ಶುಕ್ರವಾರ, ಆಗಸ್ಟ್ 15, 2025

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಆಚರಣೆ

ಬಳ್ಳಾರಿ,ಆ.15(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರಿದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ