ಗುರುವಾರ, ಸೆಪ್ಟೆಂಬರ್ 11, 2025
ಸೆ.12 ರಂದು ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’ ಅಂಗವಾಗಿ ಜಾಗೃತಿ ಜಾಥ
ಬಳ್ಳಾರಿ,ಸೆ.11(ಕರ್ನಾಟಕ ವಾರ್ತೆ):
ಜಿಲ್ಲಾ ಕೇಂದ್ರದಲ್ಲಿ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’ ಅಂಗವಾಗಿ “ಆತ್ಮಹತ್ಯೆ ನಿರೂಪಣೆಯನ್ನು ಬದಲಾಯಿಸುವುದು” ಎಂಬ ಘೋಷಣೆಯೊಂದಿಗೆ ಸೆ.12 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜಾಗೃತಿ ಜಾಥ ಏರ್ಪಡಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಜಾಥಾ ಗೆ ಚಾಲನೆ ನೀಡುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ರೋಹವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಹಾಗೂ ಇತರರು ಭಾಗವಹಿಸುವರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್.ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ ಅವರು ಸ್ವಾಗತ ಹಾಗೂ ಕಾರ್ಯಕ್ರಮ ನಿರೂಪಿಸುವರು ಎಂದು ಪ್ರಕಟಣೆ ತಿಳಿಸಿದೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ