ಮಂಗಳವಾರ, ಆಗಸ್ಟ್ 19, 2025

ವೃತ್ತ ನಾಮಕರಣ, ಪುತ್ಥಳಿ ನಿರ್ಮಾಣ: ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ,ಆ.19(ಕರ್ನಾಟಕ ವಾರ್ತೆ): ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 19 ರ ಡಾ.ರಾಜ್‌ಕುಮಾರ್ ರಸ್ತೆ (ಅನಂತಪುರ ರಸ್ತೆ)ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದಲ್ಲಿರುವ ಸಾಂಸ್ಕೃತಿಕ ಸಮುಚ್ಛಯಕ್ಕೆ ಎಂ.ಪಿ.ಪ್ರಕಾಶ್ ಅವರ ಹೆಸರು ನಾಮಕರಣ ಮಾಡಲು ಹಾಗೂ ಆವರಣದಲ್ಲಿ ಸರ್ಕಾರದ ವತಿಯಿಂದ ಅವರ ಪುತ್ಥಳಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತವಾಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬಹುದು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ