ಸೋಮವಾರ, ಆಗಸ್ಟ್ 25, 2025
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಆ.25(ಕರ್ನಾಟಕ ವಾರ್ತೆ):
ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಆಂಧ್ರಾಳ್ ಗ್ರಾಮದ ರಾಮ-ಲಕ್ಷö್ಮಣ ದೇವಸ್ಥಾನದ ಹತ್ತಿರ ಸುಮಾರು 50-55 ವರ್ಷದ ವಯಸ್ಸಿನ ಅನಾಮಧೇಯ ವ್ಯಕ್ತಿಯು ಅಸ್ವಸ್ಥನಾಗಿ ಬಿದ್ದು, ಬಿಎಂಸಿಆರ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆ.20 ರಂದು ಸಾವನ್ನಪ್ಪಿದ್ದು, ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಕೋರಿದ್ದಾರೆ.
ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಕಪ್ಪು ಮಿಶ್ರಿತ ಬಿಳಿ ಕೂದಲು ಮತ್ತು ಗಡ್ಡ ಹೊಂದಿರುತ್ತಾನೆ.
ಮಾಸಿದ ಕಪ್ಪು ಮತ್ತು ಬಿಳಿ ಬಣ್ಣದ ಮಿಶ್ರಿತ ಅಂಗಿ, ಕಪ್ಪು ನೀಲಿ ಬಣ್ಣದ ಗೆರೆಗಳುಳ್ಳ ಲುಂಗಿ ಮತ್ತು ನೇರಳೆ ಬಣ್ಣದ ಒಳಉಡುಪು ಧರಿಸಿರುತ್ತಾನೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ