ಸೋಮವಾರ, ಆಗಸ್ಟ್ 25, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಆ.25(ಕರ್ನಾಟಕ ವಾರ್ತೆ):
ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹರೀಶ್ ಕುಮಾರ್ ಸ್ವಾಮಿ ಎನ್ನುವ 26 ವರ್ಷದ ವ್ಯಕ್ತಿಯು ಆ.11 ರಂದು ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕರಿ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.8 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಮೂಗಿನ ಮೇಲೆ ಒಂದು ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಆಂಗ್ಲ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192 ಅಥವಾ ಪಿಎಸ್‌ಐ ಮೊ.9480803082, ಪಿಐ ಮೊ.9480803046 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ