ಶನಿವಾರ, ಆಗಸ್ಟ್ 16, 2025

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಲ್ಪಸಂಖ್ಯಾತರ ಸಮುದಾಯದ ಅರ್ಭ್ಯಥಿಗಳಿಂದ ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 26 ರವರೆಗೆ ವಿಸ್ತರಿಸಲಾಗಿದೆ. ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯಪಿಎಸ್‌ಸಿ ನಾಗರೀಕ ಸೇವೆ, ಕೆಎಎಸ್, ಗೆಜೆಟೆಡ್ ಪ್ರೊಬೆಷನರಿ, ಗ್ರೂಪ್-ಸಿ, ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಲಿಂಕ್ https://sevasindhu.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು. ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿಯೂ ಸಹ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ