ಬುಧವಾರ, ಆಗಸ್ಟ್ 20, 2025
ಕಂಪ್ಲಿ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.20(ಕರ್ನಾಟಕ ವಾರ್ತೆ):
ಕಂಪ್ಲಿ ಪುರಸಭೆ ವತಿಯಿಂದ 2024-25ನೇ ಸಾಲಿನ ಎಸ್.ಎಫ್.ಸಿ ಶೇ.7.25 (ಇತರೆ ಹಿಂದುಳಿದವರ ಕಲ್ಯಾಣಕ್ಕಾಗಿ) ಹಾಗೂ ಶೇ.5 (ವಿಕಲಚೇತನರ)ರ ವೈಯಕ್ತಿಕ ಸೌಲಭ್ಯದಡಿ ವಿವಿಧ ಯೋಜನೆಗಳಡಿ ಸಹಾಯಧನ ಅನುಷ್ಠಾನಗೊಳಿಸಲು ಕಂಪ್ಲಿ ಪಟ್ಟಣದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಸಮುದಾಯದವರು ಮತ್ತು ವಿಕಚೇತನರು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಲಾಗುವುದು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನವಾಗಿದೆ.
*ಬೇಕಾದ ದಾಖಲೆ:*
ನಿಗದಿತ ಅರ್ಜಿ ನಮೂನೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐ.ಡಿ ಕಾರ್ಡ್, 3 ಭಾವಚಿತ್ರ, ಪ್ರಸಕ್ತ ಸಾಲಿನ ವಿದ್ಯಾಭ್ಯಾಸದ ಪ್ರಮಾಣ ಪತ್ರ, ಹಿಂದುಳಿದ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದೇ ಇರುವ ಬಗ್ಗೆ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಭೇಟಿ ನೀಡಬಹುದು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ