ಸೋಮವಾರ, ಆಗಸ್ಟ್ 18, 2025

ಸೆ.17 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆ

ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ಕುಡತಿನಿ ಗ್ರಾಮದ ಕೆಐಎಡಿಬಿ ಕೈಗಾರಿಕಾ ಪ್ರದೇಶ ಹಂತ-2 ರಲ್ಲಿ ವಾರ್ಷಿಕ 2,16,000 ಟನ್ ಉತ್ಪಾದನಾ ಸಾಮರ್ಥ್ಯದೊಂದಿಗೆ “ಕೋಲ್ಡ್ ರೋಲ್ಡ್ ಗ್ರೇನ್ ಓರಿಯೆಂಟೆಡ್” ಸ್ಟೀಲ್ ಪ್ಲಾಂಟ್ ಘಟಕವನ್ನು ಒಟ್ಟು 200 ಎಕರೆ (80.9 ಹೆಕ್ಟೇರ್) ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎರಡು ಹಂತಗಳಲ್ಲಿ ಸ್ಥಾಪನೆ ಮಾಡಲು ಮೆ.ಜೆ.ಎಸ್.ಡಬ್ಲೂö್ಯ-ಜೆ.ಎಫ್.ಇ ಎಲೆಕ್ಟಿçಕಲ್ ಸ್ಟೀಲ್ ಪ್ರೆöÊವೇಟ್ ಲಿಮಿಟೆಡ್ ಇವರು ಯೋಜನಾ ಪ್ರಸ್ತಾವನೆ ಸಲ್ಲಿಸಿದ್ದು, ಇದರ ಸಂಬAಧ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ಕುಡತಿನಿ ಗ್ರಾಮದ ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶ ಹಂತ-2ರ ಯೋಜನಾ ಪ್ರದೇಶದಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆ ನಡೆಸಲಾಗುವುದು. ಇದಕ್ಕೆ ಸಂಬAಧಿಸಿದAತೆ ಉದ್ದೇಶಿತ ಯೋಜನೆಯ ಕಾರ್ಯ ನಿರ್ವಾಹಕ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬAಧಿಸಿದ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಸಾರಾಂಶ ಪ್ರತಿಯನ್ನು ಪ್ರದರ್ಶಿಸಲಾಗಿದೆ. ಸುತ್ತಮುತ್ತಲಿನ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ, ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ