ಮಂಗಳವಾರ, ಆಗಸ್ಟ್ 19, 2025
ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರದಲ್ಲಿ ಕಾರ್ಯದರ್ಶಿ ಆಶಿಶ್ ಕುಮಾರ್ ಮಾತು ಬುಡಕಟ್ಟು ಜನರು ವಾಸಿಸುವ ಪ್ರದೇಶಗಳ ಸಮಗ್ರ ಅಭಿವೃದ್ಧಿ
ಬಳ್ಳಾರಿ,ಆ.19(ಕರ್ನಾಟಕ ವಾರ್ತೆ):
ಬುಡಕಟ್ಟು ಜನರು ವಾಸಿಸುವ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯದ ಸಬಲೀಕರಣಕ್ಕೆ ಆದಿ ಕರ್ಮಯೋಗಿ ಅಭಿಯಾನ ಸಹಕಾರಿ ಎಂದು ನವದೆಹಲಿಯ ಕೇಂದ್ರ ಬುಡಕಟ್ಟುಗಳ ಮಂತ್ರಾಲಯ ಅಧೀನ ಕಾರ್ಯದರ್ಶಿ ಆಶಿಶ್ ಕುಮಾರ್ ಅವರು ಹೇಳಿದರು.
ಜಿಲ್ಲೆಯಲ್ಲಿ ಆಯ್ದ ತಾಲ್ಲೂಕುಗಳಲ್ಲಿ ಕೇಂದ್ರ ಸರ್ಕಾರದ ‘ಆದಿ ಕರ್ಮಯೋಗಿ ಅಭಿಯಾನ’ ಯಶಸ್ವಿ ಅನುಷ್ಠಾನಕ್ಕೆ ಸಂಬAಧಿಸಿದAತೆ ನಗರದ ವಾಲ್ಮೀಕಿ ಭವನದಲ್ಲಿ ತಾಲ್ಲೂಕು ಮಟ್ಟದ ತರಬೇತುದಾರರಿಗೆ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಇವರ ಆದೇಶದಂತೆ ಆದಿ ಕರ್ಮಯೋಗಿ ಅಭಿಯಾನ ಯೋಜನೆಯಡಿ ಬುಡಕಟ್ಟು ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂಯ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಆರೋಗ್ಯ, ದೂರವಾಣಿ ಸಂಪರ್ಕ, ವಿದ್ಯುತ್‌ಚ್ಛಕ್ತಿ, ವಸತಿ ನಿರ್ಮಾಣ, ಅಂಗನವಾಡಿ ಕೇಂದ್ರಗಳ ಸ್ಥಾಪನೆ, ಆರೋಗ್ಯ ಕಾರ್ಡ್, ಜಾತಿ ಪ್ರಮಾಣ ಪತ್ರ, ಅರಣ್ಯ ಹಕ್ಕು ಯೋಜನೆಯಡಿ ಅರ್ಹರಿಗೆ ಹಕ್ಕು ಪತ್ರ ಒದಗಿಸಲಾಗುವುದು ಎಂದು ಹೇಳಿದರು.
ಬುಡಕಟ್ಟು ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ನೀಡುವ ಮೂಲಕ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವುದು ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮಗಳನ್ನು ಉನ್ನತೀಕರಿಸಲು ಈ ಯೋಜನೆಯು ಸಹಾಯಕವಾಗಿದೆ. ಅಧಿಕಾರಿಗಳು ಪೂರಕ ತರಬೇತಿ ಹೊಂದಿ ಸೌಲಭ್ಯ ಅನುಷ್ಠಾನ ಮಾಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು ಅವರು ಮಾತನಾಡಿ, ಕೇಂದ್ರ ಸರ್ಕಾರದ ಆಶಯದಂತೆ ಬುಡಕಟ್ಟು ಸಮುದಾಯದವರಿಗೆ ಅಗತ್ಯ ಮೂಲಸೌಲಭ್ಯಗಳಾದ ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ, ಇತರೆ ಸೌಲಭ್ಯಗಳನ್ನು ಆಯ್ಕೆಯಾದ ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಿ ಪರಿಶಿಷ್ಟ ವರ್ಗದ ಜನರ ಶ್ರೇಯೋಭಿವೃದ್ಧಿ ಮಾಡುವುದು ಈ ಆದಿ ಕರ್ಮಯೋಗಿ ಅಭಿಯಾಮದ ಉದ್ದೇಶವಾಗಿದೆ ಎಂದು ಹೇಳಿದರು.
ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಬಳ್ಳಾರಿ ಜಿಲ್ಲೆಯ 59 ಗ್ರಾಮಗಳಲ್ಲಿ ಅಭಿಯಾನವನ್ನು ಯಶಸ್ವಿಗೊಳಿಸಲು ಬಳ್ಳಾರಿ ಜಿಲ್ಲೆಯ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತುದಾರರಿಗೆ ರಾಜ್ಯ ಮಟ್ಟದಲ್ಲಿ ಈಗಾಗಲೇ ತರಬೇತಿ ನೀಡಲಾಗಿದೆ. ಈಗ ತಾಲ್ಲೂಕು ಮಟ್ಟದ ತರಬೇತುದಾರರಿಗೆ ನೀಡಲಾಗುತ್ತಿದ್ದು, ಇದರ ಸದುಪಯೋಗವಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಆಯ್ಕೆಯಾದ ತಾಲ್ಲೂಕುಗಳ ತರಬೇತುದಾರರು ಭಾಗವಹಿಸಿದ್ದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ