ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆ.20 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಣೆ ಕುರಿತಂತೆ ಆ.08 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
--------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ