ಮಂಗಳವಾರ, ಆಗಸ್ಟ್ 19, 2025

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಆ.19(ಕರ್ನಾಟಕ ವಾರ್ತೆ): ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲುಕಂಭ ಗ್ರಾಮದÀ ಅಂಬೇಡ್ಕರ್ ಭವನ ಹತ್ತಿರÀ ಬಸ್ ನಿಲ್ದಾಣದಲ್ಲಿ ಸುಮಾರು 55-60 ವಷÀðದ ಅನಾಮಧೇಯ ವ್ಯಕ್ತಿಯು ಆ.17 ರಂದು ಯಾವುದೋ ಖಾಯಿಲೆಯಿಂದ ಮೃತಪಟ್ಟಿದ್ದು, ಮೃತನÀ ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5-6 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಮೃತನÀ ತಲೆಯಲ್ಲಿ 3 ಇಂಚು ಬಿಳಿ ಮಿಶ್ರಿತ ಕಪ್ಪು ಕೂದಲು, ಗಡ್ಡ ಮತ್ತು ಮೀಸೆ ಇರುತ್ತದೆ. ಮೃತನ ಮೈಮೇಲೆ ಯಾವುದೇ ಬಟ್ಟೆಗಳು ಇರುವುದಿಲ್ಲ ದೇಹದ ಮೇಲೆ ಬಿಳಿ ಬೆಡ್ ಶೀಟ್ ಹೊದಿಸಿದ್ದು ಎದೆಯ ಮಧ್ಯಭಾಗದಲ್ಲಿ ಸಣ್ಣ ಕಪ್ಪು ಮಚ್ಚೆ ಇರುತ್ತದೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08392-263433, ಮೊ.9480803051, 9480803033 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ