ಗುರುವಾರ, ಆಗಸ್ಟ್ 7, 2025
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಅಹ್ವಾನ
ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಮತ್ತು ರೈತ ಮಹಿಳೆಯರಿಂದ ಅರ್ಜಿ ಅಹ್ವಾನಿಸಲಾಗಿದೆ.
ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿ, ಬೆಳೆ ವೈವಿಧ್ಯಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅರ್ಹ ರೈತರು ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಆತ್ಮ ಯೋಜನೆಯಡಿ ಕೃಷಿ ಪಂಡಿತ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿರುವ ರೈತ ಹಾಗೂ ರೈತ ಮಹಿಳೆರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆಯಾ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ