ಜೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು. ಯುವ ನಿಧಿ ಯೋಜನೆ ಮೂಲಕ 8647 ನೋಂದಾಯಿಸಿಕೊAಡ ಅರ್ಹ ಅಭ್ಯರ್ಥಿಗಳಿಗೆ ಇಲ್ಲಿಯವರೆಗೆ ರೂ.16.72 ಕೋಟಿ ಹಣಕಾಸು ನೆರವು ತಲುಪಿದ್ದು, ಇದರಿಂದ ನಿರುದ್ಯೋಗ ಯುವಕರಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಸಭೆಗೆ ತಿಳಿಸಿದರು. ಇದೇ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುವ ಉದ್ಯೋಗ ಮೇಳಗಳಲ್ಲಿ ‘ಯುವ ನಿಧಿ’ ಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಅದೇರೀತಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಲಾಗಿದ್ದು, 5.36 ಕೋಟಿ ಪ್ರಯಾಣಗಳು ದಾಖಲಾಗಿವೆ. ಈ ಯೋಜನೆಯು ಕೂಡ ಶೇ.100 ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಯೋಜನೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ರೂ.207.20 ಕೋಟಿ ವೆಚ್ಚವಾಗಿದೆ ಎಂದು ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಜಿಪಂ ಸಿಇಒ ಅವರು ಪ್ರತಿಕ್ರಿಯಿಸಿ, ಬಳ್ಳಾರಿ ಜಿಲ್ಲೆಯು ಗಡಿಭಾಗವಾಗಿರುವುದರಿಂದ ಸಾಕಷ್ಟು ಮಹಿಳಾ ಪ್ರಯಾಣಿಕರು ಸಂಚರಿಸುತ್ತಾರೆ. ಈ ಸಂದರ್ಭದಲ್ಲಿ ಪೂರಕ ದಾಖಲೆ ಪರಿಶೀಲಿಸಿ ಟಿಕೇಟ್ ನೀಡಬೇಕು. ನಿಗಮಕ್ಕೂ ಒಳ್ಳೆಯ ಆದಾಯ ಬರುತ್ತಿರುವುದರಿಂದ ಹೊಸ ಬಸ್ ಗಳ ಖರೀದಿಗೆ ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಕುರುಗೋಡು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಕೂಡಲೇ ಅನುವು ಮಾಡಿಕೊಡಬೇಕು ಎಂದು ಕುರುಗೋಡು ತಾಲ್ಲೂಕು ಅಧ್ಯಕ್ಷರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಜಿಪಂ ಸಿಇಒ ಅವರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ವ್ಯವಸ್ಥೆ, ನಿಲ್ದಾಣದ ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ಯಾರಂಟಿ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಸಕಾಲಿಕ ಜಾರಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಸರ್ಕಾರದ ಕಲ್ಯಾಣ ಕಾರ್ಯಗಳು ತಲುಪುತ್ತಿರುವುದಕ್ಕೆ ಇದೊಂದು ಸಾಕ್ಷಿಯಾಗಿದೆ. ಅದೇರೀತಿಯಾಗಿ ತಾಪಂ ಮಟ್ಟದಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದು ಸರ್ಕಾರದ ನಿರ್ದೇಶನವಿದ್ದು, ತಾಲ್ಲೂಕು ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ತಾಲ್ಲೂಕಿನಲ್ಲಿ 3-4 ಗ್ರಾಮ ಪಂಚಾಯತ್ ಫಲಾನುಭವಿಗಳ ಸಮಸ್ಯೆ ಕುರಿತು ಗ್ರಾಮ ಸಭೆ ಅಥವಾ ಇನ್ನೀತರೆ ಪೂರಕ ಸಭೆ ಜರುಗಿಸಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ತಾಲ್ಲೂಕು ಸಮಿತಿ ರಚಿಸಬೇಕಿದೆ. ಈ ಕುರಿತು ಸರ್ಕಾರದ ನಿರ್ದೇಶನವಿದೆ ಎಂದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳು, ತಾಲ್ಲೂಕು ಅಧ್ಯಕ್ಷರುಗಳು, ಜಿಲ್ಲಾ ಸಮಿತಿ ಸದಸ್ಯರುಗಳು ಪಾಲ್ಗೊಂಡು ಗ್ಯಾರಂಟಿ ಅನುಷ್ಠಾನಕ್ಕೆ ಹಾಗೂ ಅರ್ಹರಿಗೆ ಯೋಜನೆ ತಲುಪಿಸುವಲ್ಲಿ ಇರುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಕುರುಗೋಡು ತಾಲ್ಲೂಕು ಅಧ್ಯಕ್ಷ ಜಿ.ಬಸವನಗೌಡ, ಕಂಪ್ಲಿ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್‌ರಾವ್, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷ ಮಾರುತಿ ವರಪ್ರಸಾದ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಸೇರಿದಂತೆ ತಾಪಂ ಇಒಗಳು ಹಾಗೂ ಇತರರು ಉಪಸ್ಥಿತರಿದ್ದರು. -----------------

ಶರಣಬಸವ ಅಮರಪ್ಪ ಗೆ ಪಿಹೆಚ್‌ಡಿ ಪದವಿ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಸ್ಯಶಾಸ್ತç ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾದ ಶರಣಬಸವ ಅಮರಪ್ಪ ಅವರಿಗೆ ಪಿಹೆಚ್‌ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಸಸ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕವಿತಾ ಸಾಗರ್ ಅವರ ಮಾರ್ಗದರ್ಶನದಲ್ಲಿ “ಟ್ಯಾಕ್ಸೋನೋಮಿಕ್ ಸ್ಟಡೀಸ್ ಆಫ್ ದಿ ಫ್ಯಾಮಿಲಿ ಪ್ಯಾಬೇಸಿ ಆಫ್ ಕರ್ನಾಟಕ” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ----------------