ಶುಕ್ರವಾರ, ಆಗಸ್ಟ್ 22, 2025

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿಕೆ | ಬಳ್ಳಾರಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಉತ್ತಮ ಪ್ರಗತಿ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಬಳ್ಳಾರಿ ಜಿಲ್ಲೆಯಾದ್ಯಂತ ಮಹತ್ತರ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು. ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಉತ್ತಮವಾಗಿದೆ ಎಂದರು. ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯ ಒಟ್ಟು 54.49 ಲಕ್ಷ ಫಲಾನುಭವಿಗಳಿಗೆ ಸಹಾಯಧನ ನೆರವು ತಲುಪಿದ್ದು, ಈ ಯೋಜನೆಯಡಿ ಜಿಲ್ಲೆಗೆ 1089.80 ಕೋಟಿ ರೂ. (2025ರ ಫೆಬ್ರವರಿ ಮತ್ತು ಮಾರ್ಚ್ ಮಾಹೆ ಹೊರತುಪಡಿಸಿ) ಸರ್ಕಾರ ಪಾವತಿಸಿದೆ. ಇದೊಂದು ಮಹತ್ತರ ಮೈಲಿಗಲ್ಲಾಗಿದೆ ಎಂದರು. *ವಿಶೇಷ ಶಿಬಿರ ಆಯೋಜಿಸಿ:* ಜಿಲ್ಲೆಯಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ನೋಂದಾಯಿಸಿಕೊAಡ ಫಲಾನುಭವಿಗಳಿಗೆ ವಿವಿಧ ಕಾರಣಗಳಿಂದ ಹಣ ಪಾವತಿಯಾಗುತ್ತಿಲ್ಲ ಎಂದು ದೂರು ಕೇಳಿಬರುತ್ತಿವೆ. ಅವರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಇತ್ಯರ್ಥಕ್ಕೆ ಗ್ರಾಪಂ ವ್ಯಾಪ್ತಿಯಲ್ಲಿ ವಿಶೇಷ ಶಿಬಿರ ಆಯೋಜಿಸಬೇಕು ಎಂದು ತಾಪಂ ಇಒ ಗಳಿಗೆ ನಿರ್ದೇಶನ ನೀಡಿದ ಅವರು, ಎನ್‌ಸಿಪಿಐ ಲಿಂಕ್ ಮಾಡಿಸದೇ ಇರುವ 1098 ಮತ್ತು ಆಧಾರ್ ಇ-ಕೆವೈಸಿ ಮಾಡಿಸದೇ ಇರುವ 109 ಫಲಾನುಭವಿಗಳ ಮಾಹಿತಿ ಪಡೆದು ಕೂಡಲೇ ಪರಿಹರಿಸಬೇಕು ಎಂದು ಹೇಳಿದರು. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಒಟ್ಟು 1.81 ಕೋಟಿ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಒಟ್ಟು 292.29 ಕೋಟಿ ರೂ. ಡಿಬಿಟಿ ಮೂಲಕ ಹಣ ಪಾವತಿಸಲಾಗಿದ್ದು, 2025 ರ ಫೆಬ್ರವರಿ ತಿಂಗಳಿನಿAದ ಹಣ ಬದಲಾಗಿ, ಪಡಿತರ ಅಕ್ಕಿ ಮತ್ತು ಬದಲಾಗಿ ಜೋಳ ಸಹ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ಮಾಡುವವರು ಕಂಡುಬAದಲ್ಲಿ ಕೂಡಲೇ ಆ ವಾಹನ ಮತ್ತು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು. ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಿಕೊAಡ 2.86 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್ ಪ್ರಯೋಜನ ತಲುಪಿದ್ದು, ಪ್ರಗತಿ ಪ್ರಮಾಣ ಶೇ.95 ಪ್ರಗತಿಯಾಗಿದೆ. ಈ ಯೋಜನೆಗೆ ರೂ.322 ಕೋಟಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ವೆಚ್ಚವಾಗಿದೆ ಎಂದು ಜೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು. ಯುವ ನಿಧಿ ಯೋಜನೆ ಮೂಲಕ 8647 ನೋಂದಾಯಿಸಿಕೊAಡ ಅರ್ಹ ಅಭ್ಯರ್ಥಿಗಳಿಗೆ ಇಲ್ಲಿಯವರೆಗೆ ರೂ.16.72 ಕೋಟಿ ಹಣಕಾಸು ನೆರವು ತಲುಪಿದ್ದು, ಇದರಿಂದ ನಿರುದ್ಯೋಗ ಯುವಕರಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಸಭೆಗೆ ತಿಳಿಸಿದರು. ಇದೇ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುವ ಉದ್ಯೋಗ ಮೇಳಗಳಲ್ಲಿ ‘ಯುವ ನಿಧಿ’ ಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಅದೇರೀತಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಲಾಗಿದ್ದು, 5.36 ಕೋಟಿ ಪ್ರಯಾಣಗಳು ದಾಖಲಾಗಿವೆ. ಈ ಯೋಜನೆಯು ಕೂಡ ಶೇ.100 ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಯೋಜನೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ರೂ.207.20 ಕೋಟಿ ವೆಚ್ಚವಾಗಿದೆ ಎಂದು ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಜಿಪಂ ಸಿಇಒ ಅವರು ಪ್ರತಿಕ್ರಿಯಿಸಿ, ಬಳ್ಳಾರಿ ಜಿಲ್ಲೆಯು ಗಡಿಭಾಗವಾಗಿರುವುದರಿಂದ ಸಾಕಷ್ಟು ಮಹಿಳಾ ಪ್ರಯಾಣಿಕರು ಸಂಚರಿಸುತ್ತಾರೆ. ಈ ಸಂದರ್ಭದಲ್ಲಿ ಪೂರಕ ದಾಖಲೆ ಪರಿಶೀಲಿಸಿ ಟಿಕೇಟ್ ನೀಡಬೇಕು. ನಿಗಮಕ್ಕೂ ಒಳ್ಳೆಯ ಆದಾಯ ಬರುತ್ತಿರುವುದರಿಂದ ಹೊಸ ಬಸ್ ಗಳ ಖರೀದಿಗೆ ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಕುರುಗೋಡು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಕೂಡಲೇ ಅನುವು ಮಾಡಿಕೊಡಬೇಕು ಎಂದು ಕುರುಗೋಡು ತಾಲ್ಲೂಕು ಅಧ್ಯಕ್ಷರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಜಿಪಂ ಸಿಇಒ ಅವರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ವ್ಯವಸ್ಥೆ, ನಿಲ್ದಾಣದ ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ಯಾರಂಟಿ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಸಕಾಲಿಕ ಜಾರಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಸರ್ಕಾರದ ಕಲ್ಯಾಣ ಕಾರ್ಯಗಳು ತಲುಪುತ್ತಿರುವುದಕ್ಕೆ ಇದೊಂದು ಸಾಕ್ಷಿಯಾಗಿದೆ. ಅದೇರೀತಿಯಾಗಿ ತಾಪಂ ಮಟ್ಟದಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದು ಸರ್ಕಾರದ ನಿರ್ದೇಶನವಿದ್ದು, ತಾಲ್ಲೂಕು ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ತಾಲ್ಲೂಕಿನಲ್ಲಿ 3-4 ಗ್ರಾಮ ಪಂಚಾಯತ್ ಫಲಾನುಭವಿಗಳ ಸಮಸ್ಯೆ ಕುರಿತು ಗ್ರಾಮ ಸಭೆ ಅಥವಾ ಇನ್ನೀತರೆ ಪೂರಕ ಸಭೆ ಜರುಗಿಸಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ತಾಲ್ಲೂಕು ಸಮಿತಿ ರಚಿಸಬೇಕಿದೆ. ಈ ಕುರಿತು ಸರ್ಕಾರದ ನಿರ್ದೇಶನವಿದೆ ಎಂದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳು, ತಾಲ್ಲೂಕು ಅಧ್ಯಕ್ಷರುಗಳು, ಜಿಲ್ಲಾ ಸಮಿತಿ ಸದಸ್ಯರುಗಳು ಪಾಲ್ಗೊಂಡು ಗ್ಯಾರಂಟಿ ಅನುಷ್ಠಾನಕ್ಕೆ ಹಾಗೂ ಅರ್ಹರಿಗೆ ಯೋಜನೆ ತಲುಪಿಸುವಲ್ಲಿ ಇರುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಕುರುಗೋಡು ತಾಲ್ಲೂಕು ಅಧ್ಯಕ್ಷ ಜಿ.ಬಸವನಗೌಡ, ಕಂಪ್ಲಿ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್‌ರಾವ್, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷ ಮಾರುತಿ ವರಪ್ರಸಾದ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಸೇರಿದಂತೆ ತಾಪಂ ಇಒಗಳು ಹಾಗೂ ಇತರರು ಉಪಸ್ಥಿತರಿದ್ದರು. -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ