ಶನಿವಾರ, ಆಗಸ್ಟ್ 16, 2025

ಆ.17 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಎಲ್‌ಐಎಲ್‌ಓ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಯ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಆ.17 ರಂದು ಬೆಳಗ್ಗೆ 09 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* 110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ