ಗುರುವಾರ, ಆಗಸ್ಟ್ 21, 2025

ಪರಿಸರಕ್ಕೆ ಹಾನಿಯಾಗದಂತೆ ಗಣೇಶ ಹಬ್ಬ ಆಚರಿಸಿ: ಟಿ.ಎಂ.ಸಿದ್ದೇಶ್ವರ ಬಾಬು

ಬಳ್ಳಾರಿ,ಆ.21(ಕರ್ನಾಟಕ ವಾರ್ತೆ): ಗೌರಿ ಗಣೇಶ ಹಬ್ಬವು ಭಕ್ತಿ ಭಾವನೆ ಪೂಜೆಯ ಹಬ್ಬವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಸ್ಥೆ ಬಳ್ಳಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ‘ಪರಿಸರ ಸ್ನೇಹಿ ಗಣೇಶ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗಣೇಶ ಹಬ್ಬವನ್ನು ವಾಯು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯ ಮಣ್ಣು ಮಾಲಿನ್ಯ ರಹಿತವಾಗಿ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧೀಕ್ಷಕ ಅಲ್ತಾಫ್ ಹುಸೇನ್, ಕ್ಷೇತ್ರ ಸಹಾಯಕ ಕೆ.ಸೋಮಶೇಖರ್ ಅವರು ಮಾತನಾಡಿದರು. ಬಳ್ಳಾರಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಸ್ಕೌಟ್ ಆಯುಕ್ತ ಡಾ.ಕುಪ್ಪಗಲ್ ವೀರೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕದ ಉಸ್ತುವಾರಿಗಳಾದ ಮಲ್ಲೇಶ್ವರಿ ಜುಜಾರೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಮಹಮ್ಮದ್ ಶರ್ಪುದ್ದೀನ್, ಜಿಲ್ಲಾ ತರಬೇತಿ ಆಯುಕ್ತ ಎಂ.ನಾಗರಾಜ್, ಜಂಟಿ ಕಾರ್ಯದರ್ಶಿ ಚಂದ್ರಯ್ಯ ಮಠದ, ಜಿಲ್ಲಾ ಸ್ಥಾನಿಕ ಆಯುಕ್ತ ಅನಂತ್ ಕುಮಾರ್ ಶೆಟ್ಟಿ, ಸ್ಕೌಟ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್ ವರಲಕ್ಷಿö್ಮ, ರಾಜಲಕ್ಷಿö್ಮ, ರೋವರ್ ಸ್ಕೌಟ್ ಲೀಡರ್ ಗಂಟೆಪ್ಪ ಸೇರಿದಂತೆ ರೋವರ್ಸ್, ರೇಂಜರ್ಸ್, ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ