ಶುಕ್ರವಾರ, ಸೆಪ್ಟೆಂಬರ್ 12, 2025

ಬಳ್ಳಾರಿ ಜಿಲ್ಲಾಡಳಿತದಿಂದ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಸೆ.17 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸುವರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಕಾರ್ಯಕ್ರಮ ಕುರಿತು ವಿಶೇಷÀ ಉಪನ್ಯಾಸ ನೀಡುವರು. ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ