ಮಂಗಳವಾರ, ಸೆಪ್ಟೆಂಬರ್ 16, 2025
ವಿಎಸ್‌ಕೆ ವಿವಿ: ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವತಿಯಿಂದ ಸೆ.17 ರಂದು ಬೆಳಿಗ್ಗೆ 8 ಗಂಟೆಗೆ ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಬೇಡ್ಕರ್ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲಿಕಾ ಎಸ್.ಘಂಟಿ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸುವರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ) ನಾಗರಾಜು.ಸಿ., ಕುಲಸಚಿವ(ಮೌಲ್ಯಮಾಪನ) ಡಾ.ಸಾಲಿ ಎನ್.ಎಂ., ಹಣಕಾಸು ಅಧಿಕಾರಿ ನಾಗರಾಜ, ಕಲಬುರಗಿಯ ಕ.ಕ.ಅ.ಮಂಡಳಿ ಸದಸ್ಯರು ಮತ್ತು ಸಹಾಯಕ ಪ್ರಾಧ್ಯಾಪಕ ರಾಜೇಂದ್ರ ಪ್ರಸಾದ್ ಎನ್.ಎಲ್ ಸೇರಿದಂತೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಲ್ಲಾ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ್ ಪರಿಷತ್ ಸದಸ್ಯರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಕಾರ್ಯಕ್ರಮ ಸಂಯೋಜಕ ಡಾ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ