ಶನಿವಾರ, ಆಗಸ್ಟ್ 16, 2025

ಅಂಗಾAಗ ದಾನ: ಕುಟುಂಬದವರಿಗೆ ಗೌರವ ಸನ್ಮಾನ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ದರೋಜಿ ಗ್ರಾಮದ ಕೃಷ್ಣ.ವಿ (35 ವರ್ಷ) ಅವರು ಇತ್ತೀಚೆಗೆ ಆಕಸ್ಮಿಕ ರಸ್ತೆ ಅಪಘಾತ ಸಂಭವಿಸಿ ಮೆದುಳು ನಿಷ್ಕಿçಯಗೊಂಡು ಮರಣ ಹೊಂದಿದ್ದರು. ಕುಟುಂಬದವರು ಮೃತ ಕೃಷ್ಣನ ಅಂಗಾAಗಗಳಾದ ಯಕೃತ್ ಶ್ವಾಸಕೋಶ, ಮೂತ್ರ ಪಿಂಡ ಮತ್ತು ಕಣ್ಣುಗಳು ದಾನ ಮಾಡಿ ಇನ್ನೊಬ್ಬರ ಜೀವ ಉಳಿವಿಗೆ ಸಾರ್ಥಕತೆ ಮೆರೆದಿದ್ದಾರೆ. ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಕೃಷ್ಣ.ವಿ ಅವರ ತಂದೆಯಾದ ಟಿ.ವೆಂಕಟೇಶ್ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು. ಈ ವೇಳೆ ಸಂಸದ ಈ.ತುಕಾರಾಮ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಾಧಿಕಾರಿ ಡಾ.ಆರ್.ಅಬ್ದುಲ್ಲಾ ಹಾಗೂ ಇನ್ನೀತರರು ಇದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ