ಮಂಗಳವಾರ, ಆಗಸ್ಟ್ 12, 2025
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಆ.12(ಕರ್ನಾಟಕ ವಾರ್ತೆ):
ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಪ್ರತಿ ಮನೆ-ಮನೆ ಮೇಲೂ ರಾಷ್ಟçಧ್ವಜವನ್ನು ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದ್ದಾರೆ.
ಪ್ರಸ್ತಕ ಸಾಲಿನಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಆ.13 ರಿಂದ ಆ.15 ರವರೆಗೆ ಮೂರನೇ ಹಂತದ ಅಭಿಯಾನ ನಡೆಯಲಿದ್ದು, ಹಾಗಾಗಿ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ, ಸಾರ್ವಜನಿಕರು ಮನೆಗಳಲ್ಲಿ ಧ್ವಜಾರೋಹಣ ನೆರವೇರಿಸುವುದು ಹಾಗೂ ವಾಹನಗಳಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವುದು.
ಜಿಲ್ಲಾದ್ಯಂತ ಸ್ವಾತಂತ್ರö್ಯ ದಿನಾಚರಣೆ ಸಂಭ್ರಮಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು. ಕಾರ್ಯಕ್ರಮಗಳ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ತೆಗೆದು ಹಾಗೂ ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಬೇಕು.
ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ಸೆಲ್ಫಿಗಳನ್ನು www.harghartiranga.com ನಲ್ಲಿ ಹಂಚಿಕೊಳ್ಳಬಹುದು.
ಸAವಿಧಾನವನ್ನು ಪಾಲಿಸುವುದು ಮತ್ತು ಅದರ ಆದರ್ಶಗಳು ಮತ್ತು ಸಂಸ್ಥೆಗಳು, ರಾಷ್ಟçಧ್ವಜ ಮತ್ತು ರಾಷ್ಟçಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಹಾಗಾಗಿ ಎಲ್ಲಾ ಅಂಶಗಳನ್ನು ಎಲ್ಲಾರೂ ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ