ಬುಧವಾರ, ಆಗಸ್ಟ್ 20, 2025
ಬಳ್ಳಾರಿ: ಸೆ.01 ರಂದು ಪ.ಜಾತಿ, ಪ.ಪಂಗಡ ಜನಾಂಗದವರ ಕುಂದು-ಕೊರತೆÀ ಸಭೆ
ಬಳ್ಳಾರಿ,ಆ.20(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಬಳ್ಳಾರಿ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಸೆ.01 ರಂದು ಮಧ್ಯಾಹ್ನ 12.30 ಗಂಟೆಗೆ ಬಳ್ಳಾರಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಸಮಸ್ಯೆಗಳಿದ್ದಲ್ಲಿ ಅಂದು ನಡೆಯುವ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬಹುದು ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ