ಶುಕ್ರವಾರ, ಆಗಸ್ಟ್ 29, 2025

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.01 ರವರೆಗೆ ಅವಧಿ ವಿಸ್ತರಣೆ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಹಿಂದುಳಿದ ವರ್ಗಗಳ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆ ನೀಡಲು ಸೆ.01 ರ ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು. ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ‌ ವಿವರಗಳಿಗೆ ದೂ.ಸಂಖ್ಯೆ 080-29506668 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ========

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ