ಶುಕ್ರವಾರ, ಆಗಸ್ಟ್ 8, 2025
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ; ವಿವಿಧ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.08(ಕರ್ನಾಟಕ ವಾರ್ತೆ):
ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
*ಯೋಜನೆಗಳು:*
ಸ್ವಯಂ ಉದ್ಯೋಗ ನೇರಸಾಲ ಯೋಜನೆ ಕಿರು ಆರ್ಥಿಕ ಚಟುವಟಿಕೆ, ಸ್ವಯಂ ಉದ್ಯೋಗ ನೇರಸಾಲ ಕುರಿಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೆöÊಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ( ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಗಂಗಾಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗಾಗಿ ಸೇವಾ-ಸಿಂಧು ಪೋರ್ಟಲ್‌ನ https://sevasindhu.karnataka.gov.in ಲಿಂಕ್ ಮೂಲಕ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕರ ಶಾಲೆಯ ಎದುರುಗಡೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ