ಶುಕ್ರವಾರ, ಆಗಸ್ಟ್ 1, 2025
“ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.01(ಕರ್ನಾಟಕ ವಾರ್ತೆ):
2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದಂತಹ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಜಿಲ್ಲೆಯ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಧಾರವಾಡ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ ನವೆಂಬರ್ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಅಥವಾ ದೂ.08362440176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ