ಶನಿವಾರ, ಆಗಸ್ಟ್ 2, 2025
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಜಿಲ್ಲಾ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ | ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮವಹಿಸುವಂತೆ ಡಾ.ಕೆ.ವಿ.ತ್ರಿಲೋಕಚಂದ್ರ ತಾಕೀತು
ಬಳ್ಳಾರಿ,ಆ.02(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ರೈತರಿಗೆ ತಲುಪಿಸಬೇಕಾದ ಅಗತ್ಯ ರಸಗೊಬ್ಬರಗಳ ಕೊರತೆ ನೀಗಿಸಲು ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಜಿಪಂ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಜುಲೈ ಮಾಹೆಯವರೆಗೆ ಒಟ್ಟು 27025 ಮೆ.ಟನ್‌ಗಳ ರಸಗೊಬ್ಬರ ಬೇಡಿಕೆ ಇದ್ದು, ಇಲ್ಲಿಯವರೆಗೆ ಪ್ರಾರಂಭಿಕ ಶಿಲ್ಕು ಸೇರಿ 34,163 ಮೆ.ಟನ್ ದಾಸ್ತಾನು ಮಾಡಲು, ಈ ಪೈಕಿ 25,887 ಮೆ.ಟನ್ ವಿತರಣೆಯಾಗಿ 8,286 ಮೆ.ಟನ್‌ಗಳಷ್ಟು ದಾಸ್ತಾನಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ತಿಳಿಸಿದರು.
ರಸಗೊಬ್ಬರದ ಬೇಡಿಕೆ, ಸರಬರಾಜು, ವಿತರಣೆ ಮತ್ತು ದಾಸ್ತಾನು ಕೃಷಿ ಇಲಾಖೆಯು ರೂಪಿಸಿದ ಯೋಜನೆಯನುಸಾರ ಇದ್ದು, ರೈತರಿಂದ ಯೂರಿಯಾ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಪದೇ ಪದೇ ಬರುತ್ತಿರುವುದನ್ನು ಕೃಷಿ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಮುಂಗಾರು ಪೂರ್ವ ಮತ್ತು ಪ್ರಸ್ತಕ ಮುಂಗಾರಿನಲ್ಲಿ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಜಿಲ್ಲೆಯ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಪರಿವೀಕ್ಷಕರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನಗಳನ್ವಯ ಯೂರಿಯಾ ಗೊಬ್ಬರದ ಅವೈಜ್ಞಾನಿಕ ಬಳಕೆಯ ದುಷ್ಪರಿಣಾಮಗಳು ಮತ್ತು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ನ್ಯಾನೋ ರಸಗೊಬ್ಬರಗಳನ್ನು ಪರ್ಯಾಯವಾಗಿ ಬಳಸುವ ಕುರಿತು ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು, ರೈತರಿಗೆ ರಸಗೊಬ್ಬರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಅಥವಾ ಕೃತಕ ಅಭಾವ ಸೃಷ್ಠಿಸುವ ಪ್ರಸಂಗಗಳು ಕಂಡುಬAದಲ್ಲಿ ಡಿಸಿ, ಎಸ್ಪಿ ಅವರ ಗಮನಕ್ಕೆ ತರಬೇಕು ಹೇಳಿದರು.
ಕೃಷಿ, ತೋಟಗಾರಿಕೆ ಯೋಜನೆಗಳನ್ನು ಸಕಾಲಕ್ಕೆ ರೈತರಿಗೆ ತಲುಪಿಸಬೇಕು. ಜಿಲ್ಲೆಯಲ್ಲಿ ಹೈನುಗಾರಿಕೆಗೆ ಹೆಚ್ಚು ಪ್ರೋತ್ಸಾಹ ನೀಡಬೇಕಿದೆ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ಸಾರ್ವಜನಿಕರಿಗೆ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭ್ಯವಾಗಬೇಕು. ಆಸ್ಪತ್ರೆ ಸೇರಿದಂತೆ ಸರ್ಕಾರಿ ಸಂಸ್ಥೆಗಳಲ್ಲಿ ಮೂಲಭೂತ ಸೌಲಭ್ಯಗಳು ಇರುವಂತೆ ಅಧಿಕಾರಿ ವರ್ಗ ನಿಗಾ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಬಿಎಂಸಿಆರ್‌ಸಿ ಯಲ್ಲಿ ಆಂಬುಲೆನ್ಸ್ ವ್ಯವಸ್ಥೆ ಸಿಗುತ್ತಿಲ್ಲ, ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯರು ಲಭಿಸುತ್ತಿಲ್ಲ, ರಕ್ತ, ಔಷಧಿ ಹಾಗೂ ಸಾಮಾನ್ಯ ವೀಲ್ ಚೇರ್ ವ್ಯವಸ್ಥೆಗೂ ಸಹ ಹಣ ಪಡೆಯುತ್ತಾರೆ ಎಂದು ಪ್ರತಿದಿನ ನನ್ನ ಕಚೇರಿಗೆ ಸಾರ್ವಜನಿಕರಿಂದ ದೂರು ಬರುತ್ತಿವೆ. ಅಲ್ಲಿನ ಗೃಹರಕ್ಷಕದಳ ಸಿಬ್ಬಂದಿಯಿAದ ಹೊರಗುತ್ತಿಗೆ ನೌಕರರು, ವೈದ್ಯರು ಸಹ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಬಿಎಂಸಿಆರ್‌ಸಿ ನಿರ್ದೇಶಕರ ಮೇಲೆ ಅಸಮಾಧಾನ ಹೊರಹಾಕಿದರು.
ಕೇವಲ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ, ಚಿಕಿತ್ಸೆ ಉಪಕರಣ ಕುರಿತಂತೆ ಪ್ರಸ್ತಾಪಿಸುವುದಲ್ಲ, ಮುಖ್ಯವಾಗಿ ಯಾವುದೇ ಸಭೆಗಳಿಗೂ ಹಾಜರಾಗುವುದಿಲ್ಲ ಎಂದ ಅವರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಬಿಎಂಸಿಆರ್‌ಸಿ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ ಅವರು ಮಾತನಾಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬAಧಿಸಿದ ಯೋಜನೆಗಳ ಸಮರ್ಪಕ ಅನುಷ್ಠಾನದೆಡೆಗೆ ಗಮನ ಹರಿಸಬೇಕು. ನಿಗದಿಪಡಿಸಿದ ಗುರಿ ಸಾಧನೆಯಡೆಗೆ ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳ ಮತ್ತು ಶಾಲೆಗಳ ಮೇಲೆ ಯಾವುದೇ ರೀತಿಯ ವಿದ್ಯುತ್ ಲೈನ್ ಗಳು ಹಾದುಹೋಗುವಂತಿಲ್ಲ, ಈ ಕುರಿತು ನ್ಯಾಯಾಲಯದ ಆದೇಶವಿದ್ದು, ಕೂಡಲೇ ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಜೆಸ್ಕಾಂ ಅಧಿಕಾರಿಗಳು ಸರ್ವೆ ನಡೆಸಿ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ರಾಷ್ಟ್ರೀಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮದಡಿ ಅಂಗವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ 18 ವರ್ಷದವರೆಗಿನ ಮಕ್ಕಳಿಗೆ ಆಜನ್ಮ ನ್ಯೂನ್ಯತೆ, ಮಕ್ಕಳ ಕಾಯಿಲೆಗಳು ಮತ್ತು ಕುಂಠಿತ ಬೆಳವಣಿಗೆಯ ತೊಂದರೆ ಬಗ್ಗೆ ನಿಯಮಿತವಾಗಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲು ಮುತುವರ್ಜಿ ವಹಿಸಬೇಕು ಎಂದು ಸಂಬಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ವಸತಿ ನಿಲಯಗಳಲ್ಲಿ ಆಶ್ರಯ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಸೌಕರ್ಯಗಳು ತಲುಪಬೇಕು.ಜೊತೆಗೆ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಡೆಗೆ ಸಂಬAಧಿತ ಇಲಾಖೆಯ ಮುಖ್ಯಸ್ಥರು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಮುಂದಾಗಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಪಂ ಇಒಗಳು ಉಪಸ್ಥಿತರಿದ್ದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ