ಶನಿವಾರ, ಆಗಸ್ಟ್ 16, 2025

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): 2022ನೇ ಸಾಲಿನಲ್ಲಿ ಮುದ್ರಣವಾಗಿ ಪ್ರಕಟಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಡಾ.ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೇಗಳ ಅಧ್ಯಯನ ಕೇಂದ್ರ, ಎಂ.ಸಿ ಬಡಾವಣೆ, (ಡಾ.ಬಾಲಗಂಗಾಧರನಾಥ ಸ್ವಾಮಿಜಿ ಮಲ್ಟಿಸ್ಪೆಶಾಲಿಟಿ ಆಸ್ಪತೆ ಹತ್ತಿರ) ವಿಜಯನಗರ ಬೆಂಗಳೂರು-560040 ಇಲ್ಲಿ ಏರ್ಪಡಿಸಲಾಗಿದೆ. ಪ್ರದರ್ಶನವು ಆಗಸ್ಟ್ 20 ರಿಂದ 22 ವರೆಗೆ (ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ) ಪ್ರದರ್ಶಿಸಲಾಗುತ್ತದೆ. ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಮತ್ತು ಇಲಾಖೆಯ ಅಧಿಕೃತ ವೆಬ್ ಸೈಟ್ dpl.karnataka.gov.in ನಲ್ಲಿಯೂ ಪ್ರಕಟಿಸಲಾಗುತ್ತದೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30 ರ ಸಂಜೆ 5.30 ರೊಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.08392-274113 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ