ಮಂಗಳವಾರ, ಸೆಪ್ಟೆಂಬರ್ 30, 2025

ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಹೇಳಿಕೆ | ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳ ಖರೀದಿ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿಗೆ ಎಫ್.ಎ.ಕ್ಯೂ ಗುಣಮಟ್ಟದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಮತ್ತು ಶೇಂಗಾ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಹಾಗೂ ಶೇಂಗಾ ಉತ್ಪನ್ನಗಳನ್ನು ಖರೀದಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಬಲ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಹಾಗೂ ಶೇಂಗಾ ಉತ್ಪನ್ನಗಳನ್ನು ಖರೀದಿಸಲು ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯವುಳ್ಳ ಖರೀದಿ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂರ್ಯಕಾಂತಿ ಮತ್ತು ಶೇಂಗಾ ಉತ್ಪನ್ನ ಖರೀದಿಗಾಗಿ ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆ ಇದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆ ಇದ್ದಲ್ಲಿ ಸಂಡೂರು ಪಟ್ಟಣದ ಎಪಿಎಂಸಿ ಯಲ್ಲಿ ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಕೈಗೊಳ್ಳಬೇಕು ಎಂದು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅದೇರೀತಿಯಾಗಿ ರೈತರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಕುರಿತು ಸಹ ಅಗತ್ಯ ಮಾಹಿತಿ ರೈತರಿಗೆ ಒದಗಿಸುವಂತೆಯೂ ಸೂಚಿಸಿದರು. ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಜಮೆ ಆಗಲಿದ್ದು, ರೈತರು ಕಡ್ಡಾಯವಾಗಿ ಎಫ್‌ಐಡಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳುವಂತೆ ತಿಳಿಸಬೇಕು ಎಂದರು. ಸಭೆsೆಯಲ್ಲಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆಯ ಉಪನಿಬಂಧಕ ವೀರಭದ್ರಯ್ಯ, ಕಾನೂನು ಮಾಪನ ಶಾಸ್ತç ಇಲಾಖೆಯ ನಿರೀಕ್ಷಕ ಮನೋಜ್ ಕುಮಾರ್, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಾರಾಟ ಮಹಾ ಮಂಡಳಿ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ಅಯ್ಯಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. -------------

ಮೋಕ: “ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ” ಪೋಷಣ್ ಮಾಸಾಚರಣೆ | ಗರ್ಭಿಣಿ ಮಹಿಳೆಯರು, ತಾಯಂದಿರು ಆರೋಗ್ಯದ ಕಾಳಜಿ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಗರ್ಭಿಣಿ ಮಹಿಳೆಯರು, ತಾಯಂದಿರು ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು. ಗರ್ಭಾವಸ್ಥೆಯಲ್ಲಿ ರಕ್ತಹೀನತೆ ತಡೆಗಟ್ಟಲು ಪೌಷ್ಟಿಕ ಆಹಾರ ಮತ್ತು ಕಬ್ಬಿಣಾಂಶದ ಮಾತ್ರೆ ನಿಯಮಿತವಾಗಿ ಸೇವಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೆಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ “ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ” ಮತ್ತು ಎಂಟನೇ ಪೋಶನ್ ಮಾಸಾಚರಣೆ ಅಂಗವಾಗಿ ಬಳ್ಳಾರಿ ತಾಲ್ಲೂಕಿನ ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗರ್ಭಿಣಿ ಮಹಿಳೆಯರು, ತಾಯಂದಿರು ವೈದ್ಯರ ಹತ್ತಿರ ನಿಯಮಿತ ಆರೋಗ್ಯ ತಪಾಸಣೆ ಮತ್ತು ಮಕ್ಕಳಿಗೆ ನಿಗಧಿತ ವೇಳೆಯಲ್ಲಿ ಲಸಿಕೆ ಹಾಕಿಸಬೇಕು. ಹದಿಹರೆಯದ ಹೆಣ್ಣುಮಕ್ಕಳು ಸಕಾಲದಲ್ಲಿ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಿನಂತಿಸಿದರು. ತಾಯAದಿರು ಮಕ್ಕಳಿಗೆ 6 ತಿಂಗಳ ನಂತರ ತಾಯಿಯ ಎದೆಹಾಲಿನ ಜೊತೆಗೆ ಪೂರಕ ಆಹಾರ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಮಕ್ಕಳು ಅಪೌಷ್ಟಿಕತೆಗೆ ಗುರಿಯಾಗಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಡಿಹೆಚ್‌ಓ ಅವರು ಕಿವಿಮಾತು ಹೇಳಿದರು. ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ನಿರ್ದಿಷ್ಟ ಆರೋಗ್ಯ, ಪೌಷ್ಟಿಕಾಂಶದ ಅಗತ್ಯತೆ ಪೂರೈಸಲು ಆಯುಷ್ಮಾನ್ ಆರೋಗ್ಯ ಮಂದಿರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 3ನೇ ಶನಿವಾರ ನಡೆಯುವ ಗ್ರಾಮ ಆರೋಗ್ಯ ಪೌಷ್ಟಿಕ ದಿನಾಚರಣೆಯಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸಿಗುವ ತರಕಾರಿಗಳಿಂದ ತಯಾರಿಸಬಹುದಾದ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿತೆ ಮಾಡಿ ತಾಯಂದಿರಿಗೆ ತಿಳಿಸಲು ಸೂಚಿಸಿದರು. ಆಶಾಕಾರ್ಯಕರ್ತೆಯರು ಪೋಷಣ್ ಮಾಸಾಚರಣೆ ನಿಮಿತ್ತ ವಿವಿಧ ರೀತಿಯ ತಯಾರಿಸಿದ ಪೌಷ್ಠಿಕ ಆಹಾರಗಳನ್ನು ತಾಯಂದಿರಿಗೆ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಮೋಕ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಭಾರತಿ, ಪ್ರಸೂತಿ ತಜ್ಞ ವೈದ್ಯೆ ಡಾ.ವಿಜಯಲಕ್ಷಿö್ಮ, ಎನ್.ಸಿ.ಡಿ ವೈದ್ಯೆ ಡಾ. ಸಿಂಧು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಕಚೇರಿ ಅಧೀಕ್ಷಕ ವೆಂಕಟಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ.ವಿ ಸೇರಿದಂತೆ ವಿವಿಧ ವೃಂದ ಅಧಿಕಾರಿ ಸಿಬ್ಬಂದಿ ವರ್ಗದವರು, ಆಶಾಕಾರ್ಯಕರ್ತೆಯರು, ತಾಯಂದಿರು ಉಪಸ್ಥಿತರಿದ್ದರು. ---------------

ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ-2025; ಅರ್ಹರು ತಪ್ಪದೇ ಪಾಲ್ಗೊಳ್ಳಿ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತಿದ್ದು, ಅರ್ಹ ದೇವದಾಸಿ ಮಹಿಳೆಯರು ನಿಗದಿತ ನಮೂನೆಗಳಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ದೇವದಾಸಿ ಮಹಿಳೆಯರು ಮತ್ತು ಕುಟುಂಬಗಳಿAದ ನಿಗಧಿತ ನಮೂನೆಗಳಲ್ಲಿ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅದೇ ಕಚೇರಿಗೆ ಸಲ್ಲಿಸಬೇಕು. *1984ರ ಮುಂಚೆ ಜನಿಸಿದ ಮಹಿಳೆಯರು ಅರ್ಹರು:* ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ದೇವದಾಸಿಯರ(ಸಮರ್ಪಣಾ ನಿಷೇಧ)ಕಾಯ್ದೆ 1982ರನ್ನು ಜಾರಿಗೆ ತಂದಿದ್ದು, ಈ ಕಾಯ್ದೆಗೆ ದಿನಾಂಕ:11-01-1984ರಲ್ಲಿ ಅಧಿಕೃತವಾಗಿ ಭಾರತದ ರಾಷ್ಟçಪತಿಗಳು ಅಂಕಿತ ನೀಡಿದ್ದು, ಈ ಕಾಯ್ದೆಯು ರಾಜ್ಯದ ವಿಶೇಷ ರಾಜ್ಯ ಪತ್ರದಲ್ಲಿ ದಿನಾಂಕ:31-1-1984ರAದು ಪ್ರಕಟಗೊಂಡಿದೆ. ಹಾಗಾಗಿ ಕರ್ನಾಟಕ ದೇವದಾಸಿ ಸಮರ್ಪಣಾ ನಿಷೇದ ಕಾಯ್ದೆಯನ್ವಯ ಮಾಜಿ ದೇವದಾಸಿ ಮಹಿಳೆಯರು ಮತ್ತು ಕುಟುಂಬದವರು ನಮೂನೆ-1, 2, 3 ರನ್ನು ಭರ್ತಿ ಮಾಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಬರುವಾಗ ಕಾಯ್ದೆಯ ದಿನಾಂಕ: 11-01-1984ರ ಮುಂಚೆ ಜನಿಸಿದ ಮಹಿಳೆಯರು ಮಾತ್ರ ಅರ್ಜಿ ಪಡೆಯತಕ್ಕದ್ದು, ಕಾಯ್ದೆಯ ನಂತರ ಜನಿಸಿರುವ ಮಹಿಳೆಯರ ಅರ್ಜಿಗಳು ಬಂದಲ್ಲಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ಈ ಕಚೇರಿಗೆ ವರದಿ ಸಲ್ಲಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದೆ. ತಪ್ಪಿದ್ದಲ್ಲಿ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಬಂದAತಹ ನಮೂನೆ 1, 2, 3 ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ತಾಲ್ಲೂಕು ಯೋಜನಾ ಅನುಷ್ಠಾನಾಧಿಕಾರಿಗಳು ದೇವದಾಸಿ ಪುನರ್ವಸತಿ ಯೋಜನೆ ಹಾಗೂ ಸಂಬAಧಪಟ್ಟ ವಲಯ ಮೇಲ್ವಿಚಾರಕಿಯರ ಜಂಟಿ ತನಿಖಾ ವರದಿಯೊಂದಿಗೆ ತಾಲ್ಲೂಕು ಮಟ್ಟದ ಮೌಲ್ಯಮಾಪನ ಮತ್ತು ಮೇಲ್ವಿಚಾರಣಾ ಸಮಿತಿಗೆ ಮಂಡಿಸಿ ಸಮಿತಿಯಲ್ಲಿ ಅನುಮೋದಿಸಿ ಅಥವಾ ತಿರಸ್ಕರಿಸಿ ಸಭಾ ನಡವಳಿಗಳೊಂದಿಗೆ ಸಂಬAಧ ಪಟ್ಟ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ಜಿಲ್ಲಾ ಮಟ್ಟದ ಸಮಿತಿಗೆ ಮಂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯ; ಜಿಲ್ಲೆಯಲ್ಲಿ 1.45 ಲಕ್ಷ ಮನೆ ಪೂರ್ಣ, ಶೇ.38 ರಷ್ಟು ಪ್ರಗತಿ | ಸಮೀಕ್ಷೆ ಕಾರ್ಯಕ್ಕೆ ವೇಗ ನೀಡಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯದಲ್ಲಿ ಗುರುತಿಸಲಾದ 3.85 ಲಕ್ಷ ಮನೆಗಳ ಪೈಕಿ 1.45 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಈವರೆಗೆ ಶೇ.38 ರಷ್ಟು ಪ್ರಗತಿಯಾಗಿದ್ದು, ರಾಜ್ಯದ ಕ್ರಮಾಂಕದಲ್ಲಿ 15 ನೇ ಸ್ಥಾನದಲ್ಲಿದ್ದೇವೆ. ಇನ್ನೂ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸಮೀಕ್ಷೆಯ ನೋಡಲ್ ಅಧಿಕಾರಿಗಳು, ವರ್ಚುವಲ್ ಮೂಲಕ ಸಂಡೂರು ತಾಲ್ಲೂಕು ತಹಶೀಲ್ದಾರರೊಂದಿಗೆ ಸಮೀಕ್ಷೆಯ ಪ್ರಗತಿ ಸಭೆ ನಡೆಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯ ಆರಂಭಗೊAಡು 08 ದಿನಗಳಾಗಿವೆ. ಇನ್ನುಳಿದ ದಿನಗಳಲ್ಲಿ ನಿಗದಿತ ಗುರಿ ತಲುಪಲು ಮತ್ತು ಜಿಲ್ಲೆಯನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರಿಸಲು ಸೂಕ್ತ ತಾಂತ್ರಿಕ ಯೋಜನೆ ರೂಪಿಸಿ ಗಣತಿದಾರರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಎಂದು ಹೇಳಿದರು. ಜಿಲ್ಲೆಯಲ್ಲಿ ಕಂಪ್ಲಿ, ಕುರುಗೋಡು, ಸಿರುಗುಪ್ಪ ತಾಲ್ಲೂಕುಗಳು ಸಮೀಕ್ಷಾ ಕಾರ್ಯ ಅಂತ್ಯಕ್ಕೆ ನಿಗದಿತ ಗುರಿ ತಲುಪಲಿವೆ. ಸಂಡೂರು ಮತ್ತು ಬಳ್ಳಾರಿ ತಾಲ್ಲೂಕುಗಳಿಂದ ನಿರೀಕ್ಷೆಗಿಂತ ಫಲಿತಾಂಶ ಲಭಿಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಜೊತೆಗೂಡಿ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಸಂಡೂರು ಭಾಗದಲ್ಲಿ 79 ಸಾವಿರ ಮನೆಗಳ ಪೈಕಿ ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ತಲಾ 10 ಸಾವಿರ ಮನೆಗಳಿದ್ದು, ಅದರಲ್ಲಿ ತೋರಣಗಲ್ಲಿನಲ್ಲಿ ಜಿಂದಾಲ್ ವ್ಯಾಪ್ತಿಯಲ್ಲಿ 6 ಟೌನ್ ಶಿಪ್‌ಗಳಿವೆ. ಇಲ್ಲಿ ಸಮೀಕ್ಷಾ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ ಟೌನ್ ಶಿಪ್ ಗಳಲ್ಲಿ ಶಿಬಿರ (ಕ್ಯಾಂಪ್) ಆಯೋಜಿಸುವ ಮೂಲಕ ಈಗಾಗಲೇ ಗುರುತಿಸಲಾದ ಮನೆಗಳನ್ನು ಸಮೀಕ್ಷಾ ಕಾರ್ಯಕ್ಕೆ ಒಳಪಡುವಂತೆ ತಿಳಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಸಂಡೂರಿನ ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಹೊರ ರಾಜ್ಯದಿಂದ ಬಂದು ಒಂದು ಮನೆಯಲ್ಲಿ 10 ಕ್ಕೂ ಹೆಚ್ಚು ಜನ ವಾಸವಿರುತ್ತಾರೆ. ಅಲ್ಲಿ ಒಬ್ಬರ ಆಧಾರ್ ಕಾರ್ಡ್ ಮಾಹಿತಿ ಪಡೆದುಕೊಂಡು ಗಣತಿ ನಡೆಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಆಸ್ಪದ ನೀಡುವಂತಿಲ್ಲ ಎಂದು ಸಂಡೂರು ತಾಲ್ಲೂಕು ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಪ್ರತಿ ಎರಡು ವಾರ್ಡ್ ಗಳಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಿದೆ. ಆದರೂ ಪ್ರಗತಿ ಕಾಣುತ್ತಿಲ್ಲ. ಅಧಿಕಾರಿಗಳು ನಿಲ್ಯಕ್ಷ ತೋರದೇ ಕಾಳಜಿ ವಹಿಸಿ ಕೆಲಸ ಮಾಡಬೇಕು. ಸ್ಪಂದಿಸದಿರುವ ಸೂಪರ್ ವೈಸರ್ ಗಳ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಒಟ್ಟು 171 ಗಣತಿದಾರರಿದ್ದು, ಅದರಲ್ಲಿ ಕೇವಲ 36 ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಉಳಿದವರು ಸ್ಪಂದಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಅಂತಹವರನ್ನು ಗುರುತಿಸಿ ಅಮಾನತ್ತಿಗೆ ಶಿಫಾರಸ್ಸು ಮಾಡಬೇಕು. ಇನ್ನಿತರೆ ಸಿಬ್ಬಂದಿ ಇದಲ್ಲಿ ಅವರನ್ನು ನಿಯೋಜನೆ ಮಾಡಿಕೊಳ್ಳಬೇಕು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರೊಂದಿಗೆ ಸಮನ್ವತೆ ಸಾಧಿಸಬೇಕು ಎಂದು ತಿಳಿಸಿದರು. *ತಾಲ್ಲೂಕುವಾರು ಪ್ರಗತಿ(ಇಲ್ಲಿಯವರೆಗೆ):* ಬಳ್ಳಾರಿ ತಾಲ್ಲೂಕು: 1.75 ಲಕ್ಷ ಮನೆಗಳ ಪೈಕಿ 53 ಸಾವಿರ ಮನೆ ಪೂರ್ಣ. ಕಂಪ್ಲಿ: 33 ಸಾವಿರ ಮನೆಗಳ ಪೈಕಿ 16 ಸಾವಿರ ಮನೆ ಪೂರ್ಣ. ಕುರುಗೋಡು: 27 ಸಾವಿರ ಮನೆಗಳ ಪೈಕಿ 15 ಸಾವಿರ ಮನೆ ಪೂರ್ಣ. ಸಂಡೂರು: 79 ಸಾವಿರ ಮನೆಗಳ ಪೈಕಿ 27 ಸಾವಿರ ಮನೆ ಪೂರ್ಣ. ಸಿರುಗುಪ್ಪ: 65 ಸಾವಿರ ಮನೆಗಳ ಪೈಕಿ 35 ಸಾವಿರ ಮನೆ ಪೂರ್ಣ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ---------------

ಅ.07 ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೀಗೆ ಹುಣ್ಣಿಮೆ ದಿನದಂದು ಅ.07 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 09 ಗಂಟೆಗೆ ವಾಲ್ಮೀಕಿ ಭವನದ ಆವರಣದಲ್ಲಿರುವ ಶ್ರೀ ವಾಲ್ಮೀಕಿ ಮಹರ್ಷಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಮಹಿಳೆ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ಕೆಸರಕುಣಿ ಕ್ಯಾಂಪ್‌ನ ದುರುಗಮ್ಮ ಗುಡಿ ಹತ್ತಿರದ ನಿವಾಸಿ ಜೆ.ಸುರೇಖ/ಕಾವ್ಯ ಎನ್ನುವ 30 ವರ್ಷದ ಮಹಿಳೆಯು ಜು.15 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್‌ಪೆಕ್ಟರ್ ಮನವಿ ಮಾಡಿದ್ದಾರೆ. *ಮಹಿಳೆಯ ಚಹರೆ:* ಎತ್ತರ 5.3 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಮಹಿಳೆ ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಚೂಡಿದಾರ ಡ್ರೆಸ್ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003, ಸಿರುಗುಪ್ಪ ಉಪ ವಿಭಾಗದ ಡಿಎಸ್‌ಪಿ ದೂ.08396-276000 ಅಥವಾ ಬಳ್ಳಾರಿ ಎಸ್‌ಪಿ ಅವರ ಕಚೇರಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಬಳ್ಳಾರಿ: ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಸೂಚನೆ | ಅಧಿಕಾರಿಗಳು ಜನಪರ ಆಡಳಿತ ಸೇವೆ ನೀಡಬೇಕು

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಜಿಲ್ಲಾಮಟ್ಟದ ಅಧಿಕಾರಿಗಳು ಜನಪರ ಆಡಳಿತ ಸೇವೆ ನೀಡಬೇಕು. ಈ ಮೂಲಕ ಸರ್ಕಾರಕ್ಕೆ ಕೀರ್ತಿ ತರಬೇಕು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು. ಸೋಮವಾರ, ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಶೇ.96.95 ರಷ್ಟು ಅನುಷ್ಠಾನವಾಗಿದ್ದು, ನೂರಕ್ಕೆ ನೂರರಷ್ಟು ಅನುಷ್ಠಾನವಾಗಬೇಕು ಎಂದು ಹೇಳಿದರು. *ಯುವಕರಿಗೆ ಉದ್ಯೋಗವೂ ಕಲ್ಪಿಸಿ:* ರಾಜ್ಯ ಸರ್ಕಾರ ನಿರುದ್ಯೋಗ ಯುವಕ-ಯುವತಿಯರಿಗೆ ಯುವನಿಧಿ ಯೋಜನೆಯಡಿ ಸಹಾಯಧನವೂ ನೀಡುತ್ತಿದೆ. ಇವರಿಗೆ ಖಾಸಗಿ ವಲಯಗಳಲ್ಲಿ ಉದ್ಯೋಗ ಹೊಂದಲು ಕಾಲ-ಕಾಲಕ್ಕೆ ಉದ್ಯೋಗ ಮೇಳ ಆಯೋಜಿಸುವ ಮೂಲಕ ಉದ್ಯೋಗ ಕಲ್ಪಿಸಬೇಕು. ಹೊಸದಾಗಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ ವಿಳಂಬವಾಗುತ್ತಿದ್ದು, ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿಗೆ ನಿರ್ದೇಶನ ನೀಡಿದರು. *ಅಕ್ರಮ ಪಡಿತರ ಸಾಗಾಣಿಕೆಗೆ ಕಡಿವಾಣ ಹಾಕಿ:* ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. *ಬಸ್ ಬೇಡಿಕೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ:* ನಮ್ಮ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆ ‘ಶಕ್ತಿ ಯೋಜನೆ’ಯಡಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಇದರ ಜೊತೆಗೆ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಮನವಿಗಳು ಸಲ್ಲಿಕೆಯಾಗುತ್ತಿದ್ದು, ಈ ಕುರಿತು ಬಸ್ ಗಳ ಬೇಡಿಕೆ ಇದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಿಗೆ ಹೇಳಿದರು. *ಕೆಕೆಆರ್ ಟಿಸಿ ಡಿಸಿ ಅಮಾನತು:* ಕೆಡಿಪಿ ಸಭೆಯಲ್ಲಿ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ, ಪೂರಕ ಮಾಹಿತಿ ನೀಡದೇ ಇರುವುದು ಮತ್ತು ಸಭೆಗೆ ಗೈರಾಗಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆಯ ಕೊರತೆಯಿಲ್ಲ, ಅದೇರೀತಿಯಾಗಿ ನಿಗದಿತ ಗುರಿಗಿಂತ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಕೃಷಿ ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜೆಲ್ಲೆಯ ಎಲ್ಲಾ ತಾಲ್ಲೂಕು ವ್ಯಾಪ್ತಿಯಲ್ಲಿ ರಸಗೊಬ್ಬರ ಪೂರೈಕೆಯಾಗಬೇಕು. ರೈತರಿಗೆ ಬೆಳೆ ವಿಮೆಗೆ ನೋಂದಾಯಿಸಲು ಸೂಚಿಸಬೇಕು. ಬರುವ ಹಿಂಗಾರು ಮತ್ತು ಮುಂಗಾರು ಜೋಳ ಖರೀದಿ ಪ್ರಕ್ರಿಯೆಯಲ್ಲಿ ಅವ್ಯವಹಾರವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. *ಮಹಾನಗರ ಪಾಲಿಕೆ ಹಳೆಯ ತಾಲ್ಲೂಕು ಕಚೇರಿ ಆವರಣಕ್ಕೆ ಸ್ಥಳಾಂತರ:* ಸುಮಾರು 30 ವರ್ಷಗಳ ಹಳೆಯ ಕಟ್ಟಡವಾದ ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಯನ್ನು 2.50 ಎಕರೆ ಪ್ರದೇಶವಿರುವ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಮಾದರಿಯ ಸುಸಜ್ಜಿತ ಪಾಲಿಕೆ ಕಚೇರಿ ನಿರ್ಮಾಣ ಮಾಡಲಾಗುವುದು ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಹೇಳಿದರು. ಇದಕ್ಕೆ ಜಾಗ ಒದಗಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾಪಿದರು. ಹಳೆಯ ಪಾಲಿಕೆ ಕಚೇರಿ ಜಾಗದಲ್ಲಿ ವಾಣಿಜ್ಯ-ವ್ಯಾಪಾರ ಮಳಿಗೆಗಳನ್ನು ನಿರ್ಮಿಸಲಾಗುವುದು. ಹಳೆಯ ಕಚೇರಿ ಆವರಣದಲ್ಲಿರುವ ಪೊಲೀಸ್ ಠಾಣೆ, ಕೃಷಿ ಮತ್ತು ತೋಟಗಾರಿಕೆ ಕಚೇರಿಗಳನ್ನು ನೂತನ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಲಾಗುವುದು ಎಂದರು. *ಆಸ್ಪತ್ರೆಗಳಲ್ಲಿ ಸೌಜನ್ಯದಿಂದ ವರ್ತಿಸಿ:* ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಆಸ್ಪತೆಗಳಿಗೆ ಸಾರ್ವಜನಿಕರು ಬರಲು ಭಯಭೀತರಾಗುತ್ತಿದ್ದಾರೆ. ಸರ್ಕಾರಿ ಆಸ್ಪತೆಗಳಲ್ಲಿ ಜನನ ಪ್ರಮಾಣವೂ ಕುಂಠಿತಗೊಂಡಿದೆ. ಹಾಗಾಗಿ ವೈದ್ಯಾಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಜನಸಾಮಾನ್ಯರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಶಾಸಕರ ಕರೆಗಳಿಗೆ ಸ್ಪಂದಿಸಬೇಕು ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಪ್ರಭಾವಿಗಳಿಂದಲೇ ಸರ್ಕಾರಿ ಭೂಮಿ ಒತ್ತುವರಿಯಾಗುತ್ತಿದ್ದು, ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ನೆರೆಯ ರಾಜ್ಯದಿಂದ ಅಕ್ರಮವಾಗಿ ಸರಬರಾಜಾಗುವ ಸೇಂಧಿ, ಮದ್ಯ ಮತ್ತು ಗಾಂಜಾ, ಮಟ್ಕಾ, ಜೂಜು, ಬೆಟ್ಟಿಂಗ್ ದಂಧೆಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಮೆಗಾಡೈರಿ ನಿರ್ಮಾಣಕ್ಕೆ ಸ್ಥಳ ಗುರುತಾಗಿದ್ದು, ಬೇಕಾದ ಅಗತ್ಯ ಎಲ್ಲಾ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹಾಲು ಉತ್ಪಾದನೆ ಹೆಚ್ಚಳಕ್ಕೆ ಕೆಎಂಎಫ್ ಅಧಿಕಾರಿಗಳು ಕ್ರಮ ವಹಿಸಬೇಕು. ಶಾಲೆಗಳ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣೆಯಾಗಿದೆಯೇ ಎಂಬುದರ ಕುರಿತು ಮೇಲ್ವಿಚಾರಣೆ ನಡೆಸಬೇಕು. ಎಸ್.ಎಸ್.ಎಲ್.ಸಿ ಮತ್ತು ಪಿಯು ಫಲಿತಾಂಶ ಹೆಚ್ಚಳಕ್ಕೆ ಜಿಲ್ಲೆಯನ್ನು ಮೊದಲ ಕ್ರಮಾಂಕದಲ್ಲಿ ಮುಂಚೂಣಿಯಲ್ಲಿರಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕಿದೆ ಎಂದರು. ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಕುರಿತಂತೆ ಪರಿಶೀಲಿಸಿದ ಸಚಿವರು, ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಿದರು. ಈ ವಾರಕ್ಕೆ ಬಳ್ಳಾರಿ ಜಿಲ್ಲೆಯು 18 ನೇ ಸ್ಥಾನದಲ್ಲಿದೆ ಎಂದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳು, ವಸತಿನಿಲಯ ಕಟ್ಟಡಗಳ ಸ್ಥಿತಿ-ಗತಿ ಕುರಿತು ಸಚಿವರು ಚರ್ಚಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ, ಬಳ್ಳಾರಿ ವಲಯ ಐಜಿಪಿ ವರ್ತಿಕಾ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ತಹಶೀಲ್ದಾರರು, ತಾಪಂ ಇಓ ಅಧಿಕಾರಿಗಳು ಉಪಸ್ಥಿತರಿದ್ದರು. ===========

‘ಜನತಾ ದರ್ಶನ’ದಲ್ಲಿ ಒಟ್ಟು 114 ಅರ್ಜಿ ಸಲ್ಲಿಕೆ, ಕೆಲ ಅರ್ಜಿ ಸ್ಥಳದಲ್ಲಿಯೇ ಇತ್ಯರ್ಥ | ಜನರ ದುಃಖ-ದುಮ್ಮಾನ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಸಾರ್ವಜನಿಕರ ದುಃಖ-ದುಮ್ಮಾನ ಆಲಿಸಿದರು. ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿದ್ದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕೆಲವೊಂದನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಚಿಕಿತ್ಸೆ, ಶಿಕ್ಷಣಕ್ಕಾಗಿ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಜಿಲ್ಲೆಯ ತಾಲ್ಲೂಕುಗಳಿಂದ ಆಗಮಿಸಿದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ ಬಳಿ ಅರ್ಜಿ ಸಲ್ಲಿಸಿದರೇ, ಇನ್ನೂ ಕೆಲವರು ನೇರವಾಗಿ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು. ಸ್ವತಃ ಸಚಿವರೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸಹ ಸ್ಥಳದಲ್ಲೇ ಇದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಂಡರು. ಜನಸ್ಪಂದನಾ ಮೂಲಕ ಕೇವಲ ಸಾರ್ವಜನಿಕರ ಅಹವಾಲು ಕೇಳುವುದು ಮಾತ್ರವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಿಗೆ ಭರವಸೆ ಮೂಡಿಸಲಾಯಿತು. ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುತ್ತದೆ. ವಿವಿಧ ಇಲಾಖೆಯ 16 ಕೌಂಟರ್ ಸ್ಥಾಪನೆ : ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ ಒಟ್ಟು 16 ಕೌಂಟರ್ ಗಳನ್ನು ಸ್ಥಾಪಿಸಲಾಗಿತ್ತು. ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಕಂದಾಯ ಇಲಾಖೆ ಸೇರಿದಂತೆ ಭೂದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರೇಷ್ಮೆ ಇಲಾಖೆಗಳ, ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಿವಿಧ ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಕಂಪ್ಯೂಟರ್‌ನಲ್ಲಿ ನಮೂದಿಸಿ ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಯಿತು. ಜನತಾ ದರ್ಶನದಲ್ಲಿ ವಿವಿಧ ತಾಲ್ಲೂಕಿನಿಂದ ಆಗಮಿಸಿದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್‌ಗಳ ಬಳಿ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಒಟ್ಟು 114 ಅರ್ಜಿಗಳನ್ನು ಸ್ವೀಕರಿಸಲಾಯಿತು. ಅವುಗಳಲ್ಲಿ ಕೆಲವು ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಯಿತು. ಈ ವೇಳೆಯಲ್ಲಿ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಅಧ್ಯಕ್ಷರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು. ==========

ಬಳ್ಳಾರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಆಯೋಜನೆ ಕುರಿತಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು. ನಗರದ ಕಪ್ಪಗಲ್ಲು ರಸ್ತೆಯ ಸಂಗನಕಲ್ಲು ಬೆಟ್ಟದ ಬಳಿಯ ಪ್ರದೇಶ, ಹೊರವಲಯದ ಕೊಳಗಲ್ ರಸ್ತೆಯ ವಿಮಾನ ನಿಲ್ದಾಣದ ಪ್ರದೇಶ ಹಾಗೂ ನಗರದ ಹೊರವಲಯದ ಹೊಸಪೇಟೆ ರಸ್ತೆಯ ಶ್ರೀ ಸದ್ಗುರು ಮಹಾದೇವ ತಾತನವರ ಮಠ ಹತ್ತಿರದ ದಾರದ ಮಿಲ್ ಪ್ರದೇಶದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಾ.ಶಿವಲಿಂಗಪ್ಪ ಹಂದ್ಯಾಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಪಾಲಿಕೆಯ ಸದಸ್ಯರು, ಕಸಾಪ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು. =========

ಸೋಮವಾರ, ಸೆಪ್ಟೆಂಬರ್ 29, 2025

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರಿಗೆ ಪ್ರತಿಷ್ಠಿತ ವಿಜ್ಞಾನಿಗಳ ಸ್ಥಾನ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ. ವಿವಿಯ ಗಣಿತಶಾಸ್ತç ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಕೆ.ವಿ ಪ್ರಸಾದ್ ಅವರು ಸತತವಾಗಿ ಐದನೇ ಬಾರಿ ಮತ್ತು ಗಣಿತಶಾಸ್ತç ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಹನುಮೇಶ್ ವೈದ್ಯ ಅವರು ಸತತ ಮೂರನೇ ಬಾರಿ ಹಾಗೂ ರಸಾಯನಶಾಸ್ತç ವಿಭಾಗದ ಪ್ರಾಧ್ಯಾಪಕÀ ಪ್ರೊ.ಕೆ.ಎಸ್ ಲೋಕೇಶ್ ಇದೇ ಮೊದಲ ಬಾರಿಗೆ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಹೆಚ್ ಇಂಡೆಕ್ಸ್, ಇಂಪ್ಯಾಕ್ಟ್ ಫ್ಯಾಕ್ಟರ್, ಸೈಟೇಷನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯವು ಪಟ್ಟಿ ಬಿಡುಗಡೆ ಮಾಡುತ್ತದೆ. ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಹೆಸರುವಾಸಿಯಾಗಿರುವ ಎಲ್ಸ್ವೀಯರ್ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ.2 ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ಸಂಶೋಧನೆಗೆ ಸಂಬAಧಿಸಿದ ವಿವಿಧ ವರ್ಗಗಳಲ್ಲಿ ವಿಂಗಡಿಸಿ ಪಟ್ಟಿ ಅಂತಿಮಗೊಳಿಸಲಾಗಿದೆ. ಮೂವರು ಪ್ರಾಧ್ಯಾಪಕರ ಸಾಧನೆಗೆ ಬಳ್ಳಾರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ ಮುನಿರಾಜು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ ರವಿ, ವಿಶ್ರೀಕೃ ವಿವಿಯ ಕುಲಸಚಿವರಾದ ಸಿ.ನಾಗರಾಜು, ವಿವಿಯ ಪ್ರಾಧ್ಯಾಪಕರುಗಳು, ಸಿಬ್ಬಂದಿ ವರ್ಗ ಹಾಗೂ ಕುಟುಂಬ ವರ್ಗದವರು ಅಭಿನಂದಿಸಿದ್ದಾರೆ. ----------------

ಅ.02 ರಂದು ಮಹಾತ್ಮ ಗಾಂಧೀಜಿಯವರ 156ನೇ ಜಯಂತ್ಯೋತ್ಸವ ಕಾರ್ಯಕ್ರಮ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಅ.02 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ರೈಲು ನಿಲ್ದಾಣ ಎದುರುಗಡೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳ್ಳಾರಿ ಆಕಾಶವಾಣಿ ಉದ್ಘೋಷಕರು ಹಾಗೂ ಉಪನ್ಯಾಸಕರಾದ ಅಮಾತಿ ಬಸವರಾಜ ಅವರು ಮಹಾತ್ಮ ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇತರರು ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಅವರು ತಿಳಿಸಿದ್ದಾರೆ. ------------

ಅ.09 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮವನ್ನು ಅ.09 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಗುವುದು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ತಿಳಿಸಿದ್ದಾರೆ. ---------

ಸೆ.30 ರಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದತೆ ಕುರಿತು ಸಭೆ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 11, 2026 ಕ್ಕೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಪದಾವಧಿ ಮುಕ್ತಾಯಗೊಳ್ಳಲಿದ್ದು, ನವೆಂಬರ್ 01, 2025 ಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ವೇಳಾಪಟ್ಟಿಯನ್ನು ಹೊರಡಿಸಿದ್ದು, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದತೆ ಕುರಿತು ಚರ್ಚಿಸಲು ಸೆ.30 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಕೆಸ್ವಾನ್ ಸಭಾಂಗಣದಲ್ಲಿ ಸಭೆ ಏರ್ಪಡಿಸಲಾಗಿದೆ. ಸಭೆಗೆ ಸಂಬAಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸರ್ಕಾರಿ, ಖಾಸಗಿ ಅನುದಾನಿತ, ಖಾಸಗಿ ಅನುದಾನರಹಿತ ಶಾಲಾ/ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗಳ ಮಾಹಿತಿಯೊಂದಿಗೆ ಹಾಜರಿಯಾಗಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ ಶೇ.20 ರಿಯಾಯಿತಿ ದರದಲ್ಲಿ ಲಿಡ್‌ಕರ್‌ನ ಚರ್ಮವಸ್ತುಗಳ ಮಾರಾಟ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ನಾಡಹಬ್ಬ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 18 ರವರೆಗೆ (20 ದಿನಗಳವರೆಗೆ) ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಲಿಡ್ಕರ್ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ. ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬುಡಾ ಕಾಂಪ್ಲೆಕ್ಸ್ ಶಾಪ್ ನಂ.24 ರ ಲಿಡ್ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಮಾರಾಟ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.08392-271741, ಮೊ.9844667691 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಶನಿವಾರ, ಸೆಪ್ಟೆಂಬರ್ 27, 2025

ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ | ಪ್ರವಾಸಿ ತಾಣಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸೋಣ: ಮುಂಡರಗಿ ನಾಗರಾಜ

ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ): ನಮ್ಮ ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘ, ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಸಂಡೂರು ಡೈರೀಸ್ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ” ಎಂಬ ಸಂದೇಶದಡಿಯಲ್ಲಿ ನಗರದ ಐತಿಹಾಸಿಕ ಕೋಟೆ ಮುಂಭಾಗದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯವು ಹಲವಾರು ಐತಿಹಾಸಿಕ ಪ್ರವಾಸಿ ತಾಣಗಳು ಮತ್ತು ವಿಸ್ಮಯಕಾರಿ ತಾಣಗಳನ್ನು ಹೊಂದಿದೆ. ವಿಶ್ವ ವಿಖ್ಯಾತ ಹಂಪಿ ಹಾಗೂ ತುಂಗಭದ್ರಾ ಡ್ಯಾಂ ಪ್ರವಾಸಿ ತಾಣಗಳು ಇದೀಗ ನೆರೆಯ ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟಿವೆ. ಆದರೂ ನಮ್ಮ ಬಳ್ಳಾರಿ ಜಿಲ್ಲೆಯಲ್ಲಿ ಸಂಡೂರಿನ ಕುಮಾರಸ್ವಾಮಿ ದೇವಸ್ಥಾನ, ಸ್ವಾಮಿಮಲೈ ಅರಣ್ಯ ಕ್ಷೇತ್ರ, ನಾರಿಹಳ್ಳ ಜಲಾಶಯ, ವಿಶ್ವದ 2 ನೇ ಏಕಶಿಲಾ ಬೆಟ್ಟ ಬಳ್ಳಾರಿಯ ಐತಿಹಾಸಿಕ ಕೋಟೆ, ಮಿಂಚೇರಿ ಬೆಟ್ಟ, ಸಂಗನಕಲ್ಲು ಗುಡ್ಡ, ಸಿರುಗುಪ್ಪದ ತೆಕ್ಕಲಕೋಟೆ, ಕೆಂಚನಗುಡ್ಡ, ಕುರುಗೋಡಿನ ದೊಡ್ಡ ಬಸವೇಶ್ವರ ದೇವಸ್ಥಾನ ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಜನರು ಈ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಪ್ರವಾಸಿ ತಾಣಗಳನ್ನು ವೀಕ್ಷಿಸಬೇಕು ಎಂದರು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಮ್ಮ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಒಂದು ದಿನದ ಪ್ರವಾಸ ಕರೆದುಕೊಂಡು ಹೋಗಿ ಐತಿಹಾಸಿಕ ಸ್ಥಳಗಳ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದರೆ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುತ್ತದೆ ಎಂದು ಹೇಳಿದರು. ಇಂದಿನ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುಶ್ಚಟಕ್ಕೆ ಒಳಗಾಗದೇ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದರ ಜೊತೆಗೆ ಪ್ರವಾಸಿ ತಾಣಗಳನ್ನು ವೀಕ್ಷಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ಸದಸ್ಯ ಅಹೀ ರಾಜ್.ಎಂ ಅವರು ಮಾತನಾಡಿ, ಐದು ಸಾವಿರ ವಷÀðಗಳ ಇತಿಹಾಸ ಹೊಂದಿದ ಸಂಗನಕಲ್ಲು ಗುಡ್ಡ ಪ್ರದೇಶವು ನವಶಿಲಾಯುಗದ ಕುರುಹುಗಳ ತಾಣವಾಗಿದ್ದು, ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ ಜನವಸತಿ ಪ್ರದೇಶವಾಗಿತ್ತು ಎಂಬ ಇತಿಹಾಸವನ್ನು ಹೊಂದಿದೆ. ಇಂತಹ ಐತಿಹಾಸಿಕ, ನೈಸರ್ಗಿಕ ತಾಣಗಳ ವೀಕ್ಷಣೆಯಿಂದ ಇತಿಹಾಸದ ಕುರಿತು ಕುತೂಹಲ ಸೃಷ್ಟಿಯಾಗಿ ಜ್ಞಾನ ವೃದ್ಧಿಯಾಗಲಿದೆ ಎಂದು ಹೇಳಿದರು. ಇದೇ ವೇಳೆ ಪ್ರವಾಸಿ ಮಿತ್ರ ರಕ್ಷಣಾ ಸಿಬ್ಬಂದಿಗಳಿಗೆ ಪ್ರಶಂಸೆ ಪತ್ರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಗಣ್ಯರಿಗೆ ನೆನಪಿನ ಕಾಣಿಕೆಯನ್ನು ನೀಡÀಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪೋಟೋ ಪಾಯಿಂಟ್ ಮತ್ತು ಕೋಟೆ ಮುಂಭಾಗ ನಿಂತು ಪೋಟೋ ತೆಗೆದುಕೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ಜಿತೇಂದ್ರ, ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸಪ್ಪ.ಕೆ, ಪ್ರವಾಸೋದ್ಯಮ ಇಲಾಖೆಯ ಹಿರಿಯ ಪ್ರವಾಸಿ ಪ್ರವರ್ತಕ ಶ್ರೀಹರಿ ಮಾಸನೂರು, ಪ್ರವಾಸಿ ಮಿತ್ರರು ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇತರರು ಉಪಸ್ಥಿತರಿದ್ದರು. -------------

ಶುಕ್ರವಾರ, ಸೆಪ್ಟೆಂಬರ್ 26, 2025

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಸಭೆ ನಡೆಸಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ಸೂಚನೆ | ರಜೆ ಇಲ್ಲ, ಸಮೀಕ್ಷಾದಾರರು ಸಮೀಕ್ಷೆಯಲ್ಲಿ ಸಕ್ರೀಯವಾಗಿ ತೊಡಗಬೇಕು

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊAಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಗಣತಿದಾರರು, ಸೂಪರ್ ವೈಸರ್ ಗಳು, ಮಾಸ್ಟರ್ ಟ್ರೆöÊರ‍್ಸ್ ಹಾಗೂ ಬಿಇಒಗಳು ಕಡ್ಡಾಯವಾಗಿ ಭಾಗವಹಿಸಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂಗ್ರ ಪ್ರಸಾದ್.ಕೆ ಅವರು ಹೇಳಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದ ಪ್ರಗತಿಯ ಸಭೆ ನಡೆಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ವರ್ಚುವಲ್ ಸಭೆ ಜರುಗಿದ್ದು, ನೆರೆ-ಹೊರೆಯ ಜಿಲ್ಲೆಗಳಿಗಿಂತ ನಮ್ಮ ಜಿಲ್ಲೆಯು ಸಮೀಕ್ಷಾ ಕಾರ್ಯದಲ್ಲಿ ಹಿಂದುಳಿದಿದೆ. ಹಾಗಾಗಿ ಸಮೀಕ್ಷಾ ಕಾರ್ಯಕ್ಕೆ ಕಾಲಾವಕಾಶ ಕಡಿಮೆ ಇದ್ದು, ಎಲ್ಲಾ ಸಮೀಕ್ಷಾದಾರರು ಹೆಚ್ಚಿನ ಆಸಕ್ತಿ ವಹಿಸುವ ಮೂಲಕ ಸಮೀಕ್ಷೆಗೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯ-ಕ್ಷಮತೆ ತೋರಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ನೇಮಿಸಿದ ಬಹಳಷ್ಟು ಗಣತಿದಾರರು(ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು) ಕ್ಷೇತ್ರಮಟ್ಟದಲ್ಲಿ ಹೋಗಿ ಮೊಬೈಲ್ ಮೂಲಕ ಲಾಗಿನ್ ಆಗದೇ ಇರುವುದು, ಸಮೀಕ್ಷೆಗೆ ತೆರಳದೇ ಇರುವುದು ಕಂಡುಬAದಿದ್ದು, ಈ ಕೂಡಲೇ ಅವರನ್ನು ಸಂಪರ್ಕಿಸಿ, ನಿರ್ದೇಶನ ನೀಡಬೇಕು. ಇಲ್ಲವಾದಲ್ಲಿ ಅಂತಹವರ ಮೇಲೆ ಕ್ರಮ ಜರುಗಿಸಬೇಕು ಎಂದು ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ಸೂಚಿಸಿದರು. *ಗ್ರಾಮ ಸಹಾಯಕರಿಂದ ವಿಶೇಷ ಸಹಾಯ:* ಸಮೀಕ್ಷಾ ಕಾರ್ಯದಲ್ಲಿ ಮನೆ ಗುರುತಿಗೆ ಸಂಬAಧಿಸಿದAತೆ, ಹಳ್ಳಿಯಿಂದ ಹಳ್ಳಿಗೆ ಸಂಚಾರಕ್ಕೆ ಸಮಸ್ಯೆಯಾದಲ್ಲಿ, ಊಟ, ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಗೆ ಆಯಾ ಗ್ರಾಮಗಳ ಗ್ರಾಮ ಸಹಾಯಕರು ಸಹಾಯ ಮಾಡಲಿದ್ದಾರೆ ಎಂದರು. *ತಾAತ್ರಿಕ ದೋಷ ಕಂಡುಬAದಲ್ಲಿ ತಿಳಿಸಿ:* ಸಮೀಕ್ಷಾ ಕಾರ್ಯಕ್ಕೆ ತೆರಳುವ ಗಣತಿದಾರರು ಮೊಬೈಲ್ ಲಾಗಿನ್ ಆಗುವ ಸಂದರ್ಭದಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷ ಕಂಡುಬAದಲ್ಲಿ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. *ರಜೆ ಇಲ್ಲ:* ಹಿಂದುಳಿದ ವರ್ಗಗಳ ಸಮೀಕ್ಷಾ ಕಾರ್ಯ ಮುಗಿಯುವವರೆಗೆ ಸಮೀಕ್ಷಾದಾರರಿಗೆ ಹಬ್ಬ, ಶಾಲಾ ರಜೆ ಸೇರಿದಂತೆ ಯಾವುದೇ ರೀತಿಯ ರಜೆ ಇಲ್ಲ. ಪ್ರತಿಯೊಬ್ಬರೂ ತಪ್ಪದೇ ಹಾಜರಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. *ಗ್ರಾಪಂ ಮಟ್ಟದಲ್ಲಿ ಶಿಬಿರ:* ಹಳ್ಳಿಗಳಲ್ಲಿ ಲಾಗಿನ್ ಗೆ ನೆಟ್ ವರ್ಕ್ ಸಮಸ್ಯೆ ಕಂಡುಬರುವ ಹಳ್ಳಿಗಳನ್ನು ಗುರುತಿಸಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಹಿಂದುಳಿದ ವರ್ಗಗಳ ಆಯೋಗದ ನಿರ್ದೇಶನದಂತೆ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಲಾಗುತ್ತದೆ. ಇದಕ್ಕೆ ಬೇಕಾದ ಸಿಬ್ಬಂದಿ, ಸಾಮಾಗ್ರಿಗಳನ್ನು ಒದಗಿಸಿಕೊಡಲಾಗುವುದು. ಕುಟುಂಬಸ್ಥರು ಶಿಬಿರದಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿಕೊಳ್ಳಲು ಅನುಕೂಲವಾಗಲಿದೆ. ಶಿಬಿರ ಆಯೋಜನೆ ಮಾಹಿತಿಯನ್ನು ಆಯಾ ಗ್ರಾಮಸ್ಥರಿಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದರು. ಸಂಡೂರು ತಾಲ್ಲೂಕಿನ ತೋರಣಗಲ್ಲು ಗ್ರಾಮದ ಜಿಂದಾಲ್ ಟೌನ್ ಶಿಪ್, ವಡ್ಡು, ಶಂಕರ ಗುಡ್ಡ ಕಾಲೋನಿಗಳಲ್ಲಿ ಸಮೀಕ್ಷಾದಾರರಿಗೆ ಪ್ರವೇಶ ನೀಡದಿರುವುದರ ಕುರಿತು ಕಂಪನಿಯ ಮುಖ್ಯಸ್ಥರಿಗೆ ಆದೇಶ ರವಾನಿಸಿ ಎಂದು ಸಂಡೂರು ತಹಶೀಲ್ದಾರರಿಗೆ ಸೂಚಿಸಿದರು. ಪ್ರತಿದಿನ ಬಿಇಒ ಗಳು ಸೂಪರ್ ವೈಸರ್ ಗಳ ಮೇಲ್ವಿಚಾರಣೆ ನಡೆಸಬೇಕು. ಪ್ರತಿಯೊಬ್ಬರ ಸಹಕಾರ-ಸಹಭಾಗಿತ್ವದಿಂದ ಜಿಲ್ಲೆಯನ್ನು ಟಾಪ್-05 ಜಿಲ್ಲೆಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರಿಸುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದರು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಎಂಎಫ್ ವಿಶೇಷ ಅಧಿಕಾರಿ ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವರ್ಚುವಲ್ ಮೂಲಕ ಎಲ್ಲಾ ತಾಲ್ಲೂಕು ತಹಶೀಲ್ದಾರರು, ಇಒ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸಿಡಿಪಿಒ ಹಾಗೂ ಇನ್ನೀತರರು ಹಾಜರಿದ್ದರು. ------------------

ವಾತಾವರಣ ಬದಲಾವಣೆ; ಸಾಂಕ್ರಾಮಿಕ ಕಾಯಿಲೆಗಳಿಂದ ಎಚ್ಚರ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್‌ಬಾಬು

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಎಚ್ಚರವಹಿಸಲು ಅರಿವು ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಶುಕ್ರವಾರ, ಬಳ್ಳಾರಿ ತಾಲ್ಲೂಕಿನ ಶಿಡಿಗಿನಮೊಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯಾಧಿಕಾರಿಗಳು, ಆಶಾಕಾರ್ಯಕರ್ತೆಯರೊಂದಿಗೆ ಚರ್ಚಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ನೀರು ನಿಲ್ಲುವುದರಿಂದ ಸೊಳ್ಳೆಗಳ ತಾಣಗಳಾಗುತ್ತವೆ. ಇದರಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಬೇದಿ,ü ಟೈಫಾಯಿಡ್ ಮತ್ತು ಸೊಳ್ಳೆಯಿಂದ ಹರಡುವ ಕಾಯಿಲೆಗಳಾದ ಡೆಂಗ್ಯೂ, ಚಿಕುನ್‌ಗುನ್ಯಾ, ಮಲೇರಿಯಾ ಮುಂತಾದ ಕಾಯಿಲೆಗಳು ಕಂಡುಬರುವ ಸಾಧ್ಯತೆಗಳು ಇವೆ ಎಂದು ತಿಳಿಸಿದರು. ಜ್ವರ ಪ್ರಕರಣಗಳ ಪತ್ತೆಗಾಗಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಕೈಗೊಳ್ಳುವ ಸೌಲಭ್ಯ ಕಲ್ಪಿಸಲಾಗಿದೆ. ಸೊಳ್ಳೆಯ ಕಚ್ಚುವಿಕೆಯಿಂದ ಹರಡುವ ಡೆಂಗ್ಯೂ, ಚಿಕಿನ್ ಗುನ್ಯಾ, ಮಲೇರಿಯಾ ಮುಂತಾದವುಗಳ ನಿಯಂತ್ರಣ ಜೊತೆಗೆ ಟೈಪಾಯಿಡ್ ಗುರ್ತಿಸುವಿಕೆಯನ್ನು ಸಹ ಮಾಡಲಾಗುತ್ತಿದ್ದು, ಯಾವುದೇ ಜ್ವರವಿದ್ದರೂ ಸಹ ನಿರ್ಲಕ್ಷ ಮಾಡದೇ ಆಸ್ಪತ್ರೆಗೆ ಭೇಟಿ ನೀಡಿ ಜ್ವರದ ಸ್ವರೂಪವನ್ನು ತಿಳಿದುಕೊಂಡು ಚಿಕಿತ್ಸೆ ಪಡೆಯಲು ಮುಂದೆ ಬರಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು. ವಾತಾವರಣ ಬದಲಾವಣೆಯು ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಸೊಳ್ಳೆಗಳು ರೋಗವಾಹಕಗಳ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ನೀರು ಮತ್ತು ಆಹಾರದಿಂದ ಹರಡುವ ರೋಗಗಳಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಮನುಷ್ಯನ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಎಂದರು. ಮಳೆಯಿAದ ಕುಡಿಯುವ ನೀರು ಕಲುಷಿತವಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಕುದಿಸಿ ಆರಿಸಿ ನೀರು ಕುಡಿಯಬೇಕು. ವಾತಾವರಣ ಬದಲಾವಣೆಯು ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾತಾವರಣ ಬದಲಾವಣೆ ಹಿನ್ನಲೆ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿರುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಡಿಎನ್‌ಒ ಗಿರೀಶ್, ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಆಶಾಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು. --------------