ಮಂಗಳವಾರ, ಆಗಸ್ಟ್ 5, 2025

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಆ.05(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಹೋಟಲ್ ಮ್ಯಾನೇಜ್‌ಮೆಂಟ್ ವೃತ್ತಿಪರ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 11 ರ ವರೆಗೆ ವಿಸ್ತರಿಸಲಾಗಿದೆ. ತರಬೇತಿಯನ್ನು ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟಲ್ ಮ್ಯಾನೇಜ್‌ಮೆಂಟ್ ನಲ್ಲಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಗೆ ಭೇಟಿ ನೀಡಬೇಕು. *ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ:* ಬಳ್ಳಾರಿ-8310321101, ಸಂಡೂರು-9036925966/ 8660575061, ಸಿರುಗುಪ್ಪ-9148889975. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ