ಗುರುವಾರ, ಆಗಸ್ಟ್ 21, 2025
ಆ.28 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
ಬಳ್ಳಾರಿ,ಆ.21(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮವನ್ನು ಆ.28 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಎರಬನಹಳ್ಳಿ ಸುಲ್ತಾನಪುರ ರಸ್ತೆಯ ಮಿನೆರಾ ಸ್ಟೀಲ್ಸ್ ಅಂಡ್ ಪವರ್ ಲಿಮಿಟೆಡ್ ನಲ್ಲಿ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.
ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರರ ಕುಂದು ಕೊರತೆ ಪರಿಹಾರ, ಮಾಹಿತಿ ವಿನಿಮಯ ಮಾಡಿಕೊಳ್ಳಬಹುದು. ಉದ್ಯೋಗದಾತರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರು ಆನ್‌ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆ ಕ್ರಮಗಳ ಕುರಿತು ಮಾಹಿತಿ ಒದಗಿಸುವ ಕಾರ್ಯಕ್ರಮವಾಗಿದೆ.
ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಆ.28 ರಂದು ನಡೆಯುವ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ