ಗುರುವಾರ, ಆಗಸ್ಟ್ 21, 2025
ದೀಕ್ಷಾಭೂಮಿ ಯಾತ್ರೆಗೆ ತೆರಳಲು ಅರ್ಜಿ ಆಹ್ವಾನ
ಬಳ್ಳಾರಿ,ಆ.21(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದೀಕ್ಷಾಭೂಮಿ ಯಾತ್ರೆಗೆ ಸೆ.30 ರಿಂದ ಅ.04 ವರೆಗೆ ಕೆಕೆಆರ್‌ಟಿಸಿ, ಇತರೆ ಸಾರಿಗೆ ಬಸ್ ಮತ್ತು ರೈಲಿನ ಮೂಲಕ ಪ್ರಯಾಣಿಸಲು ಅರ್ಹ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ https://swdservices.karnataka.gov.in/ ಗೆ ಭೇಟಿ ನೀಡಿ ಸೆ.09 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಸಲ್ಲಿಸಿದ ಅರ್ಜಿಯ ಜೊತೆಗೆ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಪ್ರತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ