ಗುರುವಾರ, ಆಗಸ್ಟ್ 14, 2025
ಆ.17 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.14(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಯ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರನಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿAದ ಆ.17 ರಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ನಗರದ ಪ್ರದೇಶಗಳಾದ ಆರ್.ಕೆ.ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್‌ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಸಣ್ಣ ಮಾರ್ಕೆಟ್, ಕಾರ್ಕಲ ತೋಟ, ಸಾಯಿ ಕಾಲೋನಿ, ಆರ್.ಆರ್ ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂಭಾಗ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ