ಶುಕ್ರವಾರ, ಆಗಸ್ಟ್ 15, 2025
ವಿಶ್ರೀಕೃ ವಿವಿಯಲ್ಲಿ 79ನೇ ಸ್ವಾತಂತ್ರö್ಯ ದಿನಾಚರಣೆ
ಬಳ್ಳಾರಿ,ಆ.15(ಕರ್ನಾಟಕ ವಾರ್ತೆ):
ದೇಶದ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ, ಬಲಿದಾನ, ಯಶೋಗಾಥೆಯ ಇತಿಹಾಸವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ರಾಷ್ಟಿçÃಯ ಹಬ್ಬಗಳನ್ನು ಆಚರಿಸಲಾಗುತ್ತದೆ. ಆದರೆ ನಾವೆಲ್ಲ ಇಂದು ಸಾಂಪ್ರದಾಯಿಕ ಹಬ್ಬಗಳೆಡೆಗೆ ಗಮನ ಕೇಂದ್ರೀಕರಿಸಿದ್ದೇವೆ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಸಿ.ನಾಗರಾಜು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 79ನೇ ಸ್ವಾತಂತ್ರö್ಯ ದಿನದ ಧ್ವಜಾರೋಹಣವನ್ನು ಕುಲಪತಿಗಳೊಂದಿಗೆ ನೆರವೇರಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಎಂ ಮುನಿರಾಜು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಲ್ಯಾಣ-ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು ನಮ್ಮ ಕನಸಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯೆಯ ಸಂಪತ್ತನ್ನು ಧಾರೆ ಎರೆಯುವುದು ನಮ್ಮ ವಿಶ್ವವಿದ್ಯಾಲಯದ ಗುರಿಯಾಗಿದೆ. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಧಾರಿತ ಕಲಿಕೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ಗೃಹ ರಕ್ಷಕದಳದವರು ಪಥ ಸಂಚಲನ ನಡೆಸಿ ಗಣ್ಯರಿಗೆ ಗೌರವ ಸಲ್ಲಿಸಿದರು.
ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ.ಸಾಲಿ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಶಶಿಧರ್ ಕೆಲ್ಲೂರ್, ಡಾ.ಸಂಪತ್ ಕುಮಾರ್ ಸೇರಿದಂತೆ ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿಭಾಗಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ