ಶನಿವಾರ, ಆಗಸ್ಟ್ 2, 2025
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಆ.02(ಕರ್ನಾಟಕ ವಾರ್ತೆ):
ನಗರದ ಟ್ರಾಮಾಕೇರ್ ಆಸ್ಪತ್ರೆಯಲ್ಲಿ 70 ವರ್ಷದ ಅನಾಮಧೇಯ ವ್ಯಕ್ತಿಯು ಬಲಗಾಲಿಗೆ ಗಾಯವಾಗಿ ಚಿಕಿತ್ಸೆಗಾಗಿ ಜು.22 ರಂದು ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜು.23 ರಂದು ಮೃತಪಟ್ಟಿದ್ದು, ಮೃತನ ಬಗ್ಗೆ ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಕೌಲ್ ಬಜಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು:
5.5 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಬಿಳಿ ಕೂದಲು ಹೊಂದಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿಐ ಮೊ.9480803047, ಪಿಎಸ್‌ಐ ಮೊ.9480803084 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ