ಶುಕ್ರವಾರ, ಸೆಪ್ಟೆಂಬರ್ 12, 2025
ಸೆ.17 ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸೆ.17 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ಜಿಲ್ಲಾ ವಿಶ್ವಕರ್ಮ ವಿಕಾಸ್ ವೇದಿಕೆ ಅಧ್ಯಕ್ಷ ಚಂದ್ರಕಾAತ್ ಸ.ಸೋನಾರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೂಡ್ಲಿಗಿ ತಾಲ್ಲೂಕಿನ ಖಾನಹೊಸಹಳ್ಳಿಯ ನಿವೃತ್ತ ಪ್ರಾಂಶುಪಾಲರು ಹಾಗೂ ಸಾಹಿತಿ ಡಾ.ವೃಷಭೇಂದ್ರಚಾರ್ಯ ಅರ್ಕಸಾಲಿ ಅವರು ಜಯಂತಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸಂಡೂರು ತಾಲ್ಲೂಕಿನ ತೋರಣಗಲ್ ನ ಕೆ.ಕೊಟ್ರೇಶ್ ತಂಡದಿAದ ಭಕ್ತಿ ಸಂಗೀತ ಇರಲಿದೆ.
*ಮೆರವಣಿಗೆ:*
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಬೆಂಗಳೂರು ರಸ್ತೆ- ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ- ತೇರು ಬೀದಿ- ಹೆಚ್‌ಆರ್ ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್.ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ