ಶುಕ್ರವಾರ, ಸೆಪ್ಟೆಂಬರ್ 19, 2025

ಬಳ್ಳಾರಿ: 10ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ

ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ): ಜಿಲ್ಲಾ ಕೇಂದ್ರದಲ್ಲಿ 10 ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆಯ ಅಂಗವಾಗಿ ‘ಜನರಿಗಾರಿ ಮತ್ತು ಜಗತ್ತಿಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆ.20 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ರೂಪನಗುಡಿ ರಸ್ತೆಯ ರಯಾನ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಉಚಿತ ರಕ್ತಪರೀಕ್ಷೆ, ನುರಿತ ಆಯುರ್ವೇದ ವೈದ್ಯರಿಂದ ಉಚಿತ ತಪಾಸಣೆ, ಆಪ್ತಸಮಾಲೋಚನೆ ಹಾಗೂ ಮಧುಮೇಹ ಆಹಾರ ಪದ್ಧತಿ ಹಾಗೂ ಉಚಿತ ಔಷಧಿ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು. ಸೆ.23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ 10 ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ