ಶನಿವಾರ, ಆಗಸ್ಟ್ 16, 2025

ಆ.20 ರಂದು ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಸಮಾರಂಭ ಕಾರ್ಯಕ್ರಮ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯ ಸಮಾರಂಭ ಕಾರ್ಯಕ್ರಮವನ್ನು ಆ.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಘ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಡಾ.ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ಶಾಸಕ ಚಂದ್ರಶೇಖರ ಬಿ.ಪಾಟೀಲ್, ಶಾಸಕರಾದ ಬಿ.ಎಂ.ನಾಗರಾಜ, ಈ. ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸವರು. ಹೊಸಪೇಟೆಯ ಹಂಪಿ ವಿದ್ಯಾರಣ್ಯ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ವೆಂಕಟಗಿರಿ ದಳವಾಯಿ ಅವರು ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ ಸೇರಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಇಲಾಖೆಯ ನೌಕರರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ