ಸೋಮವಾರ, ಆಗಸ್ಟ್ 11, 2025
ಬಳ್ಳಾರಿ ಮಹಾನಗರ ಪಾಲಿಕೆ: ವಿವಿಧೆಡೆ ದಾಳಿ, ಪ್ಲಾಸ್ಟಿಕ್ ವಶ
ಬಳ್ಳಾರಿ,ಆ.11(ಕರ್ನಾಟಕ ವಾರ್ತೆ):
ಮಹಾನಗರ ಪಾಲಿಕೆ ವತಿಯಿಂದ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತಂತೆ ನಗರದ ಗುಗ್ಗರಹಟ್ಟಿ ಕೈಗಾರಿಕ ಪ್ರದೇಶದಲ್ಲಿ ಸೋಮವಾರ ದಾಳಿ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ ಒಟ್ಟು 1,400 ಕೆ.ಜಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಕಾರ್ಯಾಚರಣೆ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು(ಪರಿಸರ), ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ