ಗುರುವಾರ, ಆಗಸ್ಟ್ 28, 2025
ಆ.29 ರಂದು ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.29 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ-2025 ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಘ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಮ್, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಶಾಸಕ ಚಂದ್ರಶೇಖರ ಬಿ.ಪಾಟೀಲ, ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಕಸ್ತೂರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ