ಮಂಗಳವಾರ, ಆಗಸ್ಟ್ 12, 2025
ಜವಾಹರ ನವೋದಯ ವಿದ್ಯಾಲಯ; ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.12(ಕರ್ನಾಟಕ ವಾರ್ತೆ):
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ (11 ತರಗತಿ) ವಿಜ್ಞಾನ ವಿಭಾಗ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳು ಅರ್ಹರಾಗಿದ್ದು, 01.06.2008 ರಿಂದ 31.07.2010 ರ ನಡುವೆ ಜನಿಸಿದವರಾಗಿರಬೇಕು. ಶೇ.60 ರಷ್ಟು ಫಲಿತಾಂಶ (ಗಣಿತ-ಶೇ.60, ವಿಜ್ಞಾನ-ಶೇ.60) ಹೊಂದಿರಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ದೂ.08391-223490 ಗೆ ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಸುದೇಶ ಗೋಪಾಲ ಮಲಾಜುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ